• Home
  • About Us
  • ಕರ್ನಾಟಕ
Friday, July 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

CM Siddaramaiah: ಹಿಂಸೆ ಹಾಗೂ ಪ್ರಚೋದನೆಗಳನ್ನು ತಡೆದರೆ ಸಮಾಜದ ಒಳಿತು ಸಾಧ್ಯ..

ಪ್ರತಿಧ್ವನಿ by ಪ್ರತಿಧ್ವನಿ
July 16, 2025
in Uncategorized
0
Share on WhatsAppShare on FacebookShare on Telegram

ಶಾಂತಿ ಸುವ್ಯವಸ್ಥೆ ಹಾಗೂ ಅಭಿವೃದ್ಧಿಗೆ ನೇರ ಸಂಬಂಧವಿದೆ. ಹಿಂಸೆ ಹಾಗೂ ಪ್ರಚೋದನೆಗಳನ್ನು ತಡೆದರೆ ಸಮಾಜದ ಒಳಿತು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕರ್ನಾಟಕ ರಾಜ್ಯ ಪೊಲೀಸ್ ಮತ್ತು ಬಿಎಮ್ಆರ್‌ಸಿಎಲ್ ಸಹಯೋಗದೊಂದಿಗೆ ಬೆಂಗಳೂರಿನ ಕೋರಮಂಗಲದ ಸಿಲ್ಕ್ ಬೋರ್ಡ್ ಜಂಕ್ಷನ್ ಹತ್ತಿರ ನಿರ್ಮಿಸಿರುವ KSRP ಸಮುದಾಯ ಭವನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.

ADVERTISEMENT

2024 ರಲ್ಲಿ ಅಪರಾಧಗಳ ಸಂಖ್ಯೆ ಇಳಿಕೆ

ಸಮಾಜದ ಶಾಂತಿ ಸುವ್ಯವಸ್ಥೆ, ಜನರ ಆಸ್ತಿ ಮಾನಪ್ರಾಣಗಳನ್ನು ಕಾಪಾಡುವಲ್ಲಿ ಪೊಲೀಸ್ ಇಲಾಖೆ ಬಹುಮುಖ್ಯ ಪಾತ್ರ ವಹಿಸುತ್ತದೆ. ಯಾವುದೇ ಪ್ರದೇಶ ಸುರಕ್ಷಿತವಾಗಿದ್ದಲ್ಲಿ, ಅಲ್ಲಿನ ಪೊಲೀಸರ ಶ್ರಮವಿರುತ್ತದೆ. ರಾಜ್ಯದಲ್ಲಿ ಏಳು ಕೋಟಿ ಜನರ ರಕ್ಷಣೆಗೆ ಪೊಲೀಸರು ಬದ್ಧತೆ ತೋರುತ್ತಾರೆ. ರಾಜ್ಯದಲ್ಲಿ 2023 ರಲ್ಲಿ ಹೋಲಿಸದರೆ 2024 ರಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಾಗಿದೆ. ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಸುರಕ್ಷಿತ ವಾತಾವರಣವಿದೆಯೇ, ಜನರ ನೆಮ್ಮದಿ ಬದುಕಿಗೆ ಯೋಗ್ಯವಾದ ಸ್ಥಳವಾಗಿದೆಯೇ ಎಂಬುದನ್ನು ನೋಡಬೇಕೇ ಹೊರತು, ಅಪರಾಧಗಳ ಸಂಖ್ಯೆ ಕಡಿಮೆಯಾಗಿದೆಯೇ ಎಂಬುದನ್ನು ಪರಿಗಣಿತವಾಗುವುದಿಲ್ಲ ಎಂದರು.

CM Siddaramaiah:  ನ್ಯಾಯ ಯೋಧ ರಾಹುಲ್ ಗಾಂಧಿಯವರ ಧೈರ್ಯಕ್ಕೆ ಅಭಿನಂದಿಸಿದ ಸಿಎಂ .  #pratidhvani

ರಾಜ್ಯದ ಅಭಿವೃದ್ಧಿಯು , ಪೊಲೀಸರ ಕಾರ್ಯಕ್ಷಮತೆಯ ಮೇಲೆ ಅವಲಂಬಿತವಾಗಿರುತ್ತದೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹಾಗೂ ಅಭಿವೃದ್ಧಿಗೆ ನೇರ ಸಂಬಂಧವಿದೆ. ಈ ದಿಸೆಯಲ್ಲಿ ಪೊಲೀಸರು ಶ್ರಮಿಸುತ್ತಿರುವುದು ಅಭಿನಂದನೀಯ.

ರಾಜ್ಯದಲ್ಲಿ ಅಪರಾಧಗಳ ಸಂಖ್ಯೆಯನ್ನು ಕಡಿಮೆಗೊಳಿಸುವತ್ತ ಪೊಲೀಸರು ಹೆಚ್ಚಿನ ಗಮನ ನೀಡಬೇಕು. ಸಮಾಜದಲ್ಲಿ ಅಶಾಂತಿ, ಹಿಂಸೆ, ಕ್ರೌರ್ಯ, ದ್ವೇಷಪೂರಿತ ಭಾಷಣದಿಂದ ಪ್ರಚೋದನೆಗಳು ಹೆಚ್ಚುತ್ತಿರುವುದನ್ನು ಕಾಣಲಾಗುತ್ತಿದೆ. ಸಮಾಜದಲ್ಲಿ ಶಾಂತಿ ಕದಡುವ ಹಾಗೂ ಹಿಂಸೆ, ದ್ವೇಷವನ್ನು ಪ್ರಚೋದಿಸುವುದನ್ನು ತಡೆದಾಗ ಮಾತ್ರ ಸಮಾಜದ ಒಳಿತು ಸಾಧ್ಯವಾಗುತ್ತದೆ ಎಂದರು.

ನಿಷ್ಠಾವಂತ ಅಧಿಕಾರಿಗಳಿಗೆ ಅಪರಾಧ ತಡೆಗಟ್ಟುವುದು ಕಷ್ಟದ ಕೆಲಸವಲ್ಲ

ನಾನು ಲಾಯರ್ ವೃತ್ತಿಯಲ್ಲಿದ್ದಾಗ, ಪೊಲೀಸರ ಕಾರ್ಯನಿರ್ವಹಣೆಯನ್ನು ಗಮನಿಸುತ್ತಿದ್ದ ಬಗ್ಗೆ ತಮ್ಮ ಅನುಭವವನ್ನು ಹಂಚಿಕೊಳ್ಳುತ್ತಾ, ಉತ್ತಮ ಅಧಿಕಾರಿಗಳಿದ್ದಲ್ಲಿ ಅಂತಹ ಕಡೆ ಅಪರಾಧಗಳು ಕಡಿಮೆಯಿರುವುದು ಗಮನಾರ್ಹ. ನಿಷ್ಠಾವಂತ ಅಧಿಕಾರಿಗಳಿಗೆ ಅಪರಾಧ ತಡೆಗಟ್ಟುವುದು ಕಷ್ಟದ ಕೆಲಸವಲ್ಲ ಎಂದು ತಿಳಿಸಿದರು.

Siddaramaiah : ಸಿದ್ದರಾಮಯ್ಯ ಇದು ನನ್ನ ಕೊನೆ ಚುನಾವಣೆ ಅಂತ, ಡಿಕೆಶಿಗೆ ಹೇಳಿ ಕೊಟ್ಟ ಮಾತು ತಪ್ಪಿದ್ರಾ..?

ಕೋಮುಗಲಭೆಗಳನ್ನು ತಡೆಯಬೇಕಾದ್ದು ಅಗತ್ಯ ಮತ್ತು ಅನಿವಾರ್ಯ

ಕೆಳ ಮಟ್ಟದ ಪೊಲೀಸ್ ಅಧಿಕಾರಿಗಳ ಜೊತೆಗೆ ಉತ್ತಮವಾದ ಬಾಂಧವ್ಯವನ್ನು ಹೊಂದಿಕೊಂಡು ಕೆಲಸ ಮಾಡುವುದು ಒಳ್ಳೆಯದು. ಹಿರಿಯ ಅಧಿಕಾರಿಗಳು ಆಗಾಗ್ಗೆ ಪೋಲೀಸ್ ಠಾಣೆಗೆ ಭೇಟಿ ನೀಡಬೇಕು.ಇತರೆ ಇಲಾಖೆಗಳಿಗೆ ಹೋಲಿಸಿದರೆ ಪೊಲೀಸ್ ಇಲಾಖೆಯಲ್ಲಿ ಶ್ರೇಣಿ ವ್ಯವಸ್ಥೆ ಹೆಚ್ಚಿದೆ. ಶಿಸ್ತು ಕೂಡ ಹೆಚ್ಚಿದೆ. ನೀವು ಮನಸ್ಸು ಮಾಡಿದರೆ ಅಪರಾಧಗಳು ತಾನಾಗಿಯೇ ಕಡಿಮೆಯಾಗಲು ಸಾಧ್ಯವಾಗುತ್ತದೆ.

ಅಲ್ಲಿ ಕೋಮುಗಲಭೆಗಳು ಆಗಾಗ್ಗೆ ನಡೆಯುತ್ತಲೇ ಇರುವುದರಿಂದ ಕರಾವಳಿಯಲ್ಲಿ ವಿಶೇಷ ಕಾರ್ಯಪಡೆಯನ್ನು ರಚಿಸಲಾಗಿದೆ. ಕೋಮುಗಲಭೆಗಳನ್ನು ಹತ್ತಿಕ್ಕುವುದು ಅಗತ್ಯವಾಗಿ ಆಗಬೇಕಿದೆ. ಕೋಮುಗಲಭೆಗಳು ನಡೆಯಬಾರದು. ಅದು ಪ್ರಾರಂಭವಾದರೆ ನಿರಂತರವಾಗಿ ನಡೆಯುತ್ತವೆ. ಅದಕ್ಕಾಗಿ ಪ್ರಾರಂಭದಲ್ಲಿಯೇ ಕೋಮುಗಲಭೆಗಳನ್ನು ತಡೆಯಬೇಕಾದ್ದು ಅಗತ್ಯ ಮತ್ತು ಅನಿವಾರ್ಯ ಎಂದು ತಿಳಿಸಿದರು.

ಮಾದಕವಸ್ತುಗಳನ್ನು ಸಂಪೂರ್ಣ ನಿರ್ನಾಮ ಮಾಡಬೇಕು
ಇತ್ತೀಚೆಗೆ ನಡೆದ ಪೊಲೀಸ್ ಸಮ್ಮೇಳನದಲ್ಲಿಯೂ ಹಲವು ವಿಚಾರಗಳನ್ನು ಪ್ರಸ್ತಾಪಿಸಲಾಗಿದೆ. 2023 ಕ್ಕೆ ಹೋಲಿಸಿದರೆ ಸೈಬರ್ ಅಪರಾಧಗಳು 2024 ರಲ್ಲಿ ಹೆಚ್ಚಾಗಿವೆ. ಕೊಲೆ, ದರೋಡೆ, ಸರಗಳ್ಳತನ ಮುಂತಾದ ಅಪರಾಧ ಪ್ರಕರಣಗಳು ಕಡಿಮೆಯಾಗಿವೆ. ಮಾದಕ ವಸ್ತುಗಳಿಂದ ನಮ್ಮ ಯುವ ಪೀಳಿಗೆ ಹಾಳಾದರೆ ಭವಿಷ್ಯ ಹಾಳಾಗುತ್ತದೆ. ಪೊಲೀಸರನ್ನು ಕಂಡರೆ ನಾಗರಿಕರಿಗೆ ಭಯ ಹಾಗೂ ಸ್ನೇಹ ಎರಡೂ ಇರಬೇಕು. ಪೋಲಿಸ್ ಠಾಣೆಗಳು ಜನಸ್ನೇಹಿಯಾಗಿರಬೇಕು. ನಾಗರಿಕರೊಂದಿಗೆ ಒಡನಾಟವಿಟ್ಟುಕೊಂಡು ಅವರ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಬೇಕು . ಆಗ ಪರಿಹಾರಗಳು ಹೊಳೆಯುತ್ತವೆ. ಮಾದಕವಸ್ತುಗಳನ್ನು ಸಂಪೂರ್ಣ ನಿರ್ನಾಮ ಮಾಡಬೇಕು. ಸೈಬರ್ ಅಪರಾಧಗಳನ್ನು ಕಡಿಮೆ ಮಾಡುವ ಪ್ರಯತ್ನ ಮಾಡಬೇಕು ಎಂದರು.

ಪೊಲೀಸ್ ಸಿಬ್ಬಂದಿ ಬಲಪಡಿಸಲು ಸರ್ಕಾರ ಸಿದ್ಧ

ಪೊಲೀಸ್ ಸಿಬ್ಬಂದಿಯನ್ನು ಬಲಗೊಳಿಸಲು ಅವಶ್ಯವಿರುವುದನ್ನು ಒದಗಿಸಲು ನಮ್ಮ ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು. ಅಪರಾಧಗಳನ್ನು ಎಷ್ಟು ಕಡಿಮೆ ಮಾಡಲು ಸಾಧ್ಯವೋ ಅಷ್ಟು ಪ್ರಯತ್ನ ಮಾಡಲೇಬೇಕೆಂದು ಆಗ್ರಹಿಸಿದರು.

ಪೊಲೀಸ್ ಪೇದೆ ಹಾಗೂ ಸಹಾಯಕ ಪೊಲೀಸ್ ನಿರೀಕ್ಷಕರಿಗೆ ಕಡಿಮೆ ದರದಲ್ಲಿ ಸಮುದಾಯ ಭವನವನ್ನು ಒದಗಿಸಿ
ಪೊಲೀಸ್ ಸಮುದಾಯ ಭವನ ಸುಸಜ್ಜಿತವಾಗಿದ್ದು ನಿರ್ವಹಣೆಗೆ ಅಗತ್ಯವಿರುವಷ್ಟು ಆದಾಯ ಬರುವಂತೆ ಮಾಡಿಕೊಳ್ಳಬೇಕು ಎಂದರು. ಖಾಸಗಿಯವರಿಗೆ ಸ್ವಲ್ಪ ಹೆಚ್ಚಿನ ದರದಲ್ಲಿಯೇ ನೀಡಿದರೂ ಪೊಲೀಸ್ ಪೇದೆಗಳು ಹಾಗೂ ಸಹಾಯಕ ಪೊಲೀಸ್ ನಿರೀಕ್ಷಕರಿಗೆ ಕಡಿಮೆ ದರದಲ್ಲಿ ಅಥವಾ ನಿರ್ವಹಣಾ ವೆಚ್ಚ ಪಡೆದು ಸಮುದಾಯ ಭವನವನ್ನು ಒದಗಿಸುವಂತೆ ಮುಖ್ಯಮಂತ್ರಿಗಳು ಸಲಹೆ ನೀಡಿದರು. ಪೊಲೀಸ್ ಪೇದೆಗಳು ಅಪರಾಧಗಳನ್ನು ಕಡಿಮೆ ಮಾಡಲು ಹಗಲು ರಾತ್ರಿ ಕೆಲಸ ಮಾಡುತ್ತಾರೆ. ಪೇದೆಗಳು ಹಾಕುವ ಟೋಪಿಗಳ ಬದಲಿಗೆ ಪಿ ಕ್ಯಾಪ್ ಒದಗಿಸಲು ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಲಾಗಿದೆ ಎಂದರು.

ಅಗತ್ಯಬಿದ್ದರೆ ತಪಾಸಣಾ ವೆಚ್ಚದ ಹೆಚ್ಚಿಸಲಾಗುವುದು
ಪೊಲೀಸ್ ವೈದ್ಯಕೀಯ ತಪಾಸಣಾ ವೆಚ್ಚವನ್ನು ಒಂದೂವರೆ ಸಾವಿರ ರೂ.ಗಳಿಗೆ ಹೆಚ್ಚಿಸಿದ್ದು, ಅದನ್ನು ಹೆಚ್ಚಿಸುವ ಅಗತ್ಯ ಬಿದ್ದರೆ ಹೆಚ್ಚಿಸಲಾಗುವುದು ಎಂದರು.

ಬೆಂಗಳೂರು ದೊಡ್ಡದಾಗಿ ಬೆಳೆಯುತ್ತಿರುವ ನಗರ. ಎಂಟು ಪೊಲೀಸ್ ವಿಭಾಗಗಳನ್ನು 11 ವಿಭಾಗಳಿಗೆ ಹೆಚ್ಚಿಸಿದ್ದು, ಡಿಸಿಪಿಗಳನ್ನು ಕೂಡ ಹೆಚ್ಚಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸಿ
ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸುವುದು ಅಗತ್ಯ ಎಂದ ಮುಖ್ಯಮಂತ್ರಿಗಳು ಯಾರೇ ತಪ್ಪು ಮಾಡಿದರೂ ಸರ್ಕಾರವನ್ನೇ ದೂಷಿಸಲಾಗುತ್ತದೆ. ಅಹಿತಕರ ಘಟನೆಗಳು ನಡೆದರೆ ಸರ್ಕಾರ ಜವಾಬ್ದಾರಿ. ಅಂಥ ಪರಿಸ್ಥಿತಿಗಳು ಬರದೇ ಹೋಗಲಿ ಎಂದರು. ಪೊಲೀಸರು ತಮ್ಮ ಕೆಲಸವನ್ನು ಸಮಾಜ ಮತ್ತು ರಾಜ್ಯದ ಹಿತದೃಷ್ಟಿಯಿಂದ ಪ್ರಾಮಾಣಿಕವಾಗಿ ಮಾಡಬೇಕೆಂದು ಮುಖ್ಯಮಂತ್ರಿಗಳು ಕರೆ ನೀಡಿದರು.

Tags: 5 years cm siddaramaiahCM Siddaramaiahcm siddaramaiah newscm siddaramaiah press meetcm siddaramaiah speechcm siddaramaiah today newscm siddaramaiah'skarnataka cm siddaramaiahNew CM Siddaramaiahsiddaramaiahsiddaramaiah aboutsiddaramaiah castSiddaramaiah CMsiddaramaiah congresssiddaramaiah interviewsiddaramaiah karnataka cmsiddaramaiah newssiddaramaiah on cm chairsiddaramaiah press meetsiddaramaiah slap rowYathindra Siddaramaiah
Previous Post

Basavaraj Bommai: ಜಿಟಿಟಿಸಿ ತರಬೇತಿ ಪಡೆಯುವವರಿಗೆ ಒಳ್ಳೆಯ ಭವಿಷ್ಯವಿದೆ..

Next Post

ಶಿಕ್ಷಣ ಸಚಿವರೇ ನಿಮ್ಮ ಇಲಾಖೆಯ ಗೊತ್ತು ಗುರಿಗಳೇನು? ನಿಮ್ಮದು ಕೇವಲ ಪರೀಕ್ಷೆ ನಡೆಸುವ ಇಲಾಖೆಯೇ?

Related Posts

ದೊಡ್ಡ ತೂಗುಸೇತುವೆ
Uncategorized

ದೊಡ್ಡ ತೂಗುಸೇತುವೆ

by ಪ್ರತಿಧ್ವನಿ
July 18, 2025
0

ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ನಡುವೆ ಹೊಳೆಬಾಗಿಲಲ್ಲಿ ಶರಾವತಿಯ ಹಿನ್ನೀರಿನಲ್ಲಿ ತೂಗುಸೇತುವೆಯಲ್ಲಿ "740 ಮೀಟರ್ ಕೇಬಲ್ ನೆರವು" ಇರುವ ತೂಗು ಸೇತುವೆ ಇದಾಗಿದ್ದು, ದೇಶದ ಎರಡನೇ...

Read moreDetails

Basavaraj Bommai: ಜಿಟಿಟಿಸಿ ತರಬೇತಿ ಪಡೆಯುವವರಿಗೆ ಒಳ್ಳೆಯ ಭವಿಷ್ಯವಿದೆ..

July 16, 2025

DK Shivakumar: ಪಕ್ಷ ನನಗೆ ಸಂಘಟನೆ ಜವಾಬ್ದಾರಿ ಹಾಗೂ ಡಿಸಿಎಂ ಸ್ಥಾನ ನೀಡಿದ್ದು, ನನ್ನ ಗಮನ ಅವುಗಳತ್ತ ಮಾತ್ರ ಇದೆ..

July 11, 2025
ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

ಇಂದಿನಿಂದ ಆರಂಭ ಅಮರನಾಥ ಯಾತ್ರೆ – ಉಗ್ರರ ದಾಳಿಯ ಆತಂಕ..ಭದ್ರತೆ ಹೆಚ್ಚಿಸಿದ ಕೇಂದ್ರ !! 

July 3, 2025
ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

June 20, 2025
Next Post
ಶಿಕ್ಷಣ ಸಚಿವರೇ ನಿಮ್ಮ ಇಲಾಖೆಯ ಗೊತ್ತು ಗುರಿಗಳೇನು? ನಿಮ್ಮದು ಕೇವಲ ಪರೀಕ್ಷೆ ನಡೆಸುವ ಇಲಾಖೆಯೇ?

ಶಿಕ್ಷಣ ಸಚಿವರೇ ನಿಮ್ಮ ಇಲಾಖೆಯ ಗೊತ್ತು ಗುರಿಗಳೇನು? ನಿಮ್ಮದು ಕೇವಲ ಪರೀಕ್ಷೆ ನಡೆಸುವ ಇಲಾಖೆಯೇ?

Recent News

Top Story

PM Modi: ನರೇಂದ್ರ ಮೋದಿ ಮಾರ್ಗದರ್ಶನದಲ್ಲೇ ಉಚಿತ ವಿದ್ಯುತ್‌ ಘೋಷಣೆ: ನಿತೀಶ್ ಕುಮಾ‌ರ್

by ಪ್ರತಿಧ್ವನಿ
July 18, 2025
Top Story

Delhi High Court: ಕೋವಿಡ್-19ರಲ್ಲಿ ಸಮಾವೇಶ: 70 ಜನರ ವಿರುದ್ಧದ ಪ್ರಕರಣ ಕೈಬಿಟ್ಟ ದೆಹಲಿ ಹೈ ಕೋರ್ಟ್..

by ಪ್ರತಿಧ್ವನಿ
July 18, 2025
Top Story

Dharmastala: ಸಾಕ್ಷಿಗೆ ಅಪಾಯವಾದರೆ ಸರ್ಕಾರವೇ ಹೊಣೆ: ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ

by ಪ್ರತಿಧ್ವನಿ
July 18, 2025
Top Story

CM Siddaramaiah: ಕಾಂಗ್ರೆಸ್ ಸಿದ್ಧಾಂತದಲ್ಲಿ ರಾಜಿ ಮಾಡಿಕೊಳ್ಳದ ಎಲ್ಲರೂ ರಾಜಕೀಯವಾಗಿ ಗೆದ್ದಿದ್ದಾರೆ..!!

by ಪ್ರತಿಧ್ವನಿ
July 18, 2025
Top Story

Gym Ravi: 101ಜನರೊಂದಿಗೆ ಯಶಸ್ವಿಯಾಗಿ ಕಾಶಿಯಾತ್ರೆ ಮಾಡಿದ ಎ.ವಿ.ರವಿ

by ಪ್ರತಿಧ್ವನಿ
July 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

PM Modi: ನರೇಂದ್ರ ಮೋದಿ ಮಾರ್ಗದರ್ಶನದಲ್ಲೇ ಉಚಿತ ವಿದ್ಯುತ್‌ ಘೋಷಣೆ: ನಿತೀಶ್ ಕುಮಾ‌ರ್

July 18, 2025

Delhi High Court: ಕೋವಿಡ್-19ರಲ್ಲಿ ಸಮಾವೇಶ: 70 ಜನರ ವಿರುದ್ಧದ ಪ್ರಕರಣ ಕೈಬಿಟ್ಟ ದೆಹಲಿ ಹೈ ಕೋರ್ಟ್..

July 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada