ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಜಾರಿ ನಿರ್ದೇಶನಾಲಯ ಮತ್ತೊಮ್ಮೆ ಸಮನ್ಸ್ ಜಾರಿಗೊಳಿಸಿದ್ದು, ನಾಳೆ (ಜುಲೈ 27) ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಸೋನಿಯಾ ಗಾಂಧಿಗೆ ಮಂಗಳವಾರ ಸತತ 6 ಗಂಟೆಗಳ ವಿಚಾರಣೆ ನಡೆಸಿದ ನಂತರ ಜಾರಿ ನಿರ್ದೇಶನಾಲಯ ಮೂರನೇ ಸುತ್ತಿನ ವಿಚಾರಣೆಗೆ ಸೋನಿಯಾ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿದೆ.
ಸೋನಿಯಾ ಗಾಂಧಿ ಅವರನ್ನು ವಿಚಾರಣೆಗೊಳಪಡಿಸುವ ಮೂಲಕ ಜಾರಿ ನಿರ್ದೇಶನಾಲಯ ಕಾಂಗ್ರೆಸ್ ಕಾರ್ಯಕರ್ತರನ್ನು ನೈತಿಕವಾಗಿ ಕುಸಿಯುವಂತೆ ಮಾಡಲು ಕೇಂದ್ರ ಸರಕಾರ ಪರೋಕ್ಷವಾಗಿ ಕೇಂದ್ರಿಯ ಸಂಸ್ಥೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ.