• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪದವಿಗಳಲ್ಲ, ಭವಿಷ್ಯದ ಬಾಗಿಲು ತೆರೆಯುವುದು ಕೌಶಲ್ಯತೆ: ಡಾ. ಶರಣಪ್ರಕಾಶ್‌ ಪಾಟೀಲ್

ಪ್ರತಿಧ್ವನಿ by ಪ್ರತಿಧ್ವನಿ
August 29, 2025
in Top Story, ಕರ್ನಾಟಕ, ರಾಜಕೀಯ, ವಾಣಿಜ್ಯ
0
ಪದವಿಗಳಲ್ಲ, ಭವಿಷ್ಯದ ಬಾಗಿಲು ತೆರೆಯುವುದು ಕೌಶಲ್ಯತೆ: ಡಾ. ಶರಣಪ್ರಕಾಶ್‌ ಪಾಟೀಲ್
Share on WhatsAppShare on FacebookShare on Telegram

ಕೊಚ್ಚಿಯಲ್ಲಿ ನಡೆದ ಕೌಶಲ್ಯ ಶೃಂಗಸಭೆಯಲ್ಲಿ ಭಾಗವಹಿಸಿದ ಸಚಿವರು

ADVERTISEMENT

ಕೊಚ್ಚಿ (ಕೇರಳ), ಆಗಸ್ಟ್ 29: ಬದುಕಿನಲ್ಲಿ ಯಶಸ್ಸು ಸಾಧಿಸಿಬೇಕಾದರೆ ನಿರಂತರ ಕಲಿಕೆ ಮುಖ್ಯ. ಇದರ ಜೊತೆಗೆ ಕೌಶಲ್ಯ ಕೂಡಿದರೆ ಇನ್ನಷ್ಟು ಪ್ರಗತಿ ಸಾಧಿಸಬಹುದು. ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ವೈಫಲ್ಯಕ್ಕೆ ಹೆದರಬಾರದು, ಕಲಿಕೆ ಮತ್ತು ನಾವೀನ್ಯತೆ, ಕ್ರಿಯಾಶೀಲತೆಗೆ ಹೆಚ್ಚು ಒತ್ತು ನೀಡಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಆರ್‌ ಪಾಟೀಲ್ ತಿಳಿಸಿದ್ದಾರೆ.

ಕೇರಳ ಸರ್ಕಾರ ಶುಕ್ರವಾರ ಆಯೋಜಿಸಿದ್ದ ಜಾಗತಿಕ ಕೌಶಲ್ಯ ಶೃಂಗಸಭೆಯಲ್ಲಿ ಡಾ. ಪಾಟೀಲ್ ಭಾಷಣ ಮಾಡಿದರು.

ಪ್ರತಿಯೊಬ್ಬ ಉದ್ಯಮಿ, ಸಾಧಕ ಮತ್ತು ನಾಯಕ ಯಶಸ್ಸನ್ನು ಕಾಣುವ ಮೊದಲು ವೈಫಲ್ಯವನ್ನು ಕಂಡಿದ್ದಾರೆ. ಸೋಲೇ ಗೆಲುವಿನ ಮೆಟ್ಟಿಲು ಎಂಬುದನ್ನು ವಿದ್ಯಾರ್ಥಿಗಳು ಮರೆಯಬಾರದು ಎಂದರು.

ವೈಫಲ್ಯ ಅಂತ್ಯವಲ್ಲ, ಯಶಸ್ಸಿನ ಮೆಟ್ಟಿಲು
“ವೈಫಲ್ಯವು ಅಂತ್ಯವಲ್ಲ – ಇದು ಯಶಸ್ಸಿನ ಮೆಟ್ಟಿಲು. ಸರ್ಕಾರಗಳು, ಕೈಗಾರಿಕೆ ಮತ್ತು ಶೈಕ್ಷಣಿಕ ಸಂಸ್ಥೆಗಳು ನೀತಿಗಳು ಮತ್ತು ವಿಧಾನಗಳನ್ನು ರೂಪಿಸುತ್ತದೆ, ಆದರೆ ನಿಜವಾದ ಬದಲಾವಣೆಯು, ವಿಭಿನ್ನವಾಗಿ ಕನಸು ಕಾಣುವ, ಮತ್ತು ಕಾರ್ಯನಿರ್ವಹಿಸುವ ಧೈರ್ಯವನ್ನು ಯುವ ಸಮೂಹ ಮೈಗೂಡಿಸಿಕೊಳ್ಳಬೇಕು” ಎಂದು ಡಾ. ಪಾಟೀಲ್‌ ತಿಳಿಸಿದರು

Siddaramaiah: ಬಿಹಾರಕ್ಕೆ ರಾಯಲ್‌ ಆಗಿ ಎಂಟ್ರಿ ಕೊಟ್ಟ ಸಿಎಂ ಸಿದ್ದರಾಮಯ್ಯ..! #bihar #rahulgandhi

.

ಔಪಚಾರಿಕ ಪದವಿಗಳು ಭವಿಷ್ಯಕ್ಕೆ ದಾರಿ ತೋರುತ್ತವೆ. ಆದರೆ ನಿಜವಾದ ಯಶಸ್ಸಿನ ಬಾಗಿಲುಗಳನ್ನು ತೆರೆಯುವುದು ಕೌಶಲ್ಯತೆ. ಇದು ಆತ್ಮವಿಶ್ವಾಸ, ಘನತೆ ಮತ್ತು ಸ್ವಾತಂತ್ರ್ಯವನ್ನು ತುಂಬುತ್ತದೆ. ಅದನ್ನು ಉನ್ನತ ಶಿಕ್ಷಣದೊಂದಿಗೆ ಸಂಯೋಜಿಸಿದಾಗ, ಉದ್ಯೋಗಕ್ಕೆ ಅರ್ಹರಾಗುವುದಲ್ಲದೆ, ಇತರರಿಗೆ ಉದ್ಯೋಗಗಳನ್ನು ಸೃಷ್ಟಿಸುವ ವ್ಯಕ್ತಿಗಳನ್ನು ರೂಪಿಸಬಹುದು” ಎಂದು ಡಾ. ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದರು.

ಶಿಕ್ಷಣ ಕೇವಲ ಪರೀಕ್ಷಾ ತಯಾರಿಗೆ ಸೀಮಿತ ಆಗಬಾರದು
ಕೇರಳದ ಸಾಕ್ಷರತೆ ಮತ್ತು ಪ್ರಗತಿಪರ ಮನೋಭಾವ ಇಡೀ ದೇಶಕ್ಕೆ ಮಾದರಿ. ಶಿಕ್ಷಣವು ಕೇವಲ ಪರೀಕ್ಷಾ ತಯಾರಿಗೆ ಸೀಮಿತವಾಗಿರಬಾರದು. ಉದ್ಯೋಗದ ಭವಿಷ್ಯವನ್ನು ಪದವಿಗಳಿಂದ ವ್ಯಾಖ್ಯಾನಿಸಲಾಗುವುದಿಲ್ಲ, ಆದರೆ ಹೊಂದಿಕೊಳ್ಳುವಿಕೆ, ಸಮಸ್ಯೆ ಪರಿಹಾರ, ಸಹಯೋಗ ಮತ್ತು ನಾವೀನ್ಯತೆಯಿಂದ ಗುರುತಿಸಲಾಗುತ್ತದೆ. ಡಿಜಿಟಲ್ ತಂತ್ರಜ್ಞಾನಗಳು, ಯಾಂತ್ರೀಕತೆ, ಕೃತಕ ಬುದ್ಧಿಮತ್ತೆ ಮತ್ತು ಹೊಸ ವ್ಯವಹಾರ ಮಾದರಿಗಳೊಂದಿಗೆ ಕೌಶಲ್ಯಗಳು ಭವಿಷ್ಯದ ನಿಜವಾದ ಹೆಬ್ಬಾಗಿಲು ಆಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ಜಾಗತಿಕ ಕೌಶಲ್ಯ ಶೃಂಗಸಭೆಯಲ್ಲಿ ಜಾಗತಿಕ ನಾಯಕರು, ನೀತಿ ನಿರೂಪಕರು, ಉದ್ಯಮ ನಾಯಕರು, ತರಬೇತಿ ಸಂಸ್ಥೆಗಳು, ಶೈಕ್ಷಣಿಕ ಅಧ್ಯಾಪಕರು, ಅಂತರರಾಷ್ಟ್ರೀಯ ಸಂಸ್ಥೆಗಳು, ನಾವೀನ್ಯಕಾರರು ಮತ್ತು ವಿದ್ಯಾರ್ಥಿಗಳು ಸೇರಿದಂತೆ 2,000ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.

ಕೇರಳದ ಉನ್ನತ ಶಿಕ್ಷಣ ಸಚಿವರಾದ ಡಾ. ಆರ್. ಬಿಂದು, ಕೈಗಾರಿಕೆ ಸಚಿವ ಪಿ. ರಾಜೀವ್, ಸ್ಥಳೀಯ ಸ್ವ-ಆಡಳಿತ ಸಚಿವ ಎಂ.ಬಿ. ರಾಜೇಶ್ ಸೇರಿದಂತೆ ಹಲವು ಗಣ್ಯರು, ಇತರರು ಹಾಜರಿದ್ದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕನಕಪುರದಂತೆ ಮಾಗಡಿಯೂ ನಮ್ಮ ಕ್ಷೇತ್ರ, ನಿಜವಾದ ಬಂಡೆ ಬಾಲಕೃಷ್ಣ

Next Post

ಹೊಸ ಸಿನಿಮಾ ಘೋಷಿಸಿದ ಕೆವಿಎನ್..ಶಿವಣ್ಣನ ಜೊತೆ ಕೈ ಜೋಡಿಸಿದ ಪವನ್ ಒಡೆಯರ್

Related Posts

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ
Top Story

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

by ಪ್ರತಿಧ್ವನಿ
April 29, 2026
0

ಕೊಲ್ಕತ್ತಾ ಸೇರಿ ಪಶ್ಚಿಮ ಬಂಗಾಳದ ವಿವಿಧ ಭಾಗಗಳಲ್ಲಿ ನಡೆದ ಮತದಾನದಲ್ಲಿ ಭರ್ಜರಿ ಸ್ಪಂದನೆ ಕಂಡುಬಂದಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಅರ್ಗವಾಲ್ ಮಾಹಿತಿ ನೀಡಿದಂತೆ, ಒಟ್ಟು ಮತದಾನದ...

Read moreDetails
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

April 29, 2026
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
Next Post
ಹೊಸ ಸಿನಿಮಾ ಘೋಷಿಸಿದ ಕೆವಿಎನ್..ಶಿವಣ್ಣನ ಜೊತೆ ಕೈ ಜೋಡಿಸಿದ ಪವನ್ ಒಡೆಯರ್

ಹೊಸ ಸಿನಿಮಾ ಘೋಷಿಸಿದ ಕೆವಿಎನ್..ಶಿವಣ್ಣನ ಜೊತೆ ಕೈ ಜೋಡಿಸಿದ ಪವನ್ ಒಡೆಯರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada