
ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ನಗರದ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. 91 ವರ್ಷ ವಯಸ್ಸಿನ ಎಸ್.ಎಂ ಕೃಷ್ಣ ಅವರು ಅನಾರೋಗ್ಯಕ್ಕೀಡಾಗಿದ್ದಾರೆ. ಕಳೆದ ವಾರ ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರನ್ನು ವೈದೇಹಿ (ಮಲ್ಯ) ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ಸೂಚನೆ ಮೇರೆಗೆ ಹಾಗೂ ದೈಹಿಕ ವ್ಯಾಯಾಮ ಸೇರಿದಂತೆ, ಅಗತ್ಯ ಚಿಕಿತ್ಸೆಗಾಗಿ ವೈದೇಹಿ (ಮಲ್ಯ) ಆಸ್ಪತ್ರೆಯಿಂದ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ ಕೃಷ್ಣ ಅವರನ್ನು ಶಿಫ್ಟ್ ಮಾಡಲಾಗಿದೆ. ಆಸ್ಪತ್ರೆಯ ಮೂಲಗಳ ಪ್ರಕಾರ ಸದ್ಯ ಎಸ್ಎಂ ಕೃಷ್ಣ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ.
ಆದ್ರೆ, ಯಾವ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಇನ್ನೂ ತಿಳಿದುಬಂದಿಲ್ಲ.ಎಸ್ ಎಂ ಕೃಷ್ಣ ಅವರಿಗೆ 91 ವರ್ಷ ವಯಸ್ಸಾಗಿದ್ದರಿಂದ ಅವರ ಆರೋಗ್ಯ ಪದೇ ಪದೇ ಹದಗೆಡುತ್ತಿದೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ.