ಪ್ರತಿಯೊಬ್ಬ ನಾಗರಿಕರಿಗೂ ಉಚಿತವಾಗಿ ಲಸಿಕೆ ನೀಡುವುದು ಸರ್ಕಾರದ ಜವಾಬ್ದಾರಿ: ಸೋನಿಯಾ ಗಾಂಧಿ

ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸ್ಥಿತಿಗತಿ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಕಳೆದ ಚುನಾವಣೆಯಲ್ಲಿ ಪಕ್ಷದ ಸಾಧನೆ ಬಹಳ ನಿರಾಶಾದಾಯಕವಾಗಿದೆ ಮತ್ತಿದನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿದೆ ಎಂದು ಸೋನಿಯಾ ಗಾಂಧಿ ಸಭೆಯಲ್ಲಿ ಹೇಳಿದ್ದಾರೆ.

ನಾವೆಲ್ಲರೂ COVID19 ನ ಕೆಲಸದಲ್ಲಿ ನಿರತರಾಗಿದ್ದೇವೆ, ಇದರ ಮಧ್ಯೆ ಚುನಾವಣಾ ಫಲಿತಾಂಶಗಳನ್ನು ಚರ್ಚಿಸಲು ಈ ಸಭೆಯನ್ನು ಕರೆಯಲಾಗಿದೆ. ಚುನಾವಣೆಯ ಫಲಿತಾಂಶದಿಂದ ನಾವು ನಿರಾಶೆಗೊಂಡಿದ್ದೇವೆ, ಸೋಲಿನ ಕಾರಣವನ್ನು ಪರಿಶೀಲಿಸಲಾಗುವುದು ಮತ್ತು ಪಕ್ಷವು ಮತ್ತೊಮ್ಮೆ ಬಲವಾಗಿ ನಿಲ್ಲಬೇಕಾಗಿದೆ ಎಂದು ಸಭೆಯಲ್ಲಿ ಮಾತನಾಡಿದ್ದಾರೆ.

ಇದೇ ಸಮಯದಲ್ಲಿ ಸೋನಿಯಾ ಗಾಂಧಿ, ದೇಶದ ಕೋವಿಡ್ ಸಂಬಂಧಿಸಿದಂತೆ ಮೋದಿ ಸರ್ಕಾರವನ್ನು ಟೀಕಿಸಿದ್ದು, ಕರೋನಾದಿಂದ ದೇಶದ ಸ್ಥಿತಿ ತುಂಬಾ ಕೆಟ್ಟದಾಗಿದೆ, ಇಂತಹ ಪರಿಸ್ಥಿತಿಯಲ್ಲಿ ಪ್ರತಿಯೊಬ್ಬ ನಾಗರಿಕರಿಗೂ ಲಸಿಕೆ ಉಚಿತವಾಗಿ ನೀಡುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರದ ತಾರತಮ್ಯ ವ್ಯಾಕ್ಸಿನೇಷನ್ ನೀತಿಯು ಲಕ್ಷಾಂತರ ದಲಿತರು, ಬುಡಕಟ್ಟು ಜನಾಂಗದವರು, ಇತರ ಹಿಂದುಳಿದ ವರ್ಗಗಳನ್ನು (ಒಬಿಸಿ) ಹಾಗೂ ಬಡವರು ಮತ್ತು ಅಂಚಿನಲ್ಲಿರುವವರನ್ನು ಹೊರಗಿಡುತ್ತದೆ ಎಂದು ಈ ಹಿಂದೆ ಸೋನಿಯಾ ಆರೋಪಿಸಿದ್ದರು. ಕರೋನ ಎರಡನೇ ತರಂಗ ಬರಬಹುದು ಎಂದು ಮೋದಿ ಸರ್ಕಾರಕ್ಕೆ ರಾಷ್ಟ್ರೀಯ ಕಾರ್ಯಪಡೆ ಎಚ್ಚರಿಕೆ ನೀಡಿತ್ತು ಮತ್ತು ಅದಕ್ಕೆ ಯೋಜನೆ ರೂಪಿಸಿ ತಯಾರಿ ನಡೆಸುವಂತೆ ಒತ್ತಾಯಿಸಿದ್ದರು ಮೋದಿ ಸರ್ಕಾರ ಇದೆಲ್ಲವನ್ನೂ ನಿರ್ಲಕ್ಷ್ಯಿಸಿತು ಎಂದು ಆರೋಪಿಸಿದ್ದರು.

Related posts

Latest posts

ಕುಂಭ ಮೇಳ ಸಂದರ್ಭದಲ್ಲಿ ಮಾಡಿದ 1 ಲಕ್ಷ ಕೋವಿಡ್-19 ಪರೀಕ್ಷೆಗಳು ನಕಲಿ: ತನಿಖಾ ವರದಿ

ಹರಿದ್ವಾರದ ಕುಂಭ ಮೇಳ ಸಂದರ್ಭದಲ್ಲಿ ಮಾಡಲಾಗಿದ ನಾಲ್ಕು ಲಕ್ಷ ಕೋವಿಡ್ ಟೆಸ್ಟ್ ಫಲಿತಾಂಶಗಳಲ್ಲಿ ಹಲವು ನಕಲಿ ಎಂದು ಉತ್ತರಾಖಂಡ ಆರೋಗ್ಯ ಇಲಾಖೆ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ. ವಿವರವಾದ ತನಿಖೆಯ 1,600 ಪುಟಗಳಲ್ಲಿ...

ನನ್ನ ಹೇಳಿಕೆಯಿಂದ ನಾನು ಹಿಂದೆ ಸರಿಯಲ್ಲ : ನಟ ಚೇತನ್ ಸ್ಪಷ್ಟನೆ

ಬ್ರಾಹ್ಮಣ್ಯ ವಿರೋಧಿ ಹೇಳಿಕೆ ಎಂಬ ಆರೋಪದ ಅಡಿ ಇಂದು ಬಸವನಗುಡಿ ಪೊಲೀಸರ ಮುಂದೆ ಹಾಜರಾದ ನಟ ಚೇತನ್ ತನ್ನ ಹೇಳಿಕೆಯ ಬಗ್ಗೆ ಪೊಲೀಸರ ಮುಂದೆ ಸ್ಪಷ್ಟನೆ ದಾಖಲಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ...

ಚಿಕ್ಕಬಳ್ಳಾಪುರ: ಅರ್ಹ ಫಲಾನುಭವಿಗಳನ್ನು ಗುರುತಿಸುವಲ್ಲಿ ವಿಫಲ: ರೈತರಿಗೆ ಸಿಗುತ್ತಿಲ್ಲ ಪರಿಹಾರ ಧನ

ಕೊರೋನಾ ಲಾಕ್ಡೌನ್ ಸಮಯದಲ್ಲಿ ಸಂಕಷ್ಟಕ್ಕೊಳಗಾದ ರೈತರಿಗೆ ಸರ್ಕಾರ ಪರಿಹಾರದ ಅಭಯ ಕೊಟ್ಟಿತು. ಆದರೆ ಅರ್ಹ ಫಲಾನುಭವಿಗಳನ್ನ ಗುರುತಿಸುವಲ್ಲಿ ವಿಫಲವಾದ ಪರಿಣಾಮ ನಿಜವಾದ ರೈತರಿಗೆ ಪರಿಹಾರ ಸಿಗದಂತಾಗಿದೆ. ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ರೈತರು ತಮ್ಮ...