ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಬಾರತ ಜೋಡೋ ಪಾದಯಾತ್ರೆ ಮಂಡ್ಯ ಜಿಲ್ಲೆ ಪ್ರವೇಶಿಸಲಿದ್ದು ಪಾದಯಾತ್ರೆಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹಾಗು ಪುತ್ರಿ ಪ್ರಿಯಾಂಕ ಗಾಂಧಿ ವಾದ್ರಾ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
ವಿಶೇಷ ವಿಮಾನದ ಮೂಲಕ ಮಧ್ಯಾಹ್ನದ ವೇಳೆಗೆ ಸೋನಿಯಾ ಮೈಸೂರು ತಲುಪಲಿದ್ದಾರೆ ಎಂದು ತಿಳಿದು ಬಂದಿದೆ. ತಾಯಿಯನ್ನು ಸ್ವಾಗತಿಸಲು ರಾಹುಲ್ ಗಾಂಧಿ ಮೈಸೂರಿಗೆ ತೆರಳಿದ್ದಾರೆ.
ನಂತರ ಚಾಮುಂಡೇಶ್ವರಿ ದರ್ಶನವನ್ನ ಪಡೆದು ಪಾದಯಾತ್ರೆಯನ್ನ ಕೂಡಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.












