• Home
  • About Us
  • ಕರ್ನಾಟಕ
Sunday, December 7, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸಾಮಾಜಿಕ ವಿವೇಕವೂ ವಿವೇಕರ ಸಂದೇಶವೂ

ನಾ ದಿವಾಕರ by ನಾ ದಿವಾಕರ
January 12, 2025
in Top Story, ದೇಶ, ವಿಶೇಷ
0
ಸಾಮಾಜಿಕ ವಿವೇಕವೂ ವಿವೇಕರ ಸಂದೇಶವೂ
Share on WhatsAppShare on FacebookShare on Telegram











ADVERTISEMENT

—ನಾ ದಿವಾಕರ—-
ವಿವೇಕಾನಂದರ ಜನ್ಮದಿನದಂದು ಕಳೆದುಕೊಂಡ ವಿವೇಚನೆಯನ್ನು ಮರಳಿ ಪಡೆಯಬೇಕಿದೆ.

ವಿವೇಕಾನಂದರ ಜನ್ಮದಿನ ಎಂದರೆ ನಮ್ಮ ರಾಜಕಾರಣಿಗಳಿಗೆ, ವಿಶೇಷವಾಗಿ ಹಿಂದುತ್ವವನ್ನು ಹಿಂಬಾಲಿಸುತ್ತಿರುವ ಎಲ್ಲ ರಾಜಕಾರಣಿಗಳಿಗೆ ಮೈ ನವಿರೇಳುತ್ತದೆ. ಸಿಂಹವಾಣಿ, ದಿವ್ಯವಾಣಿ, ದಿಟ್ಟವಾಣಿ ಎಂದೆಲ್ಲಾ ಮುಖಸ್ತುತಿ ಮಾಡುವ ಮೂಲಕ ವಿವೇಕಾನಂದರನ್ನು ಇಂದು ಚಾಲ್ತಿಯಲ್ಲಿರುವ ಹಿಂದುತ್ವ ರಾಜಕಾರಣದ ಕೇಂದ್ರ ಬಿಂದುವಾಗಿ ಪ್ರತಿಷ್ಠಾಪಿಸಲಾಗುತ್ತದೆ. ವಿವೇಕಾನಂದರನ್ನು ಯುವಪೀಳಿಗೆಯ ಸ್ಫೂರ್ತಿ ಮತ್ತು ಮಾರ್ಗದರ್ಶಕ ಎಂದು ಪರಿಭಾವಿಸುತ್ತಲೇ ದೇಶದ ಯುವ ಜನತೆಯನ್ನು ಜಾಗೃತಗೊಳಿಸುವ ನಿಟ್ಟಿನಲ್ಲಿ ಈ ದಿನವನ್ನು ದೇಶಾದ್ಯಂತ ಆಚರಿಸಲಾಗುತ್ತದೆ. ಯುವ ಜನತೆ, ವಿಶೇಷವಾಗಿ ಶತಮಾನದ ಮಕ್ಕಳು ಎನ್ನಲಾಗುವ ಹದಿಹರೆಯದ ಜನಸಮೂಹಕ್ಕೆ ಒಂದು ನಿರ್ದಿಷ್ಟ ಋಜುಮಾರ್ಗವನ್ನು ರೂಪಿಸುವ ನಿಟ್ಟಿನಲ್ಲಿ ವಿವೇಕಾನಂದರು ಎಷ್ಟರ ಮಟ್ಟಿಗೆ ನೆರವಾಗುತ್ತಾರೆ ಎಂಬ ಚರ್ಚೆಯ ನಡುವೆಯೇ, ಇದೇ ಯುವ ಪೀಳಿಗೆಯ ಮಿದುಳಿನಲ್ಲಿ ದ್ವೇಷದ ವಿಷಬೀಜ ಬಿತ್ತುವ ಕೈಂಕರ್ಯವೂ ನಡೆಯುತ್ತಿರುವುದನ್ನು ಗಮನಿಸಬೇಕಿದೆ.

ವಿವೇಕರು ಯುವ ಜನತೆಗೆ ನೀಡಿದ ಸಂದೇಶವಾದರೂ ಏನು ? ಈ ಸಂದೇಶವನ್ನು ಅವರು ಯಾವ ನೆಲೆಯಲ್ಲಿ ನಿಂತು ನೀಡಿದ್ದರು ? ಯಾರನ್ನು ಉದ್ದೇಶಿಸಿ ನೀಡಿದ್ದರು ? ಈ ವಿವೇಕ ವಾಣಿ ಅದರ ಮೂಲ ಭೂಮಿಕೆಯಿಂದ ಕಳಚಿಕೊಂಡು ಮತ್ತಾವುದೋ ವಿಚ್ಚಿದ್ರಕಾರಕ ಸೈದ್ಧಾಂತಿಕ ನೆಲೆಗಳಲ್ಲಿ ಏಕೆ ಸ್ಥಾಪನೆಯಾಗಿದೆ ? ಈ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳದೆ ಹೋದರೆ ಬಹುಶಃ ನಾವು ವಿವೇಕಾನಂದರನ್ನು ಮತ್ತೆ ಮತ್ತೆ ಸಮಾಧಿ ಸ್ಥಿತಿಗೆ ತಲುಪಿಸುತ್ತಲೇ ಉಳಿದುಹೋಗುತ್ತೇವೆ. ಇಂದಿನ ಯುವ ಪೀಳಿಗೆಗೆ ಏನು ಬೇಕಿದೆ ಎಂಬ ಪ್ರಶ್ನೆಗೆ ಉತ್ತರ ಬಹಳ ಸುಲಭ. ಆಧುನಿಕ ತಂತ್ರಜ್ಞಾನ ಯುಗದಲ್ಲಿ ಇಡೀ ಜಗತ್ತನ್ನು ಅಂಗೈಯಲಿ ಹಿಡಿದು ನೋಡುತ್ತಿರುವ ಈ ಪೀಳಿಗೆಯ ಭವಿಷ್ಯ ಎತ್ತ ಸಾಗುತ್ತಿದೆ ಎಂಬ ಪ್ರಶ್ನೆ ನಮ್ಮನ್ನು ತಬ್ಬಿಬ್ಬುಗೊಳಿಸುತ್ತದೆ.

ವಿವೇಕ ವಾಣಿಯ ಪ್ರಸ್ತುತತೆ

ಸಾಮಾಜಿಕ ಮಾಧ್ಯಮಗಳ ಯುಗದಲ್ಲಿ ವಿವೇಕ ವಾಣಿ ಇಂದು ಅನೇಕ ಅಪಭ್ರಂಶಗಳೊಡನೆ ಹರಿದಾಡುವುದು ಸಹಜವಾಗಿಯೇ ಕಾಣುತ್ತದೆ. ವಾಟ್ಸಾಪ್ ವಿಶ್ವವಿದ್ಯಾಲಯದ ವಿದ್ವಾಂಸರು ಅವರ ವಿವೇಕದ ಮಾತುಗಳನ್ನು ತಮ್ಮ ಮತೀಯ ರಾಜಕಾರಣಕ್ಕೆ ತಕ್ಕಂತೆ ಪರಿಷ್ಕರಿಸಿಕೊಳ್ಳುತ್ತಾ ಹೊಸ ವ್ಯಾಖ್ಯಾನಗಳನ್ನು ಬರೆಯಲು ತೊಡಗಿರುತ್ತಾರೆ. ವಿವೇಕಾನಂದರ “ ಏಳಿ ಜಾಗೃತರಾಗಿ, ಗುರಿ ಮುಟ್ಟುವವರೆಗೂ ನಿಲ್ಲದಿರಿ ” ಎನ್ನುವ ಕರೆ ಅಂದಿನ ಯುವ ಪೀಳಿಗೆ ನೀಡಿದ ಕರೆಯಾಗಿತ್ತು. ಇದು ಮೂಲತಃ ಬ್ರಿಟೀಷ್ ವಸಾಹತುಶಾಹಿಯ ವಿರುದ್ಧ ನಡೆಯುತ್ತಿದ್ದ ಸಂಘರ್ಷದ ನೆಲೆಯಲ್ಲಿ ನೀಡಿದ ಒಂದು ವಿವೇಕಯುತ ಸಂದೇಶ. ಹಾಗೆಯೇ ತಮ್ಮ ಕಾಲಘಟ್ಟದಲ್ಲೂ ಭಾರತೀಯ ಸಮಾಜದಲ್ಲಿ ತಾಂಡವಾಡುತ್ತಿದ್ದ ಅಸ್ಪೃಶ್ಯತೆ ಮತ್ತು ಜಾತಿ ದೌರ್ಜನ್ಯಗಳ ವಿರುದ್ಧ ತಳಸಮುದಾಯಗಳಿಗೆ ನೀಡಿದ ಸಂದೇಶ ಎಂದೂ ಅರ್ಥೈಸಬಹುದು.

19ನೆಯ ಶತಮಾನದಲ್ಲಿ ನಾರಾಯಣಗುರು, ಮುನ್ನಾತ್ತು ಪದ್ಮನಾಭನ್ , ಕೆ ಕೇಳಪ್ಪನ್, ವಿ ಟಿ ಭಟ್ಟಾಧಿರಿಪ್ಪಾದ್ ಮುಂತಾದ ಸಮಾಜ ಸುಧಾರಕರ ಅವಿರತ ಪರಿಶ್ರಮದ ಫಲವಾಗಿ ಕೇರಳದಲ್ಲಿ ಬೇರೂರಿದ್ದ ಜಾತಿ ತಾರತಮ್ಯಗಳು ಕ್ಷೀಣಿಸುತ್ತಿದ್ದರೂ, ವಿವೇಕಾನಂದರಿಗೆ ಅಲ್ಲಿ ಜಾತಿ ವಿಷಬೀಜಗಳು ಇನ್ನೂ ಹಸನಾಗಿರುವುದು ಕಂಡುಬಂದಿದ್ದರಿಂದಲೇ ಅವರು ಕೇರಳವನ್ನು “ ಹುಚ್ಚರ ಅಥವಾ ಅವಿವೇಕಿಗಳ ಆಶ್ರಯತಾಣ ” ಎಂದು ಬಣ್ಣಿಸಿದ್ದರು. ಈ ಅವಿವೇಕವನ್ನು ಹೋಗಲಾಡಿಸುವುದೂ ವಿವೇಕಾನಂದರ ಚಿಂತನಾವಾಹಿನಿಯ ಪ್ರಮುಖ ಅಂಶವಾಗಿತ್ತು ಎನ್ನುವುದನ್ನು ಜಾಣ್ಮೆಯಿಂದ ಮರೆಮಾಚುತ್ತಲೇ ಅವರನ್ನು ಕೇವಲ ಹಿಂದೂ ಪುನರುತ್ಥಾನದ ಸಂತನನ್ನಾಗಿ ಬಿಂಬಿಸುತ್ತಿರುವುದನ್ನು ಕಾಣುತ್ತಿದ್ದೇವೆ. ಕೇರಳದಲ್ಲಿ ವಿವೇಕರು ಅಂದು ಕಂಡ ಸಾಮಾಜಿಕ ಅವಿವೇಕ ಇಂದು ಭಾರತದ ಪ್ರತಿಯೊಂದು ರಾಜ್ಯದಲ್ಲೂ ತಾಂಡವಾಡುತ್ತಿರುವುದನ್ನು ಮನಗಾಣದಿದ್ದರೆ ಯುವ ಪೀಳಿಗೆಗೆ ಯಾವ ಸಂದೇಶ ನೀಡಲು ಸಾಧ್ಯ ?

C M Siddaramaiah: ನಕ್ಸಲ್‌ರ ಬಗ್ಗೆ ಸಿಎಂ ಸಿದ್ದರಾಮಯ್ಯ ಏನಂದ್ರು..#naxalleadersundari #politics #bjp

“ ಆತ್ಮವಿಶ್ವಾಸವನ್ನು ಹೊಂದಿರಿ ಜಗತ್ತು ನಿಮ್ಮ ಕಾಲಡಿ ಇರುತ್ತದೆ ” ಎಂಬ ವಿವೇಕರ ವಾಣಿಯನ್ನು ಇಂದಿನ ಯುವ ಪೀಳಿಗೆ ಹೇಗೆ ಅರ್ಥೈಸಬೇಕು ? ಯಾವ ಜಗತ್ತನ್ನು ತಮ್ಮ ಕಾಲಡಿಯಲ್ಲಿ ಕಾಣಲು ಯುವ ಜನತೆ ತವಕಿಸಬೇಕು ? ತಂತ್ರಜ್ಞಾನದ ಮೂಲಕ ತಮ್ಮ ಅಂಗೈಯ್ಯಲ್ಲೇ ಇಡೀ ವಿಶ್ವವನ್ನು ಕಾಣುತ್ತಿರುವ ಯುವ ಪೀಳಿಗೆಗೆ ತಮ್ಮ ಭವಿಷ್ಯದ ದಿನಗಳನ್ನು ಕರಾಳ ಕೂಪಕ್ಕೆ ದೂಡುತ್ತಿರುವ ಶಕ್ತಿಗಳು ಯಾವುದು ಎಂದು ಅರ್ಥವಾಗದೆ ಹೋದರೆ ಅವರು ವಿವೇಕರ ಈ ವಾಣಿಯನ್ನು ಹೇಗೆ ಪರಿಭಾವಿಸಲು ಸಾಧ್ಯ ? ಆತ್ಮನಿರ್ಭರ ಭಾರತದಲ್ಲಿ ಮುಂದಿಡಲಾಗುವ ಪ್ರತಿಯೊಂದು ಹೆಜ್ಜೆಯೂ ಅನಿಶ್ಚಿತತೆಯಿಂದ ಕೂಡಿರುತ್ತದೆ. ಏಕೆಂದರೆ ಆಳುವ ವರ್ಗಗಳು, ಆಡಳಿತ ವ್ಯವಸ್ಥೆ ತನ್ನ ಸಾಮಾಜಿಕ ಕರ್ತವ್ಯಗಳಿಂದ ವಿಮುಖವಾಗಿ, ವ್ಯಾಪಾರಿ ಧೋರಣೆಯನ್ನು ತಾಳುತ್ತಿದೆ. ಯುವ ಪೀಳಿಗೆಯ ಭವಿಷ್ಯದ ಕನಸುಗಳು ಇಂದು ಆಳುವವರ ಕಾಲಡಿಯಲ್ಲಿರುವುದನ್ನು ಮನಗಾಣಬೇಕಲ್ಲವೇ?

ಸಮಕಾಲೀನ ಅವಿವೇಕಗಳ ನಡುವೆ

ಶಿಕ್ಷಣ ನಮ್ಮ ಹೊಣೆ ಅಲ್ಲ, ಆರೋಗ್ಯ ಕಾಳಜಿ ನಮ್ಮ ಹೊರೆ ಅಲ್ಲ ಎಂದು ಘಂಟಾಘೋಷವಾಗಿ ಹೇಳುವ ಒಂದು ಆಡಳಿತ ವ್ಯವಸ್ಥೆಯನ್ನು ಇದೇ ಯುವ ಪೀಳಿಗೆಯೇ ಅನುಮೋದಿಸುತ್ತಿದೆ. “ ಯುವ ಪೀಳಿಗೆಯೇ ಭವಿಷ್ಯದ ಮಾನವ ಕುಲ, ನಿಮ್ಮ ಕ್ರಿಯೆಯಲ್ಲಿ ಇರಬಹುದಾದ ಆಶಯಗಳಿಗೆ ಗಮನ ನೀಡಿ, ನೀವು ಉತ್ತಮ ಮಾನವರಾಗಿ ರೂಪುಗೊಳ್ಳುವಿರಿ ” ಎಂಬ ವಿವೇಕಾನಂದರ ಸಂದೇಶ ಇಂದು ಹೆಚ್ಚು ಪ್ರಸ್ತುತ ಎನಿಸುತ್ತದೆ. ಆದರೆ ಈ ಸಂದೇಶ ನೀಡಿದ ಶತಮಾನದ ನಂತರವೂ ನಾವು ಮಾನವತೆಯ ನೆಲೆಗಳಿಗಾಗಿ ಶೋಧ ನಡೆಸುತ್ತಿದ್ದೇವೆ. ಯುವಮನಸುಗಳಲ್ಲಿ ಜಾತಿ ದ್ವೇಷ, ಕೋಮು ದ್ವೇಷ, ಮತಾಂಧತೆ ಮತ್ತು ಸ್ವಾರ್ಥಪರತೆಯನ್ನು ಬಿತ್ತುತ್ತಲೇ ತಮ್ಮ ಅಧಿಕಾರ ಪೀಠಗಳನ್ನು ಸಂರಕ್ಷಿಸುತ್ತಿರುವ ರಾಜಕೀಯ ನಾಯಕತ್ವ ಯುವ ಪೀಳಿಗೆಯನ್ನು ಅಕ್ಷರಶಃ ಚುನಾವಣಾ ಬಂಡವಾಳದ ಉತ್ಪಾದನೆಗೆ ಕಚ್ಚಾವಸ್ತುಗಳನ್ನಾಗಿ ಮಾಡಿಬಿಟ್ಟಿದೆ.

ಈ ಯುವ ಪೀಳಿಗೆ ಏಕೆ ಹೀಗಾಗಿದೆ ? ಭಾರತದ ಯುವ ಪೀಳಿಗೆ, ಶತಮಾನದ ಪೀಳಿಗೆ ಇಂದು ಯಾವ ಹಾದಿಯಲ್ಲಿ ಸಾಗಬೇಕು ? ಸಮ ಸಮಾಜದ ಕನಸಿನೊಂದಿಗೆ, ಸಮಾನತೆಯ ಆಶಯದೊಂದಿಗೆ, ಭ್ರಾತೃತ್ವ ಮತ್ತು ಸೌಹಾರ್ದತೆಯ ಭರವಸೆಯ ಕಿರಣಗಳನ್ನು ಹಿಂಬಾಲಿಸಿ ನಡೆಯಬೇಕಾದ ಯುವ ಜನತೆಗೆ ಇಂದು ಅಸಮಾನತೆಯೇ ತಾಂಡವಾಡುತ್ತಿರುವ ಅರ್ಥವ್ಯವಸ್ಥೆ ಎದುರಾಗಿದೆ. ವಿವೇಕರಿಗೆ 19ನೆಯ ಶತಮಾನದಲ್ಲಿ ಕಂಡ “ ಅವಿವೇಕಿಗಳ ಆಶ್ರಯತಾಣ ” ಇಂದು ದೇಶದ ಎಲ್ಲೆಡೆ ಜಾತಿ ದೌರ್ಜನ್ಯಗಳ ನಡುವೆ, ಅಸ್ಪೃಶ್ಯತೆ, ಸಾಮಾಜಿಕ ಬಹಿಷ್ಕಾರ, ಅತ್ಯಾಚಾರ, ಹೆಣ್ಣು ಭ್ರೂಣ ಹತ್ಯೆಗಳ್ಲಿ ಕಾಣುತ್ತಿದೆ. “ಭವಿಷ್ಯದಲ್ಲಿನ ನನ್ನ ಭರವಸೆ ಯುವ ಪೀಳಿಗೆಯ ಬೌದ್ಧಿಕ ಶಕ್ತಿ ಮತ್ತು ಲಕ್ಷಣಗಳಲ್ಲಿ ಅಡಗಿದೆ, ತಮ್ಮ ಅಂತಃಶಕ್ತಿಗೆ ಬದ್ಧರಾಗಿರುವ ಮೂಲಕ ಯುವ ಪೀಳಿಗೆ ದೇಶದ ಒಳಿತಿಗಾಗಿ ಬದ್ಧತೆ ಪ್ರದರ್ಶಿಸಬೇಕಿದೆ ” ಎಂಬ ವಿವೇಕಾನಂದರ ಸಂದೇಶವನ್ನು ಮತಾಂಧತೆಗೆ, ಮತೀಯ ದ್ವೇಷಕ್ಕೆ , ಜಾತಿ ಶ್ರೇಷ್ಠತೆ ಮತ್ತು ಅಸ್ಪೃಶ್ಯತೆಯ ಆಚರಣೆಗೆ ಬದ್ಧರಾಗುತ್ತಿರುವ ಯುವ ಪೀಳಿಗೆಗೆ ಹೇಗೆ ತಲುಪಿಸುವುದು ?

ನಿತ್ಯ ಅತ್ಯಾಚಾರಕ್ಕೊಳಗಾಗುತ್ತಿರುವ ಹರೆಯದ ಯುವತಿಯರು, ತಾನು ಪ್ರೀತಿಸಿದ ಯುವಕನನ್ನು ಮದುವೆಯಾಗುವ ಸ್ವಾತಂತ್ರ್ಯವನ್ನೂ ಕಳೆದುಕೊಂಡು ಗೌರವಹತ್ಯೆಯ ಹೆಸರಿನಲ್ಲಿ, ಲವ್ ಜಿಹಾದ್ ಹೆಸರಿನಲ್ಲಿ ಹತ್ಯೆಗೀಡಾಗುತ್ತಿರುವ ಮಹಿಳೆಯರು, ಮತೀಯ ರಾಜಕಾರಣಕ್ಕೆ ಬಲಿಯಾಗುತ್ತಿರುವ ವಿದ್ಯಾರ್ಥಿ ಸಮುದಾಯದ ಯುವಕರು ಈ ಬೃಹತ್ ಸಮೂಹಕ್ಕೆ ವಿವೇಕಾನಂದರನ್ನು ಹೇಗೆ ತಲುಪಿಸುವುದು ? “ಎಂದಿಗೂ ದುರ್ಬಲರಾಗಬೇಡಿ, ಬಲಿಷ್ಠರಾಗಿ, ನಿಮ್ಮೊಳಗೆ ಅಪಾರ ಶಕ್ತಿ ಅಡಗಿದೆ, ನಿಮ್ಮ ಭವಿಷ್ಯವನ್ನು ನೀವೇ ನಿರ್ಧರಿಸುತ್ತೀರಿ ” ಎಂದು ವಿವೇಕಾನಂದರು ಹೇಳುತ್ತಾರೆ. ಬಲಿಷ್ಠರಾಗುವುದು, ಆತ್ಮಬಲ ವೃದ್ಧಿಸಿಕೊಳ್ಳುವುದು ಎಂದರೆ ಏನರ್ಥ ? ಅನ್ಯ ಮತ ದ್ವೇಷಕ್ಕೆ ಬಲಿಯಾಗಿ ತಲವಾರು, ಲಾಂಗು, ಮಚ್ಚು, ತ್ರಿಶೂಲಗಳನ್ನು ಹಿಡಿದು ಸಾಮೂಹಿಕ ನರಮೇಧಕ್ಕೆ ಸಿದ್ಧರಾಗುವುದೇ ?

ವಿವೇಕಾನಂದರು ಈ “ಬಲ”ವನ್ನು ಕುರಿತು ಹೇಳಿದ್ದರೇ ? ತಮ್ಮದೇ ಸಮುದಾಯಕ್ಕೆ ಸೇರಿದ ಅಪ್ರಾಪ್ತ ಯುವತಿ ತಮ್ಮವರಿಂದಲೇ ಅತ್ಯಾಚಾರಕ್ಕೊಳಗಾದಾಗ, ಹತ್ಯೆಗೀಡಾದಾಗ ವಿಚಲಿತವಾಗದ ಯುವ ಮನಸುಗಳು, ಅದೇ ಯುವತಿ ಮತ್ತೊಂದು ಮತಕ್ಕೆ ಸೇರಿದ ಯುವಕನೊಡನೆ ಓಡಾಡಿದರೆ ವ್ಯಗ್ರವಾಗುವುದಾದರೂ ಏಕೆ ? ಇಂತಹ ಯುವತಿಯರ ಮೇಲೆ ನಡುರಸ್ತೆಯಲ್ಲೇ ದಾಳಿ ನಡೆಸಲು, ಹತ್ಯೆ ಮಾಡಲು, ಥಳಿಸಲು ಪ್ರೇರೇಪಣೆ ನೀಡುವ ಚಿಂತನಾ ವಾಹಿನಿಯಾದರೂ ಯಾವುದು ? ಈ ಚಿಂತನಾ ವಾಹಿನಿಗಳನ್ನು ಪೋಷಿಸಿ, ಸಂರಕ್ಷಿಸಿ, ಬೆಳೆಸುವ ವಿಚ್ದಿದ್ರಕಾರಿ ಶಕ್ತಿಗಳನ್ನು ತಮ್ಮ ರಾಜಕೀಯ ಲಾಭಕ್ಕಾಗಿ ಬಂಡವಾಳದಂತೆ ಬಳಸಿಕೊಳ್ಳುವ ರಾಜಕೀಯ ಪಕ್ಷಗಳು ಯುವ ಜನೋತ್ಸವದಲ್ಲಿ ಯಾವ ಸಂದೇಶ ನೀಡಲು ಸಾಧ್ಯ ?

ಬಡತನ, ಹಸಿವು, ಅನಿಶ್ಚಿತ ಭವಿಷ್ಯ, ಸಾಮಾಜಿಕ-ಆರ್ಥಿಕ ಅಭದ್ರತೆ ಇವುಗಳ ನಡುವೆಯೇ ಯುವ ಪೀಳಿಗೆಯನ್ನು ಸಲಹುತ್ತಿರುವ ಒಂದು ಆಡಳಿತ ವ್ಯವಸ್ಥೆ, ಈ ಯುವ ಸಮೂಹದ ಭವಿಷ್ಯತ್ತಿಗೆ ಆಶಾದಾಯಕವಾದ ಮಾರ್ಗಗಳನ್ನು ರೂಪಿಸುವ ಸಾಂಸ್ಕೃತಿಕ ನೆಲೆಗಳನ್ನೂ ತನ್ನ ಮತೀಯ ದ್ವೇಷದ ಬೀಜ ಬಿತ್ತನೆ ಮೂಲಕ ಮಲಿನಗೊಳಿಸುತ್ತಿದೆ. ವಿವೇಕಾನಂದರ ಜನ್ಮದಿನಾಚರಣೆಯನ್ನು ಯುವ ಜನೋತ್ಸವ ಎಂದು ಆಚರಿಸುವ ಮುನ್ನ ಈ ಆತ್ಮಾವಲೋಕನ ಅವಶ್ಯ ಎನಿಸುವುದಿಲ್ಲವೇ ? ಯಾವ ಯುವಪೀಳಿಗೆಗಾಗಿ ಈ ಆಚರಣೆ ? ಧರ್ಮ ಸಂಸತ್ತುಗಳಲ್ಲಿ ತ್ರಿಶೂಲ ದೀಕ್ಷೆ ಪಡೆವ, ತಲವಾರು ಬಳಕೆಯ ತರಬೇತು ಯುವ ಪಡೆಗಳಿಗೋ ? ಅಥವಾ ಹಸಿವು, ನಿರುದ್ಯೋಗದ ಅನಿಶ್ಚಿತತತೆಯ ತೂಗುಗತ್ತಿಯ ಕೆಳಗೆ ಜೀವನ ಸವೆಸುತ್ತಿರುವ ಭಾರತದ ಕೋಟ್ಯಂತರ ಯುವ ಜನತೆಗೋ ?

Siddaramaiah :ಸಿದ್ದರಾಮಯ್ಯನ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ಸ್ವಾಮೀಜಿ..! #pratidhvani #cmsiddaramaiah #dks

ವಿವೇಕ ಮತ್ತು ವಿವೇಚನೆ ಕಳೆದುಕೊಂಡಿರುವ ಒಂದು ಸಾಮಾಜಿಕ ವ್ಯವಸ್ಥೆಯಲ್ಲಿ ಈ ಆತ್ಮಾವಲೋಕನ ಸಾಧ್ಯವಾಗದೆ ಹೋದರೆ ವಿವೇಕಾನಂದರನ್ನು ಸ್ಮರಿಸದೆ ಇರುವುದೇ ಒಳಿತು.
-0-0-0-0

Tags: concept of prudence and conservatismdrawing vivekanandafranciscans of the immaculatehow to draw swami vivekanandamother of the redeemer retreat centermusic by prudenceprudenceprudence emersonprudence in wisdomprudence mabhenaprudence principleprudence pronunciationprudence quotesprudence ralph waldo emersonprudenciaquotes of swami vivekanandaquotes of the dayswami vivekananda biographyswami vivekananda drawingswami vivekananda lifeswami vivekananda on egoswami vivekananda quotesswami vivekananda quotes in hindiswami vivekananda speechswami vivekananda statueswami vivekananda storythe pocket oracle and art of prudencethe virtue of prudencevivekanandavivekananda documentarvivekananda drawingvivekananda quotesvivekananda teachingswhat is the meaning of matching principleword of the day swami vivekananda
Previous Post

ಕಂಬಳಕ್ಕೆ ಎಲ್ಲಾ ರೀತಿಯ ಪ್ರೋತ್ಸಾಹ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ನನ್ನ ವಿರುದ್ಧ ಬರೆದರೂ ಚಿಂತೆಯಿಲ್ಲ, ಸತ್ಯಾಂಶ ಶೋಧಿಸಿ ಬರೆಯಿರಿ: ಡಿಸಿಎಂ ಡಿ.ಕೆ. ಶಿವಕುಮಾರ್

Related Posts

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ
Top Story

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

by ಪ್ರತಿಧ್ವನಿ
December 7, 2025
0

ಕ್ರಿಕೆಟ್‌ ಕ್ವೀನ್‌ ಖ್ಯಾತಿಯ ಭಾರತದ ಕ್ರಿಕೆಟ್‌ ಮಹಿಳಾ ತಂಡದ ಸ್ಟಾರ್‌ ಆಟಗಾರ್ತಿ ಸ್ಮೃತಿ ಮಂಧಾನಾ(Smriti Mandhana) ಮದುವೆ ಮುಂದೂಡಿದ ಬಳಿಕ ಕೊನೆಗೂ ಮೌನ ಮುರಿದಿದ್ದು, ಪಲಾಶ್ ಮುಚ್ಚಲ್(Palash...

Read moreDetails
ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

December 7, 2025
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

December 7, 2025
ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

December 7, 2025
ಗೋವಾ ನೈಟ್ ಕ್ಲಬ್‌ನಲ್ಲಿ ಅಗ್ನಿ ದುರಂತ: 25 ಮಂದಿ ಸಾ**

ಗೋವಾ ನೈಟ್ ಕ್ಲಬ್‌ನಲ್ಲಿ ಅಗ್ನಿ ದುರಂತ: 25 ಮಂದಿ ಸಾ**

December 7, 2025
Next Post

ನನ್ನ ವಿರುದ್ಧ ಬರೆದರೂ ಚಿಂತೆಯಿಲ್ಲ, ಸತ್ಯಾಂಶ ಶೋಧಿಸಿ ಬರೆಯಿರಿ: ಡಿಸಿಎಂ ಡಿ.ಕೆ. ಶಿವಕುಮಾರ್

Recent News

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ
Top Story

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

by ಪ್ರತಿಧ್ವನಿ
December 7, 2025
ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK
Top Story

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

by ಪ್ರತಿಧ್ವನಿ
December 7, 2025
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌
Top Story

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

by ಪ್ರತಿಧ್ವನಿ
December 7, 2025
ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?
Top Story

ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

by ಪ್ರತಿಧ್ವನಿ
December 7, 2025
Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!
Top Story

Daily Horoscope: ಇಂದು ಸಂಪತ್ತು ಹೆಚ್ಚುವ ರಾಶಿಗಳಿವು..!

by ಪ್ರತಿಧ್ವನಿ
December 7, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

ಪಲಾಶ್ ಮುಚ್ಚಲ್ ಜೊತೆಗಿನ ಮದುವೆ ರದ್ದಾಗಿದೆ: ಸ್ಮೃತಿ ಮಂಧಾನಾ ಸ್ಪಷ್ಟನೆ

December 7, 2025
ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್ ಗೆ ಸಂಕಷ್ಟ

ಸಾಕ್ಷ್ಯ ನಾಶಕ್ಕೆ ಹಣ ಕೇಸ್ – ಪ್ರದೋಷ್ ಹೇಳಿಕೆಯಿಂದ ದರ್ಶನ್ ಗೆ ಸಂಕಷ್ಟ

December 7, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada