ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಸಾವಿಗೆ ಸಂಬಂಧಿಸಿದಂತೆ ಗೋವಾ ಪೊಲೀಸರು ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸೋನಾಲಿ ಸಾವಿಗೆ ಸಂಬಂಧಿಸಿದಂತೆ ಸುಖ್ವೀಂದರ್ ಸಿಂಗ್ ಹಾಗೂ ಸುಧೀರ್ ಸಂಗ್ವಾನ್ನನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.
ಸೋನಾಲಿಯ ಇಬ್ಬರು ಸಂಗಡಿಗರು ಗೋವಾದಲ್ಲಿ ಪಾರ್ಟಿ ಮಾಡುವ ವೇಳೆ ತಂಪು ಪಾನೀಯದಲ್ಲಿ ಡ್ರಗ್ಸ್ ಬೆರಸಿ ಸೇವಿಸುವಂತೆ ಬಲವಂತ ಮಾಡಿದ್ದಾರೆ ಎಂದು ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಣದ ವ್ಯಾಜ್ಯ ಸಂಬಂಧ ಪೋಗಟ್ ಹತ್ಯೆ ಮಾಡಿರಬಹುದು ಎಂದು ಹೇಳಲಾಗುತ್ತಿದೆ. ಸಾಕ್ಷ್ಯ ನಾಶ ಮಾಡಬಹುದು ಎಂಬ ಕಾರಣಕ್ಕಾಗಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಫೋಗಟ್ ಅಂತ್ಯೆಕ್ರಿಯೆಯೂ ಹರಿಯಾಣದ ಹಿಸ್ಸಾರ್ನಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ನೆರವೇರಿಸಲಾಯಿತು. ನ್ಯೂಸ್ ರೀಡರ್ ಆಗಿ ವೃತ್ತಿ ಜೀವನ ಆರಂಭಿಸಿದ ಪೋಗಟ್ ನಂತರದ ದಿನಗಳಲ್ಲಿ ಟಿಕ್ ಟಾಕ್ ಮೂಲಕ ಸಾಕಷ್ಟು ಖ್ಯಾತಿ ಪಡೆದು ಹಲವು ಚಿತ್ರಗಳಲ್ಲಿ ನಟಿಸಿದ್ದರು.