ಕಳೆದ ಕೆಲವು ದಿನಗಳ ಹಿಂದಷ್ಟೇ ಮಾಜಿ ಸಿಎಂ HD Kumaraswamy ಅವರನ್ನು ಭೇಟಿಯಾಗಿದ್ದ ಮಾಜಿ ಸಚಿವ V Somanna ಅವರು ತುಮಕೂರಿನಲ್ಲಿ ಕಾಣಿಸಿಕೊಂಡಿದ್ದಾರೆ.
ತುಮಕೂರು ಜಿಲ್ಲೆಯಲ್ಲಿ ಕಾಣಿಸಿಕೊಂಡ ವಿ.ಸೋಮಣ್ಣ ಮಿಂಚಿನ ಸಂಚಾರ ನಡೆಸುವ ಜೊತೆಗೆ ಹಲವು ಪ್ರಮುಖರನ್ನು ಭೇಟಿಯಾಗಿದ್ದಾರೆ. ಪ್ರಮುಖವಾಗಿ ಲಿಂಗಾಯತ, ಗೊಲ್ಲ, ಒಕ್ಕಲಿಗ ಸಮುದಾಯದ ನಾಯಕರ ಭೇಟಿಯಾಗುತ್ತಿರುವ ವಿ. ಸೋಮಣ್ಣ, ಸಮುದಾಯದ ನಾಯಕರುಗಳ ಮನೆಗಳಿಗೆ ಭೇಟಿ ನೀಡಿ ಮಾತುಕತೆ ನಡೆಸುತ್ತಿದ್ದಾರೆ. ಅಲ್ಲದೇ ಮದುವೆ ಸೇರಿದಂತೆ ಖಾಸಗಿ ಕಾರ್ಯಕ್ರಮಗಳಲ್ಲೂ ಕಾಣಿಸಿಕೊಳ್ಳುತ್ತಿದ್ದಾರೆ.

ಗುಬ್ಬಿಯ ಚನ್ನಬಸವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಕೆ ಮಾಡಿರುವ ವಿ.ಸೋಮಣ್ಣ ಅವರೊಂದಿಗೆ ತುಮಕೂರು ಸಂಸದ ಜಿ.ಎಸ್ ಬಸವರಾಜು ಸಹ ಜೆಡಿಎಸ್ ನಾಯಕನ ಮನೆಗೆ ಭೇಟಿ ನೀಡಿ ಲೋಕಸಭೆ ಚುನಾವಣೆಯ ಮಾಹಿತಿ ಸಂಗ್ರಹಿಸುವ ಮೂಲಕ ಚುನಾವಣೆ ತಯಾರಿ ಆರಂಭಿಸಿದಂತಿದೆ.

ತುಮಕೂರು ಲೋಕಸಭೆ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿರುವ ವಿ.ಸೋಮಣ್ಣ. ಈಗಾಗಲೇ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ, ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದು, ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುವ ಬಗ್ಗೆಯೂ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಇನ್ನೂ ನೋಣವಿನಕೆರೆ ಕಾಡು ಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿದ ವಿ.ಸೋಮಣ್ಣ, ಗುಬ್ಬಿ ಕ್ಷೇತ್ರದ ಲಿಂಗಾಯತ ಸಮುದಾಯದ ನಾಯಕರ ಮನೆಗಳಿಗೆ ಭೇಟಿ ನೀಡಿದ್ದಾರೆ. ವಿ. ಸೋಮಣ್ಣ ಅವರ ಈ ಭೇಟಿ ಕುತೂಹಲ ಮೂಡಿಸಿದೆ.
#HDK #HDKumaraswamy #VSomanna #LokaSaba #MPelection #BJP-JDS











