2023ರ ಕರ್ನಾಟಕ ವಿಧಾನಸಭಾ ಚುನಾವಣೆ(karnataka assembly election 2023) ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ನಡೆಯಲಿದೆ. ಈಗಾಗಲೇ ಪಕ್ಷದ ನಾಯಕರು, ಮುಖಂಡರು ಅಖಾಡಕ್ಕಿಳಿದು ಭರ್ಜರಿ ಮತ ಪ್ರಚಾರ(campaign) ನಡೆಸುತ್ತಿದ್ದಾರೆ. ರಾಜಕೀಯ ನಾಯಕರ ಜೊತೆ ಸ್ಯಾಂಡಲ್‌ವುಡ್‌ನ ನಟ, ನಟಿಯರು ಮತಬೇಟೆಗಿಳಿದಿದ್ದಾರೆ. ಇಂದು ವರುಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯನವರ(siddaramaiah) ಪರ ಸ್ಯಾಂಡಲ್‌ವುಡ್ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್(shivarajkumar) ಮತಯಾಚಿಸಿದ್ದಾರೆ.

ಈ ಬಗ್ಗೆ ಸಂಸದ ಪ್ರತಾಪ್ ಸಿಂಹ(prathap simha) ಸಾಮಾಜಿಕ ಜಾಲತಾಣದಲ್ಲಿ(social media) ಪ್ರಹಾರ ನಡೆಸಿದ್ದಾರೆ. ಸ್ಯಾಂಡಲ್‌ವುಡ್(sandalwood) ಪರಮಾತ್ಮ, ಅಭಿಮಾನಿಗಳ ಆರಾಧ್ಯದೈವ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್(puneeth rajkumar) ಅವರ ಹೆಸರಲ್ಲಿ ಸಚಿವ ವಿ.ಸೋಮಣ್ಣ(V somanna) ಆಸ್ಪತ್ರೆ ಕಟ್ಟಿಸಿದ್ದಾರೆ. ಈ ಆಸ್ಪತ್ರೆ ಉದ್ಘಾಟನೆಗೆ ಆಗಮಿಸಿದ್ದ ರಾಘವೇಂದ್ರ ರಾಜ್‌ಕುಮಾರ್, ಸೋಮಣ್ಣರ ಕಾರ್ಯವನ್ನು ಶ್ಲಾಘಿಸಿದ್ದರು. ಇದನ್ನೇ ಮುಂದಿಟ್ಟುಕೊಂಡು ಪ್ರತಾಪ್ ಸಿಂಹ ಅವರು ಶಿವರಾಜ್ ಕುಮಾರ್ ಅವರಿಗೆ ಟಾಂಗ್ ಕೊಟ್ಟಿದ್ದಾರೆ. “ಪುನೀತ್ ರಾಜಕುಮಾರ್ ಸರ್ ಹೆಸರಿನಲ್ಲಿ ಆಸ್ಪತ್ರೆ ಕಟ್ಟಿದ ಸೋಮಣ್ಣ, ಮನ ಮೆಚ್ಚಿ ಶ್ಲಾಘಿಸಿದ ರಾಘಣ್ಣ, ಸಿದ್ರಾಮಣ್ಣನ ಪರವಾಗಿ ಪ್ರಚಾರಕ್ಕೆ ಇಳಿದ ಶಿವಣ್ಣ! ಅವರವರ ಭಾವ ಭಕುತಿಗೆ” ಅಂತ ಪ್ರತಾಪ್ ಸಿಂಹ(pratap simha) ಟ್ವೀಟ್ ಮಾಡಿ ಸೋಮಣ್ಣನವರನ್ನ ರಾಘಣ್ಣ ಹೊಗಳಿದ ವಿಡಿಯೋ ಹಾಗೂ ಶಿವಣ್ಣ ಸಿದ್ದರಾಮಯ್ಯ(siddaramaiah) ಪರ ಪ್ರಚಾರ ನಡೆಸುತ್ತಿರುವ ಫೋಟೋವನ್ನ ಶೇರ್ ಮಾಡಿದ್ದಾರೆ.








