• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಚಿವ‌ ಮಧು ಬಂಗಾರಪ್ಪ ಪ್ರತಿನಿಧಿಸುವ ಕ್ಷೇತ್ರದಲ್ಲಿ ಸಾಮಾಜಿಕ ಬಹಿಷ್ಕಾರ‌

Any Mind by Any Mind
February 20, 2024
in Top Story, ಕರ್ನಾಟಕ
0
ಸಚಿವ‌ ಮಧು ಬಂಗಾರಪ್ಪ ಪ್ರತಿನಿಧಿಸುವ ಕ್ಷೇತ್ರದಲ್ಲಿ ಸಾಮಾಜಿಕ ಬಹಿಷ್ಕಾರ‌
Share on WhatsAppShare on FacebookShare on Telegram

ಶಿವಮೊಗ್ಗ (Shivamogga): ಮಗ ಮಾಡಿದ ತಪ್ಪಿನಿಂದಾಗಿ ಈಡಿಗ ಸಮುದಾಯದ ತಾಯಿ ಮತ್ತು ಮಗಳು ಸಾಮಾಜಿಕ ಬಹಿಷ್ಕಾರಕ್ಕೆ ಗುರಿಯಾಗಿದ್ದಾರೆ.‌

ADVERTISEMENT

ಸರೋಜಮ್ಮ ಹಾಗೂ ಪವಿತ್ರಾ ಸಾಮಾಜಿಕ ಬಹಿಷ್ಕಾರಕ್ಕೊಳಗಾಗಿರುವ ಸಂತ್ರಸ್ತ ಮಹಿಳೆಯರು. ಮಹಿಳೆಯ ಮಗ, ಕೊಲೆ ಪ್ರಕರಣದಲ್ಲಿ ಅಪರಾಧಿ ಎಂದು ನ್ಯಾಯಾಲಯ ತೀರ್ಪು ನೀಡಿದ ನಂತರ ಆತನ ತಾಯಿ ಮತ್ತು ಸಹೋದರಿಗೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿದೆ.

ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarapp) ಅವರು ಪ್ರತಿನಿಧಿಸುವ ಶಿವಮೊಗ್ಗ ಜಿಲ್ಲೆಯ ಸೊರಬ ಕ್ಷೇತ್ರದ ಕುಳವಳ್ಳಿಯಲ್ಲಿ ಘಟನೆ ನಡೆದಿದೆ.‌

ನಮ್ಮನ್ನು ಬಹಿಷ್ಕಾರಗೊಳಿಸಿದ್ದಾರೆ. ಯಾರಾದರೂ ತಮ್ಮೊಂದಿಗೆ ಮಾತನಾಡಿದರೆ 1,000 ರೂಪಾಯಿ ದಂಡ ವಿಧಿಸುವುದಾಗಿ ಗ್ರಾಮಸ್ಥರು ಬೆದರಿಕೆ ಹಾಕಿದ್ದಾರೆ. ಅಲ್ಲದೆ ತಮ್ಮ ಮನೆಗೆ ನೀರು, ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ ಎಂದು ತಾಯಿ ಮತ್ತು ಮಗಳು ಆರೋಪಿಸಿದ್ದಾರೆ. ಇದಲ್ಲದೆ, ಗ್ರಾಮಕ್ಕೆ ಮರಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗುತ್ತಿದೆ. ನಮ್ಮ ಮನೆ ಕಳ್ಳತನವಾಗಿದೆ. ಗ್ರಾಮದೊಳಗೆ ಯಾರ ಬೆಂಬಲವೂ ಇಲ್ಲ ಎಂದು ತಮ್ಮ ನೋವನ್ನು ಹಂಚಿಕೊಂಡಿದ್ದಾರೆ ಸರೋಜಮ್ಮ ಅವರು.

ಈ ಸಂಬಂಧ ತಾಯಿ ಸರೋಜಮ್ಮ ಮತ್ತು ಮಗಳು ಪವಿತ್ರಾ ಅವರು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರನ್ನು ಸಂಪರ್ಕಿಸಿ ನ್ಯಾಯ ಕೇಳಿದ್ದಾರೆ. ಕಾನೂನು ಬಾಹಿರವಾಗಿ ಬಹಿಷ್ಕಾರ ಹಾಕಿದವರ ವಿರುದ್ಧ ಕಾನೂನು ಕ್ರಮ ಜರುಗಿಸಿ ಬಹಿಷ್ಕಾರ ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ಈ ಬಗ್ಗೆ ಮಹಿಳೆಯರು ತಮ್ಮ ಗಮನಕ್ಕೆ ತಂದಿದ್ದಾರೆ. ನಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುತ್ತಿದ್ದೇವೆ. ಇಂತಹ ಬಹಿಷ್ಕಾರದ ಕೃತ್ಯಗಳು ಕಾನೂನು ಬಾಹಿರ ಎಂದು ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸುತ್ತಿದ್ದೇವೆ. ತಹಶೀಲ್ದಾರ್, ಡಿವೈಎಸ್ಪಿ, ಕಾರ್ಯನಿರ್ವಾಹಕ ಅಧಿಕಾರಿ ಮತ್ತು ಪಿಡಿಒ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಸಭೆ ನಡೆಸುವಂತೆ ತಿಳಿಸಲಾಗಿದೆ. ಗ್ರಾಮದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳುತ್ತೇವೆ. ಬಹಿಷ್ಕಾರ ಹಾಕಿರುವ ಆರೋಪ ಸಾಬೀತಾದರೆ ಬಹಿಷ್ಕಾರಕ್ಕೆ ಕರೆ ನೀಡಿದವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಹೆಗಡೆ ತಿಳಿಸಿದ್ದಾರೆ.

#Karnataka #shivamogga #socialboycott #crime #mothersisterfaceboycott

Previous Post

ಸಕ್ಕರೆನಾಡಿʼನ ಕಹಿ ಫಲಿತಾಂಶ ನೆನೆಸಿಕೊಂಡು ಮಗನಿಗೆ ‘ಕಾಲದ’ ಸಂದೇಶ ನೀಡಿದ್ರಾ ಸಿದ್ದು…?

Next Post

ಗಂಡು ಮಗುವಿಗೆ ತಂದೆಯಾದ ವಿರಾಟ್ ಕೋಹ್ಲಿ.. ‘ವಿರುಷ್ಕ’ ದಂಪತಿಗೆ ಫೆ.15ರಂದು ಪುತ್ರ ಜನನ

Related Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
Top Story

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

by ಪ್ರತಿಧ್ವನಿ
April 30, 2026
0

ಬೆಂಗಳೂರು : ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಯಪಾಲಕ ಇಂಜಿನಿಯರ್ ಅವರನ್ನು ಅಮಾನತುಗೊಳಿಸಿ, ನೋಟೀಸು ನೀಡುವಂತೆ ಮುಖ್ಯಮಂತ್ರಿ...

Read moreDetails
ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

April 30, 2026
ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

April 30, 2026
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

April 30, 2026
Next Post
ಗಂಡು ಮಗುವಿಗೆ ತಂದೆಯಾದ ವಿರಾಟ್ ಕೋಹ್ಲಿ.. ‘ವಿರುಷ್ಕ’ ದಂಪತಿಗೆ ಫೆ.15ರಂದು ಪುತ್ರ ಜನನ

ಗಂಡು ಮಗುವಿಗೆ ತಂದೆಯಾದ ವಿರಾಟ್ ಕೋಹ್ಲಿ.. 'ವಿರುಷ್ಕ' ದಂಪತಿಗೆ ಫೆ.15ರಂದು ಪುತ್ರ ಜನನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada