ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಜಾರಿ ನಿರ್ದೇಶನಾಲಯದ ವಿಚಾರಣೆ ಇಂದು ಅಂತ್ಯಗೊಂಡಿದೆ.
ದೆಹಲಿಯ ಇಡಿ ಕಚೇರಿಗೆ ಆಗಮಿಸಿದ್ದ ಸೋನಿಯಾ ಗಾಂಧಿ ಅವರನ್ನು ೩ ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ಇಡಿ ಅಧಿಕಾರಿಗಳು ಜುಲೈ ೨೫ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಇಂದು ಬೆಳಿಗ್ಗೆ ಇಡಿ ಕಚೇರಿಗೆ ಸೋನಿಯಾ ಗಾಂಧಿ ಹಾಜರಾಗಿದ್ದು, ವಿಚಾರಣೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ದೆಹಲಿ, ಬೆಂಗಳೂರು ಸೇರಿದಂತೆ ದೇಶದ ನಾನಾ ಕಡೆ ಪ್ರತಿಭಟನೆ ನಡೆಸಿದರು. ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇಡಿ ವಿಚಾರಣೆ ನಡೆಸುತ್ತಿದ್ದು, ಇತ್ತೀಚೆಗೆ ರಾಹುಲ್ ಗಾಂಧಿ ಅವರನ್ನು ಸತತ 5 ದಿನಗಳ ಕಾಲ 10 ಗಂಟೆಯಂತೆ ಸುದೀರ್ಘ ವಿಚಾರಣೆ ನಡೆಸಿತ್ತು. ಇದೀಗ ಸೋನಿಯಾ ಗಾಂಧಿ ವಿಚಾರಣೆ ಕೈಗೆತ್ತಿಕೊಂಡಿದೆ.