• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರೈಲ್ವೆ ಪರೀಕ್ಷೆಯಲ್ಲಿ ಜನಿವಾರ, ಮಾಂಗಲ್ಯ ಸಂಕಷ್ಟ.. ಬಗೆಹರಿಸಿದ ಸೋಮಣ್ಣ

ಕೃಷ್ಣ ಮಣಿ by ಕೃಷ್ಣ ಮಣಿ
April 29, 2025
in Top Story, ಕರ್ನಾಟಕ, ರಾಜಕೀಯ, ಸ್ಟೂಡೆಂಟ್‌ ಕಾರ್ನರ್
0
ರೈಲ್ವೆ ಪರೀಕ್ಷೆಯಲ್ಲಿ ಜನಿವಾರ, ಮಾಂಗಲ್ಯ ಸಂಕಷ್ಟ.. ಬಗೆಹರಿಸಿದ ಸೋಮಣ್ಣ
Share on WhatsAppShare on FacebookShare on Telegram

ಕೇಂದ್ರ ರೈಲ್ವೇ ಇಲಾಖಾ ಪರೀಕ್ಷೆ ವಿಚಾರವಾಗಿ ಮಾಂಗಲ್ಯ ಮತ್ತು ಜನಿವಾರ ತೆಗೆಯುವಂತೆ ಆದೇಶಕ್ಕೆ ವಿರೋಧ ಕೇಳಿ ಬಂದಿತ್ತು. ಇದೀಗ ಹೊಸ ಸುತ್ತೋಲೆ ಹೊರಡಿಸಿರುವ ರೈಲ್ವೇ ಇಲಾಖೆ ನೇಮಕಾತಿ ಮಂಡಳಿ, ಮಾಂಗಲ್ಯ ಮತ್ತು ಜನಿವಾರ ತೆಗೆಯುವ ನಿಯಮ ಸಡಿಲಿಕೆ ಮಾಡಿದೆ. ಏಳನೇ ಕಾಲಂನಲ್ಲಿನ ಮಾರ್ಪಾಡು ಮಾಡಿದೆ. ಯಾವುದೇ ಧಾರ್ಮಿಕ ಮನೋಭಾವನೆಗೆ ಧಕ್ಕೆಯಾಗದಂತೆ ಕ್ರಮಕೈಗೊಳ್ಳಲಾಗಿದೆ.

ADVERTISEMENT

ಕೇಂದ್ರ ರೈಲ್ವೇ ಇಲಾಖಾ ಪರೀಕ್ಷೆಯಲ್ಲಿ ಮಾಂಗಲ್ಯ ಮತ್ತು ಜನಿವಾರ ತೆಗೆಯುವಂತೆ ಆದೇಶಕ್ಕೆ ಬಂದಿದ್ದಕ್ಕೆ ವಿರೋಧ ವ್ಯಕ್ತವಾಗಿತ್ತು. ಆ ಬಳಿಕ ರೈಲ್ವೇ ಇಲಾಖೆ ನೇಮಕಾತಿ ಮಂಡಳಿ ಹೊಸ ಸುತ್ತೋಲೆ ಹೊರಡಿಸಿದೆ.. ಮಾಂಗಲ್ಯ ಮತ್ತು ಜನಿವಾರ ತೆಗೆಯುವ ನಿಯಮ ಸಡಿಲಿಕೆ ಮಾಡಲಾಗಿದೆ. ರೈಲ್ವೆ ಇಲಾಖೆ ಪರೀಕ್ಷೆಯಲ್ಲಿ ಜನಿವಾರ ನಿಷೇಧ ಗೊಂದಲದ ಬಗ್ಗೆ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಸ್ಪಷ್ಟನೆ ನೀಡಿದ್ದು, ದಿನಾಂಕ 28, 29 ಮತ್ತು 30 ಏಪ್ರಿಲ್ 2025ರಂದು ರೈಲ್ವೆ ಇಲಾಖೆಯಲ್ಲಿ ನೇಮಕಾತಿಗಾಗಿ ಪರೀಕ್ಷೆ ನಡೆಯುತ್ತಿದೆ. ಅಭ್ಯರ್ಥಿಗಳು ಜನಿವಾರ, ಮಾಂಗಲ್ಯ ಸೂತ್ರ ತೆಗೆದಿಟ್ಟು ಪರೀಕ್ಷೆ ಬರೆಯಬೇಕೆಂಬ ವಿಷಯದ ಬಗ್ಗೆ ದೂರು ಬಂದಿದೆ.

Belagaviಯಲ್ಲಿ PM Narendra Modi ವಿರುದ್ಧ Randeep Surjewala ಆಕ್ರೋಶ #pratidhvani

ಪರೀಕ್ಷಾ ನಿಯಮದಲ್ಲಿ ಉಲ್ಲೇಖಿಸಲಾಗಿದೆ ಎಂಬ ದೂರುಗಳನ್ನು ಸಂಸದರು, ಶಾಸಕರು ಸರಿಪಡಿಸುವಂತೆ ಮನವಿ ಮಾಡಿರುತ್ತಾರೆ. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ವಿವಿಧ ಸಂಘಟನೆಗಳು ಈ ಬಗ್ಗೆ ನನ್ನ ಗಮನವನ್ನು ಸೆಳೆದಿರುತ್ತಾರೆ. ಈ ವಿಷಯದ ಬಗ್ಗೆ ನಾನು ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಮತ್ತು ರೈಲ್ವೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಈ ಗೊಂದಲ ನಿವಾರಿಸಲಾಗಿದೆ ಎಂದಿದ್ದಾರೆ.

ಜನಿವಾರ ಮತ್ತು ಮಾಂಗಲ್ಯ ಇತ್ಯಾದಿ ಸಂಸ್ಕೃತಿಯನ್ನು ಬಿಂಬಿಸುವ ಯಾವುದೇ ವಸ್ತುವನ್ನು ಧರಿಸಿ ಬಂದಲ್ಲಿ ಅಭ್ಯರ್ಥಿಗಳಿಗೆ ತೊಂದರೆ ನೀಡಬಾರದೆಂದು ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗಿದೆ. ಇತರ ಎಲ್ಲಾ ಪರೀಕ್ಷಾ ನಿಯಮವನ್ನು ಪಾಲಿಸಿ, ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅನುವು ಮಾಡಿಕೊಡಲು ಸೂಚಿಸಲಾಗಿದೆ. ಪರೀಕ್ಷಾ ಅಭ್ಯರ್ಥಿಗಳು ಸಹ ನಿಯಮಾನುಸಾರ ಪರೀಕ್ಷೆ ಬರೆಯುವಂತೆ ಮನವಿ ಮಾಡುತ್ತೇನೆ. ಅಭ್ಯರ್ಥಿಗಳು ಗೊಂದಲಕ್ಕೆ ಈಡಾಗಬಾರದೆಂದು ಜಾಲತಾಣ X ನಲ್ಲಿ ಪೋಸ್ಟ್​ ಮಾಡಿದ್ದಾರೆ ಸಚಿವ ವಿ ಸೋಮಣ್ಣ.

Tags: 3 children detected in bengaluru railway stationballari railway stationcompound collapses near sheshadripuram railway stationgrammar for competitive examsmallikarjun kharge railway ministerminister v somannarail roko protest across the staterailwayrailway group d previous paperrailway kullisheshadripuram railway bridgesolve kakinada problemsthe hindu analysisthe hindu editorial analysisvocab for competitive exams
Previous Post

ಸಿಎಂ ಕನ್ನಡಿಗರನ್ನು ಕರೆತಂದರೂ ಶ್ಲಾಘನೆ ಇಲ್ಲ.. ಬರೀ ಟೀಕೆ..

Next Post

‘ಸಮವಸ್ತ್ರದಲ್ಲಿದ್ದ ಪೊಲೀಸ್​ ಅಧಿಕಾರಿ ಮೇಲೆ ಕೈ ಎತ್ತಿದ ಸಿಎಂ ಕ್ಷಮೆ ಕೇಳಲಿ’

Related Posts

ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?
Top Story

ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

by ಪ್ರತಿಧ್ವನಿ
April 13, 2026
0

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಉಪಚುನಾವಣೆಯ ಬಳಿಕ ಇದೀಗ ಮತ್ತೆ ಸಂಪುಟ ವಿಸ್ತರಣೆಯ ಕೂಗು ಜೋರಾಗಿದೆ. ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಗಳಲ್ಲಿ ರಂಗ ಪ್ರವೇಶ ಮಾಡಿದ...

Read moreDetails
ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

April 13, 2026
ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

April 13, 2026
ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

April 13, 2026
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
Next Post
‘ಸಮವಸ್ತ್ರದಲ್ಲಿದ್ದ ಪೊಲೀಸ್​ ಅಧಿಕಾರಿ ಮೇಲೆ ಕೈ ಎತ್ತಿದ ಸಿಎಂ ಕ್ಷಮೆ ಕೇಳಲಿ’

‘ಸಮವಸ್ತ್ರದಲ್ಲಿದ್ದ ಪೊಲೀಸ್​ ಅಧಿಕಾರಿ ಮೇಲೆ ಕೈ ಎತ್ತಿದ ಸಿಎಂ ಕ್ಷಮೆ ಕೇಳಲಿ’

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada