ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿರುವ ಘಟನೆ ತೆಲಂಗಾಣದ ಮಂಚರ್‍ಯಾಲದ ಮಂದಮರ್ರಿ ತಾಲ್ಲೂಕಿನ ವೆಂಕಟಾಪುರದಲ್ಲಿ ನಡೆದಿದೆ.
ಶಿವಯ್ಯ(50), ಪತ್ನಿ ಪದ್ಮಾ(45), ಮೌನಿಕ, ಶಾಂತಯ್ಯ ಹಾಗೂ ಇಬ್ಬರು ಮಕ್ಕಳು ಸಜೀವ ದಹನವಾಗಿದ್ದಾರೆ ಎಂದು ತಿಳಿದು ಬಂದಿದೆ.

ಮೃತರೆಲ್ಲರೂ ಒಂದೇ ಕುಟುಂಬದವರು ಎಂದು ಪೊಲೀಸರು ತಿಳಿಸಿದ್ದು ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಬೆಂಕಿ ನಂದಿಸುವಷ್ಟರಲ್ಲಿ ಆರು ಮಂದಿ ಮೃತಪಟ್ಟಿದ್ದರು ಎಂದು ತಿಳಿಸಿದ್ದಾರೆ.
ಅಗ್ನಿ ಅವಘಡದ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.