• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ಅಂಗವಿಕಲರ ಆರೋಗ್ಯಕ್ಕಾಗಿ ವಿಶೇಷ ವಿಮಾ ಯೋಜನೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ

ಪ್ರತಿಧ್ವನಿ by ಪ್ರತಿಧ್ವನಿ
December 3, 2022
in ರಾಜಕೀಯ
0
ಅಂಗವಿಕಲರ ಆರೋಗ್ಯಕ್ಕಾಗಿ ವಿಶೇಷ ವಿಮಾ ಯೋಜನೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ
Share on WhatsAppShare on FacebookShare on Telegram

ಬೆಂಗಳೂರು, ಡಿಸೆಂಬರ್ 3 :

ADVERTISEMENT

ಅಂಗವಿಕಲರ ಆರೋಗ್ಯಕ್ಕಾಗಿ ವಿಶೇಷ ವಿಮಾ ಯೋಜನೆ ರೂಪಿಸಿ, 5 ಲಕ್ಷದ ವರೆಗಿನ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವ ಯೋಜನೆ ಪ್ರಾರಂಭಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.ಅವರು ಇಂದು ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ನಿರ್ದೇಶನಾಲಯದ ವತಿಯಿಂದ ಆಯೋಜಿಸಿದ್ದ ವಿಶ್ವ ವಿಕಲಚೇತನರ ದಿನಾಚರಣೆ -2022ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಸರ್ಕಾರದ ವಸತಿ ಯೋಜನೆಗಳಲ್ಲಿ ಅಂಗವಿಕಲಿಗೆ ಶೇ.3 ರಷ್ಟು ಮೀಸಲಾತಿ :

ವಿಕಲಚೇತನರು ದೈರ್ಯದಿಂದ ಯಶಸ್ವಿಯಾಗಿ.‌ಬದುಕು ನಡೆಸಲು ಸರ್ಕಾರ ಎಲ್ಲ ಸಹಕಾರವನ್ನು ನೀಡಲಿದೆ. ಸರ್ಕಾರ ನಿರ್ಮಿಸುವ ಮನೆಗಳಲ್ಲಿ ಅಂಗವಿಕಲರಿಗೆ ನೀಡುವಲ್ಲಿ ಶೇ.3 ರಷ್ಟು ಮೀಸಲಾತಿಯನ್ನು ನೀಡಲಾಗುವುದು. ಬುದ್ಧಿಮಾಂದ್ಯ ಮಕ್ಕಳಿಗೆ ಶೆಲ್ಟರ್ಡ್ ವರ್ಕ್ ಶಾಪ್ ಸ್ಥಾಪಿಸಲು ತೀರ್ಮಾನಿಸಲಾಗಿದೆ ಎಂದರು.

ಅಂಗವಿಕಲರಿಗೆ ಮಾರ್ಚ್ 31ರೊಳಗೆ 2 ಸಾವಿರ ಟ್ರೈ ಸೈಕಲ್ :

ಸರ್ಕಾರದ ವತಿಯಿಂದ ಅಂಗವಿಕಲಿಗೆ ಪವರ್ಡ್ ಟ್ರೈಸೈಕಲ್ ನೀಡಲಾಗುತ್ತಿದೆ. ಈ ವರ್ಷ ಈ ಯೋಜನೆಗೆ 25 ಕೋಟಿ ರೂ.ಗಳನ್ನು ನೀಡಿ 2 ಸಾವಿರ ಟ್ರೈ ಸೈಕಲ್ ಗಳನ್ನು ಮಾರ್ಚ್ 31ರೊಳಗೆ ನೀಡಲು ತೀರ್ಮಾನಿಸಿರುವುದಾಗಿ ತಿಳಿಸಿದರು.

ಮುಂದಿನ ಬಜೆಟ್ ನಲ್ಲಿ ವಿಕಲಚೇತನರ ವಿದ್ಯಾಭ್ಯಾಸಕ್ಕಾಗಿ ವಿಶೇಷ ಅನುದಾನ:

ವಸತಿ ಶಾಲೆಗಳಲ್ಲಿ ಬುದ್ದಿಮಾಂದ್ಯ ಮಕ್ಕಳಿಗೆ ನೀಡಲಾಗುತ್ತಿದ್ದ 6800 ರೂ.ಗಳನ್ನು 10200 ರೂ.ಗಳಿಗೆ ಹೆಚ್ಚಿಸಲಾಗಿದೆ. ಬುದ್ಧಿಮಾಂದ್ಯ ಮಕ್ಕಳ ವಸತಿರಹಿತ ಶಾಲೆಗಳಲ್ಲಿ ನೀಡಲಾಗುತ್ತಿದ್ದ 6000 ರೂ.ಗಳನ್ನು 9000 ರೂ.ಹೆಚ್ಚಿಸಿ ನೀಡಲಾಗುತ್ತಿದೆ. ಅಂಧಕಿವುಡ ಮಕ್ಕಳ ವಸತಿ ಶಾಲೆಗಳಲ್ಲಿರುವವರಿಗೆ 9300 ರೂ.ಗಳನ್ನು, ವಸತಿರಹಿತ ಶಾಲೆಗಳ ಅಂಧಕಿವುಡ ಮಕ್ಕಳಿಗೆ 7800 ರೂ.ಗಳನ್ನು ,ಹಗಲುಸೇವೆ ಯೋಗಕ್ಷೇಮ ಕೇಂದ್ರಗಳಿಗೆ 15000 ರೂ.ಗಳನ್ನು , ವೃದ್ಧಾಶ್ರಮ ಕೇಂದ್ರಗಳ ನಿರ್ವಹಣೆಗೆ 12 ಲಕ್ಷ ರೂ. ನೀಡಲಾಗುತ್ತಿದೆ. ಮುಖ್ಯಮಂತ್ರಿಯಾದ ತಕ್ಷಣ ವಿಕಲಚೇತನರ ಮಾಸಾಶನವನ್ನು ಹೆಚ್ಚಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ಸವಲತ್ತುಗಳನ್ನು ಹೆಚ್ಚಿಸಲಾಗುವುದು. ಆಸಿಡ್ ದಾಳಿಯಿಂದ ಬಳಲುವ ಹೆಣ್ಣು ಮಕ್ಕಳಿಗೆ 3000 ರೂ. ದಿಂದ 10000 ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ. ವಿಕಲಚೇತನರ ವಿದ್ಯಾಭ್ಯಾಸಕ್ಕಾಗಿ ಮುಂದಿನ ಬಜೆಟ್ ನಲ್ಲಿ ವಿಶೇಷ ಅನುದಾನವನ್ನು ಮೀಸಲಿರಿಸಲಾಗುವುದು ಎಂದರು.

ವಿಕಲಚೇತನರು ವಿಶೇಷವಾದ ದೇವರ ಮಕ್ಕಳು :

ದೇವರು ಸೃಷ್ಟಿ ಮಾಡುವಾಗ ಹಲವಾರು ಸವಾಲುಗಳನ್ನು ಮನುಷ್ಯನಿಗೆ ಇಟ್ಟಿರುತ್ತಾನೆ. ಎಲ್ಲ ಅಂಗ ಇದ್ದವರಿಗೂ ದೇವರು ಸವಾಲು ಇಟ್ಡಿರುತ್ತಾನೆ‌. ಅಂಗಾಂಗಳ ಕೊರತೆ ಇದೆಯೆಂಬ ಕೀಳರಿಮೆ ಬೇಡ.ವಿಕಲಚೇತನರು ವಿಶೇಷವಾದ ದೇವರ ಮಕ್ಕಳು. ಸವಾಲುಗಳನ್ನು ಎದುರಿಸುವ ವಿಶೇಷ ಶಕ್ತಿಯನ್ನು ಹಾಗೂ ಮನೋಸ್ಥೈರ್ಯವನ್ನು ದೇವರು ನಿಮಗೆ ನೀಡಿದ್ದಾನೆ. ನೀವು ಆತ್ಮ ವಿಶ್ವಾಸದಿಂದ ಇರಬೇಕು. ನಾವೂ ಇತರರಂತೆ ಬದುಕಿ ತೋರಿಸುತ್ತೇವೆ ಎಂಬ ಛಲ ಮತ್ತು ನಂಬಿಕೆ ಇರಬೇಕು. ನಿಮಗೆ ಅನುಕಂಪದ ಅವಶ್ಯಕತೆ ಇಲ್ಲ. ವಿಕಲಚೇತನರನ್ನು ಸಶಕ್ತಗೊಳಿಸುವ ಸಮಾಜದ ಅವಶ್ಯಕತೆ ಇದೆ. ಕೆಳಗೆ ಬೀಳುವ ವ್ಯಕ್ತಿಯನ್ನು ಮೇಲೆತ್ತುವುದು ಮಾನವ ಧರ್ಮ, ಅದನ್ನು ಮನುಷ್ಯರು ಮರೆಯದೇ ನೆರವು ನೀಡಬೇಕು. ಇದು ವಿಶ್ವ ಮಾನವ ಸಮಾಜ. ಒಬ್ಬರಿಗೊಬ್ಬರು ಕೈ ಹಿಡಿದು ನಡೆಯುವ ಮಾನವೀಯ ಗುಣವನ್ನು ಎಲ್ಲರೂ ಪಾಲಿಸಬೇಕು ಎಂದರು.

ದಿವ್ಯಾಂಗ ಮಕ್ಕಳ ಸಹಾಯಕ್ಕೆ ಬರಲು ಕನ್ನಡ ಜನತೆಗೆ ಮುಖ್ಯಮಂತ್ರಿಗಳ ಕರೆ :

ಎಲ್ಲ ಅಂಗಾಂಗಳು ಸರಿಯಿದ್ದವರಿಗೂ ಸಮಾಧಾನ ಇರುವುದಿಲ್ಲ. ಪರೋಪಕಾರದ ಗುಣವನ್ನು ಬೆಳೆಸಿಕೊಂಡರೆ ಮಾತ್ರ ಸಮಾಧಾನ ದೊರೆಯುತ್ತದೆ. ಸಶಕ್ತರಾಗಿರುವವರು ದಿವ್ಯಾಂಗ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಿ, ಸಹಾಯ ಮಾಡಬೇಕು. ರಾಜ್ಯದಲ್ಲಿ ಸುಮಾರು 40 ರಿಂದ 50 ಲಕ್ಷ ದಿವ್ಯಾಂಗ ಮಕ್ಕಳಿದ್ದು, ಅವರ ಬೆಳವಣಿಗೆಗೆ ಏಳು ಕೊಟಿ ಕನ್ನಡಿಗರು ಸಹಾಯ ಮಾಡುವ ಹೃದಯಶ್ರೀಮಂತಿಕೆಯನ್ನು ಬೆಳೆಸಿಕೊಳ್ಳಬೇಕು. ದೇವರ ಮಕ್ಕಳಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆಯಬೇಕು.ದಿವ್ಯಾಂಗ ಮಕ್ಕಳನ್ನು ಬೆಳೆಸುವ ಪ್ರತಿಜ್ಞೆ ತೆಗೆದುಕೊಳ್ಳಬೇಕು ಎಂದು ಕನ್ನಡ ಜನತೆಗೆ ಕರೆ ನೀಡಿದರು.

ಈ ಸಂದರ್ಭದಲ್ಲಿ ವಿಕಲಚೇತನರ ಮತ್ತು ಹಿರಿಯ ನಾಗರಿಕ ಸಚಿವ ಹಾಲಪ್ಪ ಆಚಾರ್, ಸಂಸದ ಪಿ.ಸಿ.ಮೋಹನ್,ಶಾಸಕ ರಿಜ್ವಾನ್ ಅರ್ಷದ್ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿದ್ದ

Tags: ಟ್ರೈ ಸೈಕಲ್ಬಜೆಟ್ಬಜೆಟ್‌ಬಿಜೆಪಿವಸತಿ ಯೋಜನೆವಿಕಲಚೇತನವಿಮಾ ಯೋಜನೆಸಿಎಂ ಬಸವರಾಜ್ ಬೊಮ್ಮಾಯಿ
Previous Post

CM Basavaraj Bommai : ರಾಜ್ಯದಲ್ಲಿ ಚಿರತೆ ಹಾವಳಿ: ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ| Pratidhvani

Next Post

Bond Ravi: ಈ ಬಾಂಡ್‌ ರವಿಗೆ ಅಣ್ಣಾ ಬಾಂಡ್‌ ಇನ್‌ಸ್ಪಿರೇಷನ್‌| Pramod | Kajal Kunder | Puneeth Rajkumar

Related Posts

ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್
Top Story

ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 14, 2025
0

ನವದೆಹಲಿ: ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ಡಿಸಿಎಂ ಡಿ.ಕೆ....

Read moreDetails
ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

December 14, 2025
ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

December 14, 2025
“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

December 13, 2025
ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ: ಸಚಿವ ದಿನೇಶ್ ಗುಂಡೂರಾವ್

December 13, 2025
Next Post
Bond Ravi: ಈ ಬಾಂಡ್‌ ರವಿಗೆ ಅಣ್ಣಾ ಬಾಂಡ್‌ ಇನ್‌ಸ್ಪಿರೇಷನ್‌| Pramod | Kajal Kunder | Puneeth Rajkumar

Bond Ravi: ಈ ಬಾಂಡ್‌ ರವಿಗೆ ಅಣ್ಣಾ ಬಾಂಡ್‌ ಇನ್‌ಸ್ಪಿರೇಷನ್‌| Pramod | Kajal Kunder | Puneeth Rajkumar

Please login to join discussion

Recent News

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌
Top Story

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌

by ಪ್ರತಿಧ್ವನಿ
December 14, 2025
ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್
Top Story

ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 14, 2025
ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?
Top Story

ಮೊಟ್ಟೆಗಳಲ್ಲಿ ಕ್ಯಾನ್ಸರ್‌ ಕಾರಕ ಅಂಶ ಪತ್ತೆ ಆರೋಪ: ದಿನೇಶ್ ಗುಂಡೂರಾವ್ ಹೇಳಿದ್ದೇನು?

by ಪ್ರತಿಧ್ವನಿ
December 14, 2025
ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್
Top Story

ಹೊಸ ಬೆಂಗಳೂರು ನಿರ್ಮಾಣ ಮಾಡಿ ವಿಶ್ವದ ಜನರನ್ನು ಆಕರ್ಷಿಸಬೇಕು: ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 14, 2025
ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ
Top Story

ವಿಮಾನದಲ್ಲಿ ವಿದೇಶಿ ಯುವತಿಯ ಜೀವ ಕಾಪಾಡಿದ ಅಂಜಲಿ ನಿಂಬಾಳ್ಕರ್‌ಗೆ ಸಿಎಂ ಮೆಚ್ಚುಗೆ

by ಪ್ರತಿಧ್ವನಿ
December 14, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌

BBK 12: ಬಿಗ್‌ಬಾಸ್‌ ಮನೆಯಿಂದ ರಕ್ಷಿತಾ ಶೆಟ್ಟಿ & ಧ್ರುವಂತ್ ಔಟ್‌

December 14, 2025
ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಮ್ಮ ಹೋರಾಟ: ಡಿ.ಕೆ ಶಿವಕುಮಾರ್

December 14, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!