• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಲಾಂಟನಾ ಕರಕುಶಲ ವಸ್ತು ತಯಾರಕರ ಪ್ರೋತ್ಸಾಹಕ್ಕೆ 1 ಕೋಟಿ ರೂ. :ಈಶ್ವರ ಖಂಡ್ರೆ…

Any Mind by Any Mind
February 22, 2024
in ಇತರೆ / Others, ಕರ್ನಾಟಕ, ರಾಜಕೀಯ
0
ಲಾಂಟನಾ ಕರಕುಶಲ ವಸ್ತು ತಯಾರಕರ ಪ್ರೋತ್ಸಾಹಕ್ಕೆ 1 ಕೋಟಿ ರೂ. :ಈಶ್ವರ ಖಂಡ್ರೆ…
Share on WhatsAppShare on FacebookShare on Telegram

ಅರಣ್ಯ(Forest)ದಲ್ಲಿ ಸಸ್ಯಹಾರಿ ಪ್ರಾಣಿಗಳಿಗೆ ಮಾರಕವಾಗಿರುವ ಲಾಂಟನಾ(lantana) ಕಳೆಯಿಂದ ಆನೆ, ಕಾಡೆಮ್ಮೆ, ಪೀಠೋಪಕರಣ ಮತ್ತು ಅಲಂಕಾರಿಕ ವಸ್ತುಗಳನ್ನು ತಯಾರಿಸುವ ಆದಿವಾಸಿ ಸಮುದಾಯದವರಿಗೆ ತರಬೇತಿ ಮತ್ತು ಪೋತ್ಸಾಹ ನೀಡಲು 1 ಕೋಟಿ ರೂ. ನೆರವು ನೀಡುವ ಬಗ್ಗೆ ಪರಿಶೀಲಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ(Eshwar Kandre) ತಿಳಿಸಿದ್ದಾರೆ.

ADVERTISEMENT

ಬೆಂಗಳೂರಿ(Banglore)ನ ಲಾಲ್ ಬಾಗ್(Lal Bagh) ನಲ್ಲಿಂದು ಲಾಂಟನಾ ಕಡ್ಡಿಗಳಿಂದ ತಯಾರಿಸಿದ ಕಾಡೆಮ್ಮೆ ಮತ್ತು ಆನೆಯ ಆಕೃತಿಗಳನ್ನು ಅನಾವರಣ ಮಾಡಿ ಮಾತನಾಡಿದ ಅವರು, ಮುಳ್ಳಿನಿಂದ ಕೂಡಿದ ಲಾಂಟನಾ ರಾಜ್ಯದ ಬಂಡೀಪುರ, ನಾಗರಹೊಳೆ, ಬಿಳಿಗಿರಿ ರಂಗನ ಬೆಟ್ಟ ಮೊದಲಾದ ಅರಣ್ಯ ಪ್ರದೇಶಗಳಲ್ಲಿ ವ್ಯಾಪಕವಾಗಿ ವ್ಯಾಪಿಸಿದ್ದು, ಇದರಿಂದ ಆನೆ, ಜಿಂಕೆ ಇತ್ಯಾದಿ ಸಸ್ಯಹಾರಿ ಪ್ರಾಣಿಗಳಿಗೆ ಹುಲ್ಲೂ ಸಿಗದಂತಾಗಿದೆ. ಹೀಗಾಗಿ ಈ ಕಳೆಯನ್ನು ತೆಗೆಯುವುದು ಅನಿವಾರ್ಯವಾಗಿದ್ದು, ಆದಿವಾಸಿಗಳ ನೆರವಿನಿಂದ ಈ ಕಳೆ ತೆಗೆಸಿ, ಅಲಂಕಾರಿಕ ವಸ್ತು ತಯಾರಿಸಿದರೆ ಅದರಿಂದ ಜೀವನೋಪಾಯವೂ ಆಗುತ್ತದೆ, ಕಾಡಿನ ಕಳೆಯ ಸಮಸ್ಯೆಗೂ ಪರಿಹಾರ ಲಭಿಸುತ್ತದೆ ಎಂದು ಅಭಿಪ್ರಾಯಪಟ್ಟರು.

ಲಾಂಟನಾದಿಂದ ತಯಾರಿಸಿದ ಪೀಠೋಪಕರಣ, ಅಲಂಕಾರಿಕ ವಸ್ತುಗಳು ಮತ್ತು ವನ್ಯಜೀವಿ ಆಕೃತಿಗಳಿಗೆ ದೇಶದಾದ್ಯಂತ ಅಷ್ಟೇ ಅಲ್ಲ ವಿದೇಶದಲ್ಲಿಯೂ ಬೇಡಿಕೆ ಸೃಷ್ಟಿಸಲು ವ್ಯಾಪಕ ಪ್ರಚಾರ ನೀಡುವ ಮತ್ತು ಆನ್ ಲೈನ್ ಮೂಲಕ ಮಾರಾಟ ಮಾಡಲು ವೇದಿಕೆ ಕಲ್ಪಿಸಲು ಕ್ರಮ ವಹಿಸುವ ಸಾಧ್ಯತೆಗಳ ಕುರಿತಂತೆ ವರದಿ ಸಲ್ಲಿಸಲು ಸ್ಥಳದಲ್ಲಿ ಹಾಜರಿದ್ದ ಹಿರಿಯ ಐ.ಎಫ್.ಎಸ್ ಅಧಿಕಾರಿ ಕುಮಾರ್ ಪುಷ್ಕರ್ ಅವರಿಗೆ ಸೂಚನೆ ನೀಡಿದರು.

ಲಾಂಟನಾ ವಿದೇಶದಿಂದ ನಮ್ಮ ದೇಶಕ್ಕೆ ಆಗಮಿಸಿದ ಕಳೆಯಾಗಿದೆ. ಇದು ಕಾಡನ್ನು ರಕ್ತ ಬೀಜಾಸುರನಂತೆ ಆವರಿಸುತ್ತಿದ್ದು ಇದನ್ನು ವೈಜ್ಞಾನಿಕವಾಗಿ ನಿರ್ಮೂಲನೆ ಮಾಡುವ ಅಗತ್ಯವಿದೆ. ಲಾಂಟನಾವನ್ನು ಹೆಚ್ಚಿನ ಪ್ರಮಾಣದಲ್ಲಿ ಬುಡಸಮೇತ ತೆಗೆದು ಕಲಾಕೃತಿ ರಚಿಸಲು ಬುಡಕಟ್ಟು ಮತ್ತು ಆದಿವಾಸಿಗಳಿಗೆ ಸೂಕ್ತ ತರಬೇತಿ ನೀಡಿದರೆ ಸಾವಿರಾರು ಜನರಿಗೆ ಉದ್ಯೋಗಾವಕಾಶ ಲಭಿಸುತ್ತದೆ. ಲಾಂಟನಾ ಸಮಸ್ಯೆಯೂ ಪರಿಹಾರವಾಗುತ್ತದೆ ಎಂದು ಹೇಳಿದರು. ಭೂಮಿಯಲ್ಲಿ ಹುಟ್ಟಿದ ಪ್ರತಿಯೊಂದು ಜೀವಿಗೂ ಮನುಷ್ಯನಂತೆಯೇ ಬದುಕುವ ಹಕ್ಕಿದೆ. ಕಾಡಿನಂಚಿನಲ್ಲಿದ್ದ ನಮ್ಮ ಪೂರ್ವಿಕರು ಸೂಕ್ಷ್ಮ ಸಂವೇದಿಗಳಾಗಿದ್ದರು. ಅವರು ವನ್ಯಜೀವಿಗಳೊಂದಿಗೆ ಸಹಬಾಳ್ವೆಯಿಂದ ಬದುಕುವುದನ್ನು ಅರಿತಿದ್ದರು. ಇಂದಿನ ಪೀಳಿಗೆಗೆ ಈ ಬಗ್ಗೆ ಅರಿವು ಮೂಡಿಸುವ ಅಗತ್ಯವಿದೆ ಎಂದರು.

#lantana #handicraft #manufacturers #EswaraKandre #Congress #Minister

Previous Post

ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ: ದರ್ಶನ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು

Next Post

ಯುವ ರಾಜಕುಮಾರ್ ಅಭಿನಯದ ʻಯುವʼ ಚಿತ್ರದ ಆಡಿಯೋ ಹಕ್ಕು ಅಧಿಕ ಮೊತ್ತಕ್ಕೆ ಮಾರಾಟ…

Related Posts

ಮೊಬೈಲ್ ಪತ್ತೆ ಕೇಸ್: ಪ್ರಜ್ವಲ್ ರೇವಣ್ಣ VIP ಸೆಲ್‌ನಿಂದ ಸಾಮಾನ್ಯ ಸೆಲ್‌ಗೆ ಶಿಫ್ಟ್
Top Story

ಮೊಬೈಲ್ ಪತ್ತೆ ಕೇಸ್: ಪ್ರಜ್ವಲ್ ರೇವಣ್ಣ VIP ಸೆಲ್‌ನಿಂದ ಸಾಮಾನ್ಯ ಸೆಲ್‌ಗೆ ಶಿಫ್ಟ್

by ಪ್ರತಿಧ್ವನಿ
August 13, 2026
0

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಸಿಸಿಬಿ ನಡೆಸಿದ ದಾಳಿ ವೇಳೆ ಅತ್ಯಾಚಾರ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇದ್ದ ಬ್ಯಾರಕ್‌ನಲ್ಲಿ...

Read moreDetails
BREAKING NEWS : ಮನೆಯಿಂದಲೇ ವಾಟಾಳ್‌ ನಾಗರಾಜ್‌ ಪೊಲೀಸ್‌ ವಶಕ್ಕೆ ; ಕುತೂಹಲ ಮೂಡಿಸಿದ ಬಂದ್‌ ಭವಿಷ್ಯ..!

BREAKING NEWS : ಮನೆಯಿಂದಲೇ ವಾಟಾಳ್‌ ನಾಗರಾಜ್‌ ಪೊಲೀಸ್‌ ವಶಕ್ಕೆ ; ಕುತೂಹಲ ಮೂಡಿಸಿದ ಬಂದ್‌ ಭವಿಷ್ಯ..!

August 13, 2026
ಶಿವಗಂಗೆ ಬೆಟ್ಟದಲ್ಲಿ ನಾಪತ್ತೆಯಾದ ಟೆಕ್ಕಿ ಅದ್ವೈತ್‌ ಪ್ರಕರಣಕ್ಕೆ ಟ್ವಿಸ್ಟ್‌: ಆತ್ಮಹತ್ಯೆಯೇ, ಉದ್ದೇಶಪೂರ್ವಕ ನಾಪತ್ತೆಯೇ?

ಶಿವಗಂಗೆ ಬೆಟ್ಟದಲ್ಲಿ ನಾಪತ್ತೆಯಾದ ಟೆಕ್ಕಿ ಅದ್ವೈತ್‌ ಪ್ರಕರಣಕ್ಕೆ ಟ್ವಿಸ್ಟ್‌: ಆತ್ಮಹತ್ಯೆಯೇ, ಉದ್ದೇಶಪೂರ್ವಕ ನಾಪತ್ತೆಯೇ?

August 13, 2026
ಆಗಸ್ಟ್ 15ರ ಸ್ವಾತಂತ್ರ್ಯ ಹಬ್ಬಕ್ಕೆ ಸಜ್ಜಾದ ಬೆಂಗಳೂರು: ಭದ್ರತೆಗೆ ಪ್ರಿಯಾಂಕ್ ಖರ್ಗೆ ಸೂಚನೆ

ಆಗಸ್ಟ್ 15ರ ಸ್ವಾತಂತ್ರ್ಯ ಹಬ್ಬಕ್ಕೆ ಸಜ್ಜಾದ ಬೆಂಗಳೂರು: ಭದ್ರತೆಗೆ ಪ್ರಿಯಾಂಕ್ ಖರ್ಗೆ ಸೂಚನೆ

August 13, 2026
ಶೋಷಣೆಯ ಪರ್ವ ಮತ್ತು ಶ್ರಮಿಕ ವರ್ಗಗಳ ಸಂಘರ್ಷ

ಶೋಷಣೆಯ ಪರ್ವ ಮತ್ತು ಶ್ರಮಿಕ ವರ್ಗಗಳ ಸಂಘರ್ಷ

August 13, 2026
Next Post
ಯುವ ರಾಜಕುಮಾರ್ ಅಭಿನಯದ ʻಯುವʼ ಚಿತ್ರದ ಆಡಿಯೋ ಹಕ್ಕು ಅಧಿಕ ಮೊತ್ತಕ್ಕೆ ಮಾರಾಟ…

ಯುವ ರಾಜಕುಮಾರ್ ಅಭಿನಯದ ʻಯುವʼ ಚಿತ್ರದ ಆಡಿಯೋ ಹಕ್ಕು ಅಧಿಕ ಮೊತ್ತಕ್ಕೆ ಮಾರಾಟ...

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada