ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ (Sonia gandhi) ಅನಾರೋಗ್ಯ ಕಾಡಿದೆ. ವಯೋಸಹಜ ಅನಾರೋಗ್ಯದ ಕಾರಣ ಅವರನ್ನು ದೆಹಲಿಯ (Delhi) ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇಂದು ಬೆಳಿಗ್ಗೆ (ಫೆ 21) ಆಸ್ಪತ್ರೆಗೆ ದಾಖಲಾಗಿರುವ ಸೋನಿಯಾ ಗಾಂಧಿ ಅವರ ಆರೋಗ್ಯದ ಮೇಲೆ ತಜ್ಞ ವೈದ್ಯರ ತಂಡ ಸಂಪೂರ್ಣ ನಿಗಾ ವಹಿಸಿದೆ. ಸದ್ಯ ಆರೋಗ್ಯ ಸ್ಥಿರವಾಗಿದ್ದು, ನಾಳೆ ಆಸ್ಪತ್ರೆಯಿಂದ ಡಿಸಚಾರ್ಜ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಸದ್ಯ ಸೋನಿಯಾ ಗಾಂಧಿ ಆರೋಗ್ಯದ ಮೇಲೆ ತಜ್ಞ ವೈದ್ಯರಿಂದ ನಿಗಾ ಇರಿಸಿದ್ದು,ಕಳೆದ ಡಿಸೆಂಬರ್ ನಲ್ಲಿ 78 ನೇ ವರ್ಷಕ್ಕೆ ಕಾಲಿಟ್ಟಿರುವ ಸೋನಿಯಾ ಗಾಂಧಿ ಸದ್ಯ ವಯೋ ಸಹಜ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.