ಮಾಜಿ ಪ್ರಧಾನಿ ದೇವೇಗೌಡರ ಜೀವನಗಾಥೆ ಸಾರುವ ಹಾಡನ್ನು ಮಂಗಳೂರಿನಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಬಿಡುಗಡೆ ಮಾಡಿದ್ದಾರೆ. ಮಂಗಳೂರಿನಲ್ಲಿ ನಡೆದ ಸವಾಭಿಮಾನಿ ಕಾರ್ಯಕರ್ತರ ಸಮಾವೇಶದಲ್ಲಿ ಹಾಡನ್ನು ಬಿಡುಗಡೆ ಮಾಡಲಾಗಿದೆ.
ದೇವೇಗೌಡರ ಕುರಿತ ಹಾಡನ್ನು ವಿಧಾನಪರಿಷತ್ ಸದಸ್ಯರಾದ ಬಿ.ಎಂ.ಫಾರೂಕ್ ನಿರ್ಮಾಣ ಮಾಡಿದ್ದು ಪ್ರಭುಪಾರ್ಥವರು ರಚಿಸಿ, ಕಲ್ಪನೆ ಮತ್ತು ನಿರ್ದೇಶನ ಮಾಡಿದ್ದಾರೆ. ಅನಂತ್ ಆರ್ಯನ್ರವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಶಶಾಂಕ್ ಶೇಷಗಿರಿರವರ ಕಂಠಸಿರಿಯಲ್ಲಿ ಈ ಹಾಡು ಮೂಡಿ ಬಂದಿದೆ.
ಈ ಹಾಡನ್ನು ಕೇಳಿದ ಮಾಜಿ ಪ್ರಧಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದು ಹಾಡಿನ ನಿರ್ದೇಶಕ ಪ್ರಭು ಪಾರ್ಥರನ್ನು ಸನ್ಮಾನಿಸಿದ್ದಾರೆ. ಈ ವೇಳೆ ಜೆಡಿಎಸ್ ಮುಖಂಡರು ಹಾಜರಿದ್ದರು.