ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ತೀವ್ರ ಜ್ವರದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶನಿವಾರ ರಾತ್ರಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಗರದ ವಿಠಲ್ ಮಲ್ಯ ಆಸ್ಪತ್ರೆಗೆ ದಾಖಿಸಲಾಗಿತ್ತು. ನಂತರ ಅವರನ್ನು ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮಾಜಿ ಸಿಎಂ ಹಾಗೂ ಮಾಜಿ ಕೇಂದ್ರ ವಿದೇಶಾಂಗ ಸಚಿವರೂ ಆಗಿರುವ ಎಸ್ ಎಂ ಕೃಷ್ಣ ಪ್ರಸ್ತುತ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದಾರೆ.











