ಧರ್ಮಸ್ಥಳದ ವಿರುದ್ಧದ ಆರೋಪಗಳ (Dharmasthala case) ಕುರಿತು ಎಸ್.ಐ.ಟಿ (SIT) ಹಲವು ಆಯಾಮಗಳಲ್ಲಿ ವಿಚಾರಣೆ ನಡೆಸುತ್ತಿದೆ. ಒಂದೆಡೆ ಸೌಜನ್ಯ ಮಾವ ವಿಠ್ಠಲ ಗೌಡ ಹೇಳಿಕೆಯ ಅನ್ವಯ ಬಂಗ್ಲೆಗುಡ್ಡದಲ್ಲಿ ಈಗಾಗಲೇ ಶೋಧನೆ ನಡೆಸಿದೆ. ಮತ್ತೊಂದೆಡೆ ಈಗ ಮಹೇಶ್ ಶೆಟ್ಟಿ ತಿಮರೋಡಿ (Mahesh shetty thimarodi) ಮನೆಗೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿದ್ದಾರೆ.

ಹೌದು, ಪೊಲೀಸರು ಭೇಟಿ ನೀಡಿದ ವೇಳೆ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಇಲ್ಲದ ಕಾರಣ, ಅವರ ಮನೆಯ ಗೋಡೆಗೆ ನೋಟಿಸ್ ಅಂಟಿಸಲಾಗಿದೆ. ಧರ್ಮಸ್ಥಳ ಪ್ರಕರಣದಲ್ಲಿ ಎಸ್.ಐ.ಟಿ ವಿಚಾರಣೆಗೆ ಹಾಜರಾಗುವಂತೆ ಈ ನೋಟೀಸ್ ನಲ್ಲಿ ಸೂಚಿಸಲಾಗಿದೆ.

ಹೀಗಾಗಿ ಇದೇ ಸೆ.21ಕ್ಕೆ ಎಸ್.ಐ.ಟಿ ಠಾಣೆಗೆ ಆಮಗಿಸಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಈ ಹಿಂದೆ ಎಸ್.ಐ.ಟಿ ಅಧಿಕಾರಿಗಳು ಮಹೇಶ್ ಶೆಟ್ಟಿ ತಿಮರೋಡಿ ಅವರ ಮನೆಯಲ್ಲಿ ಶೋಧ ನಡೆಸಿದ ವೇಳೆ ಅಕ್ರಮ ಶಸ್ತ್ರಾಸ್ತ್ರ ಪತ್ತೆಯಾಗಿತ್ತು.ಹೀಗಾಗಿ ನೋಟಿಸ್ ಜಾರಿಗೊಳಿಸಲಾಗಿದೆ.






