ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ರಾಜಕೀಯ ಹೊಸ ಇತಿಹಾಸ ಬರೆದಿದೆ. ಈವರೆಗೂ ಸೋಲನ್ನೇ ಕಾಣದ ವಿಶ್ವೇಶ್ವರ ಹೆಗಡೆ ಕಾಗೇರಿ ಮೊಟ್ಟ ಮೊದಲ ಬಾರಿಗೆ ಸೋಲನ್ನು ಕಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯಕ್ ಭರ್ಜರಿ ಜಯಭೇರಿ ಬಾರಿಸಿದ್ದಾರೆ.

1999ರಿಂದ ಶಿರಸಿಯಲ್ಲಿ ಬಿಜೆಪಿ ಗೆಲುವು ಸಾಧಿಸುತ್ತಾ ಬಂದಿತ್ತು. ಆದೆ ಈ ಬಾರಿ ಮತದಾರ ಬಿಜೆಪಿಯ ಗೆಲುವಿನ ರೇಸ್ಗೆ ಬ್ರೇಕ್ ಹಾಕಿದ್ದಾನೆ. ಶಿರಸಿ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಆಗುತ್ತಿಲ್ಲ ಎಂಬ ಕಾರಣಕ್ಕೆ ಮತದಾರರು ಕಾಗೇರಿ ಬಗ್ಗೆ ಅಸಮಾಧಾನ ಹೊಂದಿದ್ದರು.