• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮಂಡ್ಯ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಿದ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್..!!

ಕಾರ್ಮಿಕರು ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ

ಪ್ರತಿಧ್ವನಿ by ಪ್ರತಿಧ್ವನಿ
November 11, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ADVERTISEMENT

ಅಸಂಘಟಿತ ಕಾರ್ಮಿಕರಿಗಾಗಿ ಕಾರ್ಮಿಕ ಇಲಾಖೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಕಾರ್ಮಿಕರಿಗೆ ಸೌಲಭ್ಯ, ಅನುಕೂಲತೆಗಳನ್ನು ತಿಳಿಸಲು ಪ್ರತಿ ಜಿಲ್ಲೆಗಳಲ್ಲಿ ಅರಿವು ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತಿದೆ. ರಾಜ್ಯದಲ್ಲಿನ ಪ್ರತಿಯೊಬ್ಬ ಕಾರ್ಮಿಕರು ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್. ಲಾಡ್ ಅವರು ಹೇಳಿದರು.

ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಬೆಂಗಳೂರು ಸಾರಿಗೆ ಇಲಾಖೆ ಹಾಗೂ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ʼಮಂಡ್ಯ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ಅರಿವು ಕಾರ್ಯಕ್ರಮ” ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

16 ರಿಂದ 18 ತಾಸು ರಸ್ತೆಯಲ್ಲಿ ಸಂಚರಿಸಿ ಜೀವ ಪಣಕ್ಕಿಟ್ಟು ಸ್ವಿಗ್ಗಿ, ಜ್ಯೊಮೋಟೊ ಪ್ಲಾಟ್‌ ಫಾರಂಗಳಲ್ಲಿ ಕೆಲಸ ಮಾಡುತ್ತಿರುವ ಯುವಕರಿಗೆ ಹಾಗೂ ಕಾರ್ಮಿಕರಿಗೆ ಅಪಘಾತ ವಿಮೆ ನೀಡಲು ನೂತನ ಯೋಜನೆ ಜಾರಿಗೆ ತರಲಾಗಿದೆ. ಅಪಘಾತದಲ್ಲಿ ಮರಣ ಹೊಂದಿದರೆ 5 ಲಕ್ಷ ಪರಿಹಾರ, ಅಂಗವೈಫಲ್ಯತೆಯಾದರೆ ರೂ. 2 ಲಕ್ಷ ಪರಿಹಾರ ಹಾಗೂ ಗರಿಷ್ಠ 1 ಲಕ್ಷದಷ್ಟು ಆಸ್ಪತ್ರೆಗೆ ತಗಲುವ ವೆಚ್ಚವನ್ನು ಭರಿಸಲಾಗುವುದು ಎಂದರು.

ಕುಟುಂಬದ ಜವಾಬ್ದಾರಿ ನಿರ್ವಹಿಸುವ ಯುವಕರ ಜೀವ ಅಮೂಲ್ಯವಾದದ್ದು ಪ್ರತಿಯೊಬ್ಬರೂ ವಾಹನ ಚಲಾಯಿಸುವಾಗ ಹೆಲ್ಮೆಟ್ ಧರಿಸಲು ಮರೆಯದಿರಿ. ಹಾಗೆಯೇ ಪ್ರತಿ ತಿಂಗಳು ಜಿಲ್ಲೆಯಲ್ಲಿ ಹೆಲ್ಮೆಟ್ ಬಳಕೆಯಿಂದಾಗುವ ಸದುಪಯೋಗ ಕುರಿತು ಜಾಗೃತಿ ಕಾರ್ಯಕ್ರಗಳನ್ನು ಆಯೋಜಿಸಿ ಎಂದು ಜಿಲ್ಲಾಡಳಿತಕ್ಕೆ ಮನವಿ ಮಾಡಿದರು.

ಪ್ರಮುಖವಾಗಿ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ ಯುವಕರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಅವಕಾಶ ಕಲ್ಪಿಸಲು ಆಶಾದೀಪ ಯೋಜನೆಯನ್ನು ಜಾರಿಗೆ ತಂದಿದ್ದು, ಹೆಚ್ಚಿನ ಪ್ರಮಾಣದಲ್ಲಿ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಉದ್ಯೋಗ ನೀಡುವ ಕಂಪನಿಗಳಿಗೆ, ಮಾಲೀಕರಿಗೆ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಮಾಸಿಕ ವೇತನ ನೀಡಲು ಶೇಕಡಾ 50 ಧನಸಹಾಯವನ್ನು ಆಶಾದೀಪ ಯೋಜನೆಯಡಿ ಕಾರ್ಮಿಕ ಇಲಾಖೆಯಿಂದ ನೀಡಲಾಗುವುದು ಎಂದು ತಿಳಿಸಿದರು.

101 ಅಸಂಘಟಿತ ಕಸುಬು ಮಾಡುವ ಕಾರ್ಮಿಕರನ್ನು ಅಸಂಘಟಿತ ಕಾರ್ಮಿಕರೆಂದು ಪರಿಗಣಿಸಿ ಲಕ್ಷಾಂತರ ಜನರಿಗೆ ಕಾರ್ಮಿಕ ಕಾರ್ಡ್ ವಿತರಿಸಲಾಗುತ್ತಿದ್ದೆ ಮುಂದಿನ ದಿನಗಳಲ್ಲಿ ಕೃಷಿ ಕಾರ್ಮಿಕರನ್ನು ಅಸಂಘಟಿತ ಕಾರ್ಮಿಕರೆಂದು ಪರಿಗಣಿಸಲಾಗುವುದು ಎಂದು ಹೇಳಿದರು. ಒಂದು ಸಿನಿಮಾ ಯಶಸ್ವಿಯಾಗಲು ಸಿನಿಮಾರಂಗದಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರ ಶ್ರಮವು ಪ್ರಮುಖವಾಗಿರುತ್ತದೆ. ಸಿನಿಮಾ ಕ್ಷೇತ್ರದ ಕಾರ್ಮಿಕರಿಗೆ ಅನುಕೂಲವಾಗಲು ನೂತನ ಸೌಲಭ್ಯ ಯೋಜನೆ ತರಲು ಕಾರ್ಮಿಕ ಇಲಾಖೆ ಮುಂದಾಗಿದೆ ಎಂದರು.

ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ಮಾತನಾಡಿ, ಕಾರ್ಮಿಕರು ಶ್ರಮ ಜೀವಿಗಳು ಅವರಿಗೆ ಅನುಕೂಲವಾಗಬೇಕು ಹಾಗೂ ಅವರ ಮಕ್ಕಳಿಗೆ ಉದ್ಯೋಗ ದೊರೆಯಬೇಕು ಎಂದು ಅನೇಕ ಸೌಲಭ್ಯಗಳನ್ನು ಕಾರ್ಮಿಕ ಇಲಾಖೆ ಜಾರಿಗೆ ತಂದಿದೆ ಮತ್ತು ಸ್ವತಃ ಇಲಾಖೆಯವರೇ ಜಿಲ್ಲೆಗಳಿಗೆ ಆಗಮಿಸಿ ಯೋಜನೆ, ಸೌಲಭ್ಯಗಳ ಅರಿವು ಮೂಡಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಎಲ್ಲಾ ವರ್ಗದಿಂದ 35 ಲಕ್ಷ ಜನ ಅಸಂಘಟಿತ ಕಾರ್ಮಿಕರನ್ನು ಗುರುತಿಸಿ 101 ಅಸಂಘಟಿತ ಕೆಲಸ ನಿರ್ವಹಿಸುವ ಕಾರ್ಮಿಕರಿಗೆ ಸೌಲಭ್ಯ ನೀಡುತ್ತಿದೆ. ಸರ್ಕಾರ ವೋಟಿಗಾಗಿ ಮತ್ತು ಒಂದು ಸಮುದಾಯದವರಿಗಾಗಿ ಸೌಲಭ್ಯಗಳನ್ನು ಜಾರಿಗೆ ತರುತಿಲ್ಲ. ರಾಜ್ಯದ ಪ್ರತಿ ಶ್ರಮಿಕರಿಗಾಗಿ, ಬಡವರಿಗಾಗಿ ಗ್ಯಾರಂಟಿ ಯೋಜನೆಯನ್ನು ಒಳಗೊಂಡಂತೆ ಯೋಜನೆಗಳನ್ನು ಜಾರಿಗೆ ತಂದಿರುವುದು. ಇತರೆ ತಪ್ಪು ಕಲ್ಪನೆಗಳನ್ನು ತೊರೆದು ಜನರ ಪರವಾಗಿ ಸರ್ಕಾರ ಕೈಗೊಂಡಿರುವ ಯೋಜಗಳನ್ನು ಪ್ರೋತ್ಸಾಹಿಸಿ ಎಂದರು.

ಮಂಡ್ಯ ವಿಧಾನಸಭಾ ಕ್ಷೇತ್ರ ಶಾಸಕ ಪಿ.ರವಿಕುಮಾರ್ ಅವರು ಮಾತನಾಡಿ ಮಂಡ್ಯ ಜಿಲ್ಲೆಯಲ್ಲಿ ಕಾರ್ಮಿಕ ಇಲಾಖೆಯ ಮಹತ್ವ ತಿಳಿದದ್ದು ಸಂತೋಷ್ ಲಾಡ್ ಅವರು ಅಧಿಕಾರಕ್ಕೆ ಬಂದಾಗ. ಬಡವರಿಗೆ ರಸ್ತೆ ಅಪಘಾತ ಉಂಟಾದರೆ ಅವರು ಹೋಗುವುದು ದೇವರ ಮೊರೆಗೆ. ಹಣ ಇಲ್ಲದವರ ಕಷ್ಟ ದೊಡ್ಡದು ಇದನ್ನು ಅರಿತು ಕಾರ್ಮಿಕ ಇಲಾಖೆ ಕಾರ್ಮಿಕರಿಗಾಗಿ ಅಪಘಾತ ವಿಮೆಯನ್ನು ಜಾರಿಗೆ ತಂದಿರುವುದು ನಿಜಕ್ಕೂ ಶ್ಲಾಘನೀಯ ಎಂದರು.

ಜನರ ತೆರಿಗೆ ಹಣವನ್ನು ಜನರಿಗೆ ನೀಡುವುದು ಖಂಡಿತ ತಪ್ಪಲ್ಲ, ಪಂಚ ಗ್ಯಾರಂಟಿ ಜನರ ಹಣವನ್ನು ಜನರಿಗೆ ನೀಡುತ್ತಿದ್ದೆ ಜನರ ಏಳಿಗೆಗಾಗಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರವನ್ನು ನಕಾರಾತ್ಮಕವಾಗಿ ಬಿಂಬಿಸದೆ ಆಶೀರ್ವದಿಸಿ ಎಂದರು.

ಮದ್ದೂರು ವಿಧಾನಸಭಾ ಕ್ಷೇತ್ರ ಶಾಸಕ ಕೆ. ಎಂ ಉದಯ್(Maddur MLA KM Uday), ಮೇಲುಕೋಟೆ ವಿಧಾನಸಭಾ ಕ್ಷೇತ್ರ ಶಾಸಕ ದರ್ಶನ್ ಪುಟ್ಟಣ್ಣಯ್ಯ(Melukote MLA Darshan Puttannayya), ಕರ್ನಾಟಕ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್ (Vijayalakshmi Raghunandan), ಜಂಟಿ ಕಾರ್ಮಿಕ ಆಯುಕ್ತರು ಹಾಗೂ ಜಂಟಿ ಕಾರ್ಯದರ್ಶಿ ಎಸ್. ಬಿ ರವಿಕುಮಾರ್ (SB Ravikumar), ಜಿಲ್ಲಾಧಿಕಾರಿ ಡಾ. ಕುಮಾರ (DC Dr. Kumar), ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕೆ. ಆರ್ ನಂದಿನಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tags: Agriculture Minister Cheluvarayaswamycongress mla santhosh ladDarshan Puttannayyalabor minister santhosh ladMinister Santhosh Ladsanthosh ladsanthosh lad about modisanthosh lad about pm modisanthosh lad angry onsanthosh lad lashes out at r ashoksanthosh lad latest newssanthosh lad latest statementsanthosh lad newssanthosh lad news todaysanthosh lad on bjpsanthosh lad questioned modisanthosh lad speechsanthosh lad statementsanthosh lad today newssanthosh lad vs narendra modiSantosh Ladsantosh lad gstsantosh lad mlasantosh lad news
Previous Post

ವೃದ್ದಾಶ್ರಮ ಹೆಸರಲ್ಲಿ 1.29 ಕೋಟಿ ರೂ. ವಂಚನೆ

Next Post

ಜಮೀನು..ಮನೆಗಾಗಿ ತಾಯಿಯ ಕಥೆ ಮುಗಿಸಿದ ಸಾಕು ಮಗಳು

Related Posts

ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್
ಕರ್ನಾಟಕ

ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

by ಪ್ರತಿಧ್ವನಿ
November 18, 2025
0

ಬೆಂಗಳೂರು: ಪೊಕ್ಸೊ ಕೇಸ್ ನಲ್ಲಿ ಸಿಲುಕಿರುವ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪಗೆ ನ್ಯಾಯಾಲಯ ಮತ್ತೊಂದು ಶಾಕ್ ನೀಡಿದೆ. ಡಿಸೆಂಬರ್ 2ರಂದು ಖುದ್ದು ಹಾಜರಾಗುವಂತೆ ಯಡಿಯೂರಪ್ಪಗೆ 1ನೇ ಫಾಸ್ಟ್ ಟ್ರ್ಯಾಕ್...

Read moreDetails
‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

November 18, 2025
ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

November 18, 2025
ಮತಕಳ್ಳತನಕ್ಕಾಗಿ SIR ಪ್ರಕ್ರಿಯೆ ಅಸ್ತ್ರ: ಖರ್ಗೆ ಆರೋಪ

ಮತಕಳ್ಳತನಕ್ಕಾಗಿ SIR ಪ್ರಕ್ರಿಯೆ ಅಸ್ತ್ರ: ಖರ್ಗೆ ಆರೋಪ

November 18, 2025
ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

November 18, 2025
Next Post
ಜಮೀನು..ಮನೆಗಾಗಿ ತಾಯಿಯ ಕಥೆ ಮುಗಿಸಿದ ಸಾಕು ಮಗಳು

ಜಮೀನು..ಮನೆಗಾಗಿ ತಾಯಿಯ ಕಥೆ ಮುಗಿಸಿದ ಸಾಕು ಮಗಳು

Recent News

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!
Top Story

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

by ಪ್ರತಿಧ್ವನಿ
November 18, 2025
ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ
Top Story

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

by ಪ್ರತಿಧ್ವನಿ
November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ
Top Story

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

by ಪ್ರತಿಧ್ವನಿ
November 18, 2025
Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

November 18, 2025
‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

‘ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಡಲು ಡಿಕೆಶಿಗೆ ಯಾರು ಹೇಳಿಲ್ಲ’

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada