• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಮ್ಮಲಿ ಒಡಕು ಮೂಡಿಸಲು ಕಾಂಗ್ರೆಸ್ ಭಕ ಪಕ್ಷಿಗಳಂತೆ ಕೆಲವರು ಕಾಯುತ್ತಿದ್ದಾರೆ:HD ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
October 20, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಮಂಡ್ಯ: ಜೆಡಿಎಸ್ ಮತ್ತು ಬಿಜೆಪಿ ನಡುವೆ ಒಡಕು ಉಂಟು ಮಾಡಿ ಕಾಂಗ್ರೆಸ್ ಅಭ್ಯರ್ಥಿಗೆ ಕೆಲವರು ಚನ್ನಪಟ್ಟಣದಲ್ಲಿ ಷಡ್ಯಂತ್ರ ರೂಪಿಸಿದ್ದಾರೆ.ಆದರೆ, ಅವರ ಆಸೆ ಈಡೇರುವುದಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ದೂರಿದರು.

ADVERTISEMENT

ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಅನ್ನು ಕಟ್ಟಿ ಹಾಕಿದ್ದಾರೆ. ಅವರ ಆಶಯದಂತೆ ನಾವು ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರಿನಲ್ಲಿ ಕೆಲಸ ಮಾಡುತ್ತೇವೆ. ಕಾಂಗ್ರೆಸ್ ತಂತ್ರಗಾರಿಕೆ ಫಲಿಸುವುದಿಲ್ಲ ಎಂದರು.ಮಂಡ್ಯ ಜಿಲ್ಲೆಯ ಸೀತಾಪುರ ಗ್ರಾಮದಲ್ಲಿ ಆಗಸ್ಟ್ 11ರಂದು ಭತ್ತ ನಾಟಿ ಮಾಡಿದ್ದ ಜಾಗಕ್ಕೆ ಭೇಟಿ ನೀಡಿ ಫಸಲು ವೀಕ್ಷಿಸಿದ ಬಳಿಕ ಸಚಿವರು ಮಾಧ್ಯಮಗಳ ಜತೆ ಮಾತನಾಡಿದರು.

ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಸುತ್ತಾರೆ ಎನ್ನುವ ಬಗ್ಗೆ ವರದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವರು; ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ನಮ್ಮ ಕುಟುಂಬದವರನ್ನೆ ಬಿಜೆಪಿ ಅಭ್ಯರ್ಥಿಯಾಗಿ ನಿಲ್ಲಿಸಿದ್ದೇವೆ. ಹೀಗಾಗಿ ನಮ್ಮ ಮಿತ್ರ ಪಕ್ಷವೂ ಔದಾರ್ಯ ತೋರಲಿ ಎನ್ನುವ ಆಶಯ ನನ್ನದು. ಅವರು ಔದಾರ್ಯ ತೋರುತ್ತಾರೆ ಎನ್ನುವ ನಂಬಿಕೆ ನನಗಿದೆ ಎಂದರು.

ಯೋಗೇಶ್ವರ್ ಅವರು ನಾಮಪತ್ರ ಸಲ್ಲಿಸುವ ವಿಚಾರ ನನ್ನೊಂದಿಗೆ ಚರ್ಚೆಯಾಗಿಲ್ಲ.ಆ ಬಗ್ಗೆ ನನಗೆ ಏನೂ ಗೊತ್ತಿಲ್ಲ. ನನ್ನ ಮುಂದೆ ಆ ಕುರಿತು ಪ್ರಸ್ತಾಪವೂ ಬಂದಿಲ್ಲ ಮಾಧ್ಯಮಗಳಲ್ಲಿ ಆ ಕುರಿತು ವರದಿ ಬಂದಿರುವುದನ್ನು ನೋಡಿದ್ದೇನೆ ಎಂದು ಅವರು ತಿಳಿಸಿದರು.

ಕಾಂಗ್ರೆಸ್ ನಾಯಕರು ಯೋಗೇಶ್ವರ್ ಅವರನ್ನು ಭೇಟಿ ಮಾಡಿದ್ದಾರೆನ್ನುವ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವರು; ಅವರು ಪಕ್ಷೇತರ ಅಭ್ಯರ್ಥಿಯಾಗುತ್ತಾರೆ ಎಂಬ ವಿಚಾರ ಕಳೆದ ಹದಿನೈದು ದಿನದಿಂದ ಹರಿದಾಡುತ್ತಿದೆ. ಕಾಂಗ್ರೆಸ್ ನವರು ತಮ್ಮ ಪಕ್ಷಕ್ಕೆ ಕರೆದುಕೊಂಡು ಹೋಗಿ ನಿಲ್ಲಿಸಲು ಕಾಯುತ್ತಿದ್ದಾರೆ‌. ನಮ್ಮ ನಡುವೆ ಒಡಕು ತರುವುದು ಅವರ ಉದ್ದೇಶ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.

ಕಾಂಗ್ರೆಸ್ ಭಕಪಕ್ಷಿಯಂತೆ ಕಾಯುತ್ತಿದೆ.

NDA ಮೈತ್ರಿಕೂಟದಲ್ಲಿ ಒಡಕು ಮೂಡಲಿ ಎಂದು ಕಾಂಗ್ರೆಸ್ ಭಕಪಕ್ಷಿಯಂತೆ ಕಾಯುತ್ತಿದೆ. ಚನ್ನಪಟ್ಟಣದಲ್ಲಿ ಸ್ವತಂತ್ರವಾಗಿ ಗೆಲ್ಲಲು ಕಾಂಗ್ರೆಸ್ ಪಕ್ಷಕ್ಕೆ ಸಾಧ್ಯವಿಲ್ಲ. ಅದಕ್ಕಾಗಿ ಒಡಕು ತರಲು ಶ್ರಮ ಹಾಕುತ್ತಿದ್ದಾರೆ. ಅಂತಹ ಅವಕಾಶ ಬರಬಾರದೆಂದು ನಾನು ತಾಳ್ಮೆ ವಹಿಸಿದ್ದೇನೆ. ಇನ್ನೂ ನಾಲ್ಕು ದಿನ ಇದೆ, ಕೂತು ಚರ್ಚೆ ಮಾಡ್ತೇವೆ. ಮಂಗಳವಾರ ಅಥವಾ ಬುಧವಾರ ಫೈನಲ್ ಆಗಲಿದೆ ಎಂದರು ಕುಮಾರಸ್ವಾಮಿ ಅವರು.ದೆಹಲಿ ಮಟ್ಟದಲ್ಲಿ ಚನ್ನಪಟ್ಟಣ ಟಿಕೆಟ್ ಸಮಸ್ಯೆ ಇಲ್ಲ, ಕಳೆದ ಎರಡು ಬಾರಿ ಚನ್ನಪಟ್ಟಣ ಕ್ಷೇತ್ರವನ್ನು ನಾನು ಪ್ರತಿನಿಧಿಸಿದ್ದೇನೆ ಎಂದರು ಅವರು.

ಬೆಂ.ಗ್ರಾಮಾಂತರದಲ್ಲಿ ನಮ್ಮ ಕುಟುಂಬದವರೇ ಬಿಜೆಪಿ ಅಭ್ಯರ್ಥಿ ಆಗಿದ್ದರು ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ ಅನ್ನೋದು ದೆಹಲಿ ಮಟ್ಟದಲ್ಲಿ ಇದೆ.ಮೂರು ಉಪ ಚುನಾವಣೆ ಕ್ಷೇತ್ರಗಳ ಪೈಕಿ ಚನ್ನಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರ ಪಡೆ ಇದೆ. ಗೆಲ್ಲುವ ದೃಷ್ಟಿಯಿಂದ ಬಿಜೆಪಿಗೆ ಬೆಂ.ಗ್ರಾಮಾಂತರ ಕ್ಷೇತ್ರ ಬಿಟ್ಟು ಕೊಟ್ಟೆವು. ನಮ್ಮ ಕುಟುಂಬದವರನ್ನೇ ಬಿಜೆಪಿ ಅಭ್ಯರ್ಥಿಯಾಗಿ ನಿಲ್ಲಿಸಿದ್ದೇವೆ.ಆ ರೀತಿ ಬಿಜೆಪಿ ನಾಯಕರು ಔದಾರ್ಯ ತೋರಲಿ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು, ಶಾಸಕ ಮಂಜುನಾಥ್, ಜಿಲ್ಲಾ ಜೆಡಿಎಸ್ ಅಧ್ಯಕ್ಷ ರಮೇಶ್ ಇನ್ನಿತರರು ಸಚಿವರ ಜತೆಯಲ್ಲಿ ಇದ್ದರು.

Tags: BJPChannapatnamMandyaPrime Minister Narendra ModiSandur.ShiggamviUnion minister HD Kumaraswamyಜೆಡಿಎಸ್
Previous Post

ತಲಕಾವೇರಿಯಿಂದ ಕಾಶಿ ವಿಶ್ವನಾಥ,ಕಾಶಿಯಿಂದ ಅಯೋಧ್ಯೆಗೆ ಹೊರಟ ಕಾವೇರಿ ತೀರ್ಥ

Next Post

ಚನ್ನಪಟ್ಟಣ ಉಪಚುನಾವಣೆ; ನಾನು ಸ್ಪರ್ಧಿಸಬೇಕು ಎನ್ನುವ ಒತ್ತಡ ಹೆಚ್ಚಿದೆ:ಡಿ.ಕೆ.ಸುರೇಶ್

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
Top Story

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

by ಪ್ರತಿಧ್ವನಿ
April 9, 2026
0

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post

ಚನ್ನಪಟ್ಟಣ ಉಪಚುನಾವಣೆ; ನಾನು ಸ್ಪರ್ಧಿಸಬೇಕು ಎನ್ನುವ ಒತ್ತಡ ಹೆಚ್ಚಿದೆ:ಡಿ.ಕೆ.ಸುರೇಶ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada