ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿಯವರು 77ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಸೋನಿಯಾರವರಿಗೆ ದೇಶಾದ್ಯಂತ ಗಣ್ಯಾತಿಗಣ್ಯರು ಶುಭ ಕೋರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ ಟ್ಟೀಟ್ ಮೂಲಕ ಸೋನಿಯಾ ಗಾಂಧಿಯವರಿಗೆ ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸಿದ್ದಾರೆ.
ಸೋನಿಯಾ ಗಾಂಧಿಯವರಿಗೆ ಹುಟ್ಟುಹಬ್ಬದ ಶುಭಾಶಯಗಳು, ಅವರ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ದೇವರಲ್ಲಿ ಪ್ರಾರ್ಥಿಸುತ್ತೇನೆ ಅಂತ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಇನ್ನು ತಮ್ಮ ಹುಟ್ಟುಹಬ್ಬವನ್ನು ರಾಜಸ್ಥಾನದ ರಣತಂಬೂರ್ ಟೈಗರ್ ರಿಸರ್ವ್ ಬಳಿಯ ರೆಸಾರ್ಟ್ ಒಂದರಲ್ಲಿ ಕುಟುಂಬದೊಂದಿಗೆ ಆಚರಿಸಿಕೊಳ್ಳಲಿದ್ದಾರೆ.