ಮಾಲಿವುಡ್ನ ಸೂಪರ್ಸ್ಟಾರ್ ದುಲ್ಕರ್ ಸಲ್ಮಾನ್ ಅಭಿನಯದ ಸೀತಾ ರಾಮಂ ಚಿತ್ರ ಬಿಡುಗಡೆಯ ನಂತರ ಸಾಕಷ್ಟು ಸದ್ದು ಮಾಡಿತ್ತು. ಇದೀಗ ಈ ಚಿತ್ರದ ಹಿಂದಿ ಅವತರಣಿಕೆ ಬಿಡುಗಡೆಗೆ ಸಜ್ಜಾಗಿದೆ.
ವರಮಹಾಲಕ್ಷ್ಮೀ ಹಬ್ಬದ ದಿನದಂದು ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಭಾಷೆಗಳಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರ ಪ್ರೇಕ್ಷಕರ ಮನ ಗೆಲುವಲ್ಲಿ ಯಶಸ್ವಿಯಾಗಿತ್ತು.
ಈ ಕುರಿತು ಟ್ವೀಟ್ ಮಾಡಿರುವ ಚಿತ್ರದ ನಾಯಕ ನಟ ದುಲ್ಕರ್ ಸಲ್ಮಾನ್ ಚಿತ್ರದ ಹಿಂದಿ ಅವತರಣಿಕೆಯೂ ಸೆಪ್ಟೆಂಬರ್ 2ರಂದು ಬಿಡುಯಾಗುತ್ತಿದೆ ಎಂದು ಹಿಂದಿ ಟ್ರೈಲರ್ ಬಿಡುಗಡೆ ಮಾಡಿ ತಿಳಿಸಿದ್ದಾರೆ.
ಸೀತಾ ರಾಮಂ ಚಿತ್ರವನ್ನ ಹನು ರಾಘವಪುಡಿ ನಿರ್ದೇಶನ ಮಾಡಿದ್ದು ದುಲ್ಕರ್ಗೆ ಜೋಡಿಯಾಗಿ ಮೃಣಾಲ್ ಠಾಕೂರ್ ಹಾಗೂ ರಶ್ಮಿಕಾ ಮಂದಣ್ಣ ಅಭಿನಯಿಸಿದ್ದಾರೆ.