• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಘರ್ ವಾಪ್ಸಿ: ಟಿಎಂಸಿಗೆ ಮರಳಿದ ಬಿಜೆಪಿ ಶಾಸಕ

ಪ್ರತಿಧ್ವನಿ by ಪ್ರತಿಧ್ವನಿ
August 30, 2021
in ದೇಶ
0
ಘರ್ ವಾಪ್ಸಿ: ಟಿಎಂಸಿಗೆ ಮರಳಿದ ಬಿಜೆಪಿ ಶಾಸಕ
Share on WhatsAppShare on FacebookShare on Telegram

ಇತ್ತೀಚಿಗೆ ಪಶ್ಚಿಮ ಬಂಗಾಳದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದ ತನ್ಮಯ್ ಘೋಷ್, ಟಿಎಂಸಿ ಸೇರಿದ್ದಾರೆ. ಸೋಮವಾರದಂದು ಬಿಜೆಪಿ ತೊರೆದು ಅಧಿಕೃತವಾಗಿ ಟಿಎಂಸಿಯ ಧ್ವಜವನ್ನು ಸ್ವೀಕರಿಸಿದ್ದಾರೆ. ಇದರೊಂದಿಗೆ ತನ್ಮಯ್ ಬಿಜೆಪಿ ತೊರೆದ ಎರಡನೇ ಶಾಸಕರಾಗಿದ್ದಾರೆ.

ADVERTISEMENT

ಪಶ್ಚಿಮ ಬಂಗಾಳದ ಬಿಶ್ನುಪುರ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ತನ್ಮಯ್ ಅವರು ಬಿಜೆಪಿ ಟಿಕೆಟ್ ಪಡೆದಿದ್ದರು. ಚುನಾವಣೆಗೂ ಮುನ್ನ ಟಿಎಂಸಿಯಲ್ಲೇ ಇದ್ದ ತನ್ಮಯ್, ಚುನಾವಣೆ ಸಮೀಪಿಸುತ್ತಿದ್ದಂತೆಯೇ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಈಗ ಹಿರಿಯ ಟಿಎಂಸಿ ನಾಯಕ ಹಾಗೂ ಸಚಿವ ಬ್ರಾತ್ಯ ಬಸು ನೇತೃತ್ವದಲ್ಲಿ ಮತ್ತೆ ಟಿಎಂಸಿಗೆ ಸೇರ್ಪಡೆಯಾಗಿದ್ದಾರೆ.

ಜೂನ್ ತಿಂಗಳಲ್ಲಿ ಕೃಷ್ಣನಗರ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಹಿಂದೆ ಟಿಎಂಸಿಯಲ್ಲಿ ಇದ್ದಂತಹ ಹಿರಿಯ ರಾಜಕಾರಣಿ ಮುಕುಲ್ ರಾಯ್ ಅವರು ಪಕ್ಷಕ್ಕೆ ಮರಳಿದ್ದರು. ಒಂದು ಕಾಲದಲ್ಲಿ ಟಿಎಂಸಿಯಲ್ಲಿ ಮಮತಾ ಬ್ಯಾನರ್ಜಿ ಬಳಿಕ ಅತೀ ಹೆಚ್ಚು ಮನ್ನಣೆ ಪಡೆದ ನಾಯಕರಾಗಿದ್ದ ಮುಕುಲ್ ರಾಯ್ 2017ರಲ್ಲಿ ಬಿಜೆಪಿ ಸೇರಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಸೋಲಿನ ಬಳಿಕ ಮತ್ತೆ ಟಿಎಂಸಿಗೆ ಮರಳಿದ್ದಾರೆ.

ಚುನಾವಣೆಯ ಫಲಿತಾಂಶ ಘೋಷಿಸುವ ವೇಳೆ 77 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿಯ ಬಲ ಈಗ 73ಕ್ಕೆ ಕುಗ್ಗಿದೆ. ಲೋಕಸಭಾ ಸದಸ್ಯರಾಗಿದ್ದುಕೊಂಡು ವಿಧಾನಸಭೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಇಬ್ಬರು ನಾಯಕರು, ತಮ್ಮ ವಿಧಾನಸಭಾ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಮುಕುಲ್ ರಾಯ್ ಹಾಗೂ ತನ್ಮಯ್ ಘೋಷ್ ಟಿಎಂಸಿಗೆ ಮರಳಿದ್ದಾರೆ.

ಇವರಿಬ್ಬರು ಮಾತ್ರವಲ್ಲದೇ, ಬಿಜೆಪಿಯ ಇತರೆ ಶಾಸಕರು ಕೂಡಾ ಟಿಎಂಸಿ ಪಕ್ಷದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಮಮತಾ ಬ್ಯಾನರ್ಜಿ ಅನುಮತಿ ಸಿಕ್ಕ ಕ್ಷಣವೇ ಟಿಎಂಸಿಗೆ ಸೇರುವ ಅಭಿಲಾಷೆ ಹೊಂದಿದ್ದಾರೆ ಎಂದು ಟಿಎಂಸಿ ಮೂಲಗಳು ತಿಳಿಸಿವೆ. ಇನ್ನು ಚುನಾವಣಾ ಸಮಯದಲ್ಲಿ ಟಿಎಂಸಿ ತೊರೆದು ಬಿಜೆಪಿ ಸೇರಿದ್ದವರನ್ನು ವಾಪಾಸ್ ಕರೆಸಿಕೊಳ್ಳಲಾಗುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಹೇಳಿದ್ದರೂ, ತನ್ಮಯ್ ಘೋಷ್ ಅವರಿಗೆ ಅವಕಾಶ ನೀಡಿದ್ದರಿಂದ ಉಳಿದವರಲ್ಲಿಯೂ ಟಿಎಂಸಿ ಸೇರುವ ಆಸೆ ಚಿಗುರೊಡೆದಿದೆ.

Tags: Amit ShahBJPMamata BanerjeeTMC PartyWest Bengalಕೃಷ್ಣನಗರತನ್ಮಯ್ನರೇಂದ್ರ ಮೋದಿಬಿಜೆಪಿಬಿಶ್ನುಪುರ್
Previous Post

ತಾಲಿಬಾನ್ ನೀಡಿದ ಗಡುವು ಅಂತ್ಯವಾಗುವ ವೇಳೆ ಚುರುಕು ಪಡೆದ ಸ್ಥಳಾಂತರ ಕಾರ್ಯಾಚರಣೆ

Next Post

ಬೆಂಗಳೂರು ಮೆಟ್ರೋ: ನೇರಳೆ ಮಾರ್ಗ ಕೆಂಗೇರಿವರೆಗೂ ವಿಸ್ತರಣೆ: ನೀವು ತಿಳಿದುಕೊಳ್ಳಬೇಕಾದದ್ದು ಏನು ಗೊತ್ತೇ?

Related Posts

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..
Top Story

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

by ಪ್ರತಿಧ್ವನಿ
April 30, 2026
0

ಹಾವೇರಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿ ಆಗುವ ಆಸೆ ಇದೆ ಅಂದಿದ್ದಾರೆ ಮೇ 4 ರ ನಂತರ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಇರುತ್ತದೆಯೋ ಇಲ್ವವೊ...

Read moreDetails
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Next Post
ಬೆಂಗಳೂರು ಮೆಟ್ರೋ: ನೇರಳೆ ಮಾರ್ಗ ಕೆಂಗೇರಿವರೆಗೂ ವಿಸ್ತರಣೆ: ನೀವು ತಿಳಿದುಕೊಳ್ಳಬೇಕಾದದ್ದು ಏನು ಗೊತ್ತೇ?

ಬೆಂಗಳೂರು ಮೆಟ್ರೋ: ನೇರಳೆ ಮಾರ್ಗ ಕೆಂಗೇರಿವರೆಗೂ ವಿಸ್ತರಣೆ: ನೀವು ತಿಳಿದುಕೊಳ್ಳಬೇಕಾದದ್ದು ಏನು ಗೊತ್ತೇ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!