• Home
  • About Us
  • ಕರ್ನಾಟಕ
Wednesday, September 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಶೇಷ ಪೌಷ್ಟಿಕ ಆಹಾರ -‌ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ

ಪ್ರತಿಧ್ವನಿ by ಪ್ರತಿಧ್ವನಿ
September 2, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಬೆಂಗಳೂರಿನ ಕೆ.ಸಿ ಜನರಲ್ ಆಸ್ಪತ್ರೆ,,ಜಯನಗರ ಹಾಗೂ ಸಿ.ವಿ ರಾಮನ್ ನಗರ ಆಸ್ಪತ್ರೆಗಳಲ್ಲಿ ಯೋಜನೆ ಆರಂಭ

ADVERTISEMENT

ಪ್ರತಿನಿತ್ಯ ರೋಗಿಗಳಿಗೆ ಪೌಷ್ಟಿಕ ಆಹಾರ ವಿತರಿಸಲು ಇಸ್ಕಾನ್ ಜೊತೆ ಆರೋಗ್ಯ ಇಲಾಖೆ ಒಪ್ಪಂದ

ರಾಜ್ಯದಲ್ಲಿ‌ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಗಳಿಗೆ ಪೌಷ್ಠಿಕ ಆಹಾರ ಒದಗಿಸುವ ಯೋಜನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಚಾಲನೆ ನೀಡಿದರು. ಒಂದೇ ರೀತಿಯ ಸಾಮಾನ್ಯ ಆಹಾರದ ಬದಲು ರೋಗಿಗಳಿಗೆ ಅಗತ್ಯ ಪೌಷ್ಠಿಕಾಂಶ ಒದಗಿಸುವ ಆಹಾರವನ್ನು ನೀಡುವ ಯೋಜನೆಯನ್ನು ಆರೋಗ್ಯ ಇಲಾಖೆ ಇಸ್ಕಾನ್ ಸಂಸ್ಥೆಯ ಸಹಭಾಗಿತ್ವದೊಂದಿಗೆ ಜಾರಿಗೆ ತಂದಿದೆ.

ಬೆಂಗಳೂರಿನ ಸಿ.ವಿ ರಾಮನ್ ನಗರ ಆಸ್ಪತ್ರೆಯಲ್ಲಿ ರೋಗಿಗಳಿಗೆ ಆಹಾರ ವಿತರಿಸುವ ಮೂಲಕ ‘ವಿಶೇಷ ಪೌಷ್ಟಿಕ ಆಹಾರ’ ಯೋಜನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಚಾಲನೆ ನೀಡಿದರು. ಬಳಿಕ ಮಾತನಾಡಿದ ಸಚಿವರು, ರೋಗಿಗಳ ಚೇತರಿಕೆಗೆ ಚಿಕಿತ್ಸೆಯ ಜೊತೆಗೆ ಪೌಷ್ಠಿಕ ಆಹಾರ ಸೇವನೆ ಕೂಡ ಮಹತ್ವದ ಪಾತ್ರ ವಹಿಸಲಿದೆ.. ಈ ಯೋಜನೆಯ ಮೂಲಕ ರೋಗಿಗಳ ನಿರ್ದಿಷ್ಟ ಪೌಷ್ಟಿಕಾಂಶದ ಅಗತ್ಯಗಳನ್ನು ಪೂರೈಸುವ ಆಹಾರವನ್ನ ಒದಗಿಸಲಾಗುವುದು.
ರೋಗಿಗಳ ಆರೋಗ್ಯ ಸ್ಥಿತಿ ಮತ್ತು ವಯಸ್ಸಿಗೆ ಅನುಗುಣವಾಗಿ ಪೌಷ್ಟಿಕಾಂಶದ ಅಗತ್ಯಗಳು ಭಿನ್ನವಾಗಿರುವುದರಿಂದ, ಎಲ್ಲರಿಗೂ ಒಂದೇ ರೀತಿಯ ಆಹಾರ ಸೂಕ್ತವಲ್ಲ.
ಆಹಾರ ಪದ್ಧತಿಯನ್ನು ಸಂಪೂರ್ಣವಾಗಿ ಪರಿಷ್ಕರಿಸಲಾಗಿದ್ದು, ರೋಗಿಗಳ ವೈದ್ಯಕೀಯ ಅಗತ್ಯಗಳ ಆಧಾರದ ಮೇಲೆ ಆಹಾರವನ್ನು ವಿಂಗಡಿಸಲಾಗಿದೆ.

ಮೊದಲ ಹಂತದದಲ್ಲಿ ಬೆಂಗಳೂರಿನ ಕೆ.ಸಿ ಜನರಲ್ ಆಸ್ಪತ್ರೆ, ಜಯನಗರ ಹಾಗೂ ಸಿ.ವಿ ರಾಮನ್ ನಗರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ ದಾಖಲಾದ ರೋಗಿಗಳಿಗೆ ವಿಶೇಷ ಪೌಷ್ಠಿಕ ಆಹಾರವನ್ನು ಪ್ರತಿನಿತ್ಯ ಒದಗಿಸಲಾಗುವುದು. ಇಸ್ಕಾನ್ ಸಂಸ್ಥೆಯ ಸಹಭಾಗಿತ್ವದೊಂದಿಗೆ ಆರೋಗ್ಯ ಇಲಾಖೆ ಯೋಜನೆಯನ್ನು ಜಾರಿಗೆ ತಂದಿದ್ದು, ಮುಂಬರುವ ದಿನಗಳಲ್ಲಿ ರಾಜ್ಯದ ಎಲ್ಲ ಸರ್ಕಾರಿ ಜಿಲ್ಲಾಸ್ಪತ್ರೆಗಳಿಗೆ ಪೌಷ್ಠಿಕ ಆಹಾರ ವಿತರಣೆ ಜಾರಿಗೆ ತರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಸಾಮಾನ್ಯ ಆಹಾರ ಕ್ರಮದ ಜೊತೆಗೆ ಚಿಕಿತ್ಸಾ ಆಹಾರ ಕ್ರಮವನ್ನು ಯೋಜನೆಯೆಡಿ ರೂಪಿಸಲಾಗಿದೆ. ಗರ್ಭಿಣಿಯರ ಆಹಾರ ಕ್ರಮ (Pregnancy Diet Plan) ಬಾಣಂತಿಯರ ಆಹಾರ ಕ್ರಮ Diet Plan) ಹಾಗು ಮಕ್ಕಳ ಆಹಾರ ಕ್ರಮ (paediatric diet plan) ಎಂದು ಆಹಾರವನ್ನು ಐದು ಪ್ರಮುಖ ವಿಭಾಗಗಳಾಗಿ ವಿಂಗಡಿಸಿ ಯೋಜನೆಯಡಿ ಪೌಷ್ಟಿಕ ಆಹಾರ ನೀಡಲಾಗುತ್ತದೆ.

ರೋಗಿಯ ಆರೋಗ್ಯ ಚೇತರಿಕೆಗೆ ಸಹಕಾರಿಯಾಗುವಂತೆ ವೈದ್ಯಕೀಯ ಉದ್ದೇಶಗಳಿಗಾಗಿ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದ್ದು ಪ್ರತಿ ಆಸ್ಪತ್ರೆಯಲ್ಲಿ ಸುಮಾರು 250 ರೋಗಿಗಳಿಗೆ ಪ್ರತಿದಿನ ಆಹಾರವನ್ನು ಸರಬರಾಜು ಮಾಡಲು ಇಸ್ಕಾನ್ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಇದಕ್ಕಾಗಿ 9 ತಿಂಗಳ ಅವಧಿಗೆ ₹1,37,45,700 ವೆಚ್ಚವನ್ನು ಆರೋಗ್ಯ ಇಲಾಖೆಯಿಂದ ಭರಿಸಲಾಗುತ್ತದೆ.ಯೋಜನೆಯಡಿ ರೋಗಿಗಳಿಗೆ ಪ್ರತಿದಿನ – ಬೆಳಗಿನ ಉಪಹಾರ, ಬೆಳಿಗ್ಗೆ ಮತ್ತು ಸಂಜೆ ಲಘು ಉಪಹಾರ, ಮಧ್ಯಾಹ್ನ ಮತ್ತು ರಾತ್ರಿ ಊಟವನ್ನು ವಿತರಿಸಲಾಗುವುದು.

ಗರ್ಭಿಣಿಯರು, ಬಾಣಂತಿಯರು ಮತ್ತು ಮಕ್ಕಳು ರೋಗನಿರೋಧಕ ಶಕ್ತಿ ಮತ್ತು ಸರಿಯಾದ ಬೆಳವಣಿಗೆಗೆ ವಿಶೇಷ ಪೌಷ್ಟಿಕಾಂಶಗಳನ್ನು ಪಡೆಯುವುದು ಬಹಳ ಮುಖ್ಯ. ಈ ಯೋಜನೆಯು ಇಂತಹ ರೋಗಿಗಳ ಅಗತ್ಯಗಳಿಗೆ ಆದ್ಯತೆ ನೀಡಿದೆ. ಉದಾಹರಣೆಗೆ, ಗರ್ಭಿಣಿಯರಿಗೆ ಗರ್ಭಾವಸ್ಥೆಯ ಆರೋಗ್ಯಕ್ಕೆ ಅಗತ್ಯವಾದ ಕಬ್ಬಿಣ ಮತ್ತು ಫೋಲಿಕ್ ಆಮ್ಲ ಹೆಚ್ಚಿರುವ ಆಹಾರವನ್ನು ನೀಡಲಾಗುತ್ತದೆ. ಬಾಣಂತಿಯರಿಗೆ ಹಾಲು ಉತ್ಪಾದನೆ ಮತ್ತು ಆರೋಗ್ಯಕ್ಕೆ ಸಹಕಾರಿಯಾಗುವ ಆಹಾರವನ್ನು ಒದಗಿಸಲಾಗುತ್ತದೆ. ಸಮರ್ಪಕ ಪೌಷ್ಟಿಕ ಆಹಾರವು ರೋಗಿಗಳನ್ನು ವೇಗವಾಗಿ ಚೇತರಿಸಿಕೊಳ್ಳಲು ಸಹಾಯ ಮಾಡುತ್ತದೆ.

Tags: bjp slams dinesh gunduraoDinesh Gunduraodinesh gundurao about pm modidinesh gundurao daughtersdinesh gundurao interviewdinesh gundurao latest newsdinesh gundurao love storydinesh gundurao newsdinesh gundurao on bjp leadersdinesh gundurao returningdinesh gundurao slams pm modidinesh gundurao slams yogidinesh gundurao speechex minister dinesh gunduraohd kumaraswamy vs dinesh gunduraoMinister Dinesh Gunduraotabu dinesh gunduraowho is dinesh gundurao's wife?
Previous Post

ಬಿಡುಗಡೆಗೆ ಸಿದ್ಧವಾಗುತ್ತಿದೆ ಡಾರ್ಲಿಂಗ್ ಕೃಷ್ಣ ಅಭಿನಯದ “ಬ್ರ್ಯಾಟ್” ಚಿತ್ರ..!!

Next Post

ಬೆಂಗಳೂರಿನಲ್ಲಿ ಮಿರಾಯ್ ಸಿನಿಮಾ ಪ್ರಚಾರ ಮಾಡಿದ ತೇಜ ಸಜ್ಜಾ..!!

Related Posts

Top Story

Santhosh Lad: ಕೌಶಲ್ಯ ತರಬೇತಿ ಸಂಸ್ಥೆ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ..!!

by ಪ್ರತಿಧ್ವನಿ
September 2, 2025
0

ಧಾರವಾಡ ಮತ್ತು ಮೈಸೂರು ಜಿಲ್ಲೆಗಳಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಕೌಶಲ್ಯ ತರಬೇತಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಕಾರ್ಮಿಕ ಸಚಿವರು ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ...

Read moreDetails

ಬೆಂಗಳೂರಿನಲ್ಲಿ ಮಿರಾಯ್ ಸಿನಿಮಾ ಪ್ರಚಾರ ಮಾಡಿದ ತೇಜ ಸಜ್ಜಾ..!!

September 2, 2025

ಬಿಡುಗಡೆಗೆ ಸಿದ್ಧವಾಗುತ್ತಿದೆ ಡಾರ್ಲಿಂಗ್ ಕೃಷ್ಣ ಅಭಿನಯದ “ಬ್ರ್ಯಾಟ್” ಚಿತ್ರ..!!

September 2, 2025

ಈ ವಾರ ತೆರೆಗೆ “ಜಾಲಿಡೇಸ್” ಖ್ಯಾತಿಯ ನಿರಂಜನ್ ಶೆಟ್ಟಿ ಅಭಿನಯದ “31 ಡೇಸ್”

September 2, 2025

ನ್ಯಾ.ನಾಗಮೋಹನ್‍ದಾಸ್ ಅಥವಾ ಮಾಧುಸ್ವಾಮಿ ವರದಿಗೆ ಅನುಮೋದನೆ- ಗೋವಿಂದ ಕಾರಜೋಳ ಆಗ್ರಹ

September 2, 2025
Next Post

ಬೆಂಗಳೂರಿನಲ್ಲಿ ಮಿರಾಯ್ ಸಿನಿಮಾ ಪ್ರಚಾರ ಮಾಡಿದ ತೇಜ ಸಜ್ಜಾ..!!

Recent News

Top Story

Santhosh Lad: ಕೌಶಲ್ಯ ತರಬೇತಿ ಸಂಸ್ಥೆ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ..!!

by ಪ್ರತಿಧ್ವನಿ
September 2, 2025
Top Story

ಬೆಂಗಳೂರಿನಲ್ಲಿ ಮಿರಾಯ್ ಸಿನಿಮಾ ಪ್ರಚಾರ ಮಾಡಿದ ತೇಜ ಸಜ್ಜಾ..!!

by ಪ್ರತಿಧ್ವನಿ
September 2, 2025
Top Story

ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಶೇಷ ಪೌಷ್ಟಿಕ ಆಹಾರ -‌ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ

by ಪ್ರತಿಧ್ವನಿ
September 2, 2025
Top Story

ಬಿಡುಗಡೆಗೆ ಸಿದ್ಧವಾಗುತ್ತಿದೆ ಡಾರ್ಲಿಂಗ್ ಕೃಷ್ಣ ಅಭಿನಯದ “ಬ್ರ್ಯಾಟ್” ಚಿತ್ರ..!!

by ಪ್ರತಿಧ್ವನಿ
September 2, 2025
Top Story

ಈ ವಾರ ತೆರೆಗೆ “ಜಾಲಿಡೇಸ್” ಖ್ಯಾತಿಯ ನಿರಂಜನ್ ಶೆಟ್ಟಿ ಅಭಿನಯದ “31 ಡೇಸ್”

by ಪ್ರತಿಧ್ವನಿ
September 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Santhosh Lad: ಕೌಶಲ್ಯ ತರಬೇತಿ ಸಂಸ್ಥೆ ಸ್ಥಾಪನೆ: ಸಚಿವ ಸಂತೋಷ್‌ ಲಾಡ್‌ ಸಭೆ..!!

September 2, 2025

ಬೆಂಗಳೂರಿನಲ್ಲಿ ಮಿರಾಯ್ ಸಿನಿಮಾ ಪ್ರಚಾರ ಮಾಡಿದ ತೇಜ ಸಜ್ಜಾ..!!

September 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada