ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ಕೊರೊನಾ ವೈರಸ್ ಮತ್ತೊಮ್ಮೆ ದೃಢಪಟ್ಟಿದ್ದು, ಕಳೆದ ಎರಡು ತಿಂಗಳಲ್ಲಿ ಎರಡನೇ ಬಾರಿ ಸೋಂಕು ಕಾಣಿಸಿಕೊಂಡಿದೆ.
ಕಾಂಗ್ರೆಸ್ ಪಕ್ಷದ ರಾಜ್ಯಸಭಾ ಸದಸ್ಯ ಹಾಗೂ ವಕ್ತಾರ ಜೈರೂಮ್ ರಮೇಶ್ ಶನಿವಾರ ಟ್ವಿಟರ್ ನಲ್ಲಿ ಈ ವಿಷಯ ದೃಢಪಡಿಸಿದ್ದಾರೆ.

ಸೋನಿಯಾ ಗಾಂಧಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಅವರ ಆರೋಗ್ಯ ಸ್ಥಿರವಾಗಿದ್ದರೂ ನಿಯಮದ ಅನುಸಾರ ಐಸೋಲೇಷನ್ ಗೆ ಒಳಗಾಗಲಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಸೋನಿಯಾ ಗಾಂಧಿಗೆ ಜೂನ್ ನಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ವಿಚಾರಣೆಯಿಂದ ಸಮಯಾವಕಾಶ ಕೇಳಿದ್ದರು.