ಸ್ಯಾಂಡಲ್ವುಡ್ ನಟ ಪ್ರಜ್ವಲ್ ದೇವರಾಜ್ ಪೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಚಾರಕ್ಕೆ ನಟ ದೇವರಾಜ್ ಕುಟುಂಬಸ್ಥರುರು ಬೇಸರ ವ್ಯಕ್ತಪಡಿಸಿದ್ದಾರೆ. ನಟ ಪ್ರಜ್ವಲ್ ದೇವರಾಜ್ ಕ್ಷೇಮವಾಗಿದ್ದಾರೆ. ಅವರ ಆರೋಗ್ಯದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ವದಂತಿಗಳನ್ನ ಹಬ್ಬಿಸಲಾಗಿದೆ ಎಂದಿದ್ದಾರೆ.
ನಟ ಪ್ರಜ್ವಲ್ ದೇವರಾಜ್ ಅವರ ಪೋಟೋಗಳನ್ನ ದುರ್ಬಳಕೆ ಮಾಡಲಾಗಿದೆ. ಆರೋಗ್ಯವಂತ ನಟನ ಬಗ್ಗೆ ಈ ರೀತಿಯ ವದಂತಿಗಳು ಸಲ್ಲದು, ಇದರಿಂದ ಕುಟುಂಬಸ್ಥರು ಹಾಗೂ ಅಭಿಮಾನಿಗಳನ್ನು ಆತಂಕ ಉಂಟಾಗುತ್ತದೆ. ಕಿಡಿಗೇಡಿಗಳು ಪ್ರಜ್ವಲ್ ದೇವರಾಜ್ ಆರೋಗ್ಯದ ಬಗ್ಗೆ ಅನಗತ್ಯ ಸುಳ್ಳು ವದಂತಿ ಹಬ್ಬಿಸಿದ್ದಾರೆ ಎನ್ನಲಾಗಿದೆ.
ಫೋಟೋ ದುರ್ಬಳಕೆ ಮಾಡಿಕೊಂಡವರ ಬಗ್ಗೆ ಕಾನೂನು ಸಲಹೆ ಪಡೆದು ದೂರು ನೀಡಲು ನಿರ್ಧಾರ ಮಾಡಲಾಗಿದೆ. ಪ್ರಜ್ವಲ್ ದೇವರಾಜ್ ಆರೋಗ್ಯವಾಗಿದ್ದಾರೆ. ಅಭಿಮಾನಿಗಳು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಪ್ರಜ್ವಲ್ ದೇವರಾಜ್ ಆಪ್ತ ಮೂಲಗಳಿಂದ ಮಾಹಿತಿ ಹೊರಬಿದ್ದಿದೆ.
ಆದರೆ ಪ್ರಜ್ವಲ್ ದೇವರಾಜ್ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಹೊರ ಬಿದ್ದ ಕೂಡಲೇ ಸ್ವತಃ ಪ್ರಜ್ವಲ್ ದೇವರಾಜ್ ಕಾಣೀಸಿಕೊಂಡು ಸ್ವತಃ ಸ್ಪಷ್ಟನೆ ನೀಡಬಹುದಿತ್ತು. ಆಪ್ತ ಮೂಲಗಳಿಂದ ಮಾಹಿತಿ ಬರುತ್ತಿರುವುದು ಯಾಕೆ..? ಪ್ರಜ್ವಲ್ ದೇವರಾಜ್ ಆರೋಗ್ಯವಾಗಿದ್ದಾರಾ..? ಅಥವಾ ಕೆಲಸ ಕಾರ್ಯಗಳಲ್ಲಿ ಬ್ಯುಸಿಯಾಗಿದ್ದಾರಾ..? ಎಂದು ಅಭಿಮಾನಿಗಳು ಪ್ರಶ್ನೆ ಮಾಡುತ್ತಿದ್ದಾರೆ.