ಬೆಂಗಳೂರು: ಉತ್ತರ ಕರ್ನಾಟಕ ಭಾಗದಿಂದ ಬೆಂಗಳೂರಿಗೆ ಬರುವ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್ 24 ಮತ್ತು 25 ರಂದು ಹುಬ್ಬಳ್ಳಿ ಹಾಗೂ ಬೆಂಗಳೂರು ನಡುವೆ ವಿಶೇಷ ರೈಲು ಸಂಚರಿಸಲಿವೆ.
ಎಸ್ಎಸ್ಎಸ್ ಹುಬ್ಬಳ್ಳಿ ಮತ್ತು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಡುವೆ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ವಿಶೇಷ ರೈಲುಗಳ ಒಂದು ಟ್ರಿಪ್ ಓಡಿಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ. ಈ ಬಗ್ಗೆ ಪ್ರಕಟಣೆ ನೀಡಿದ್ದಾರೆ.
ರೈಲು ಸಂಖ್ಯೆ 07309 ಎಸ್ಎಸ್ಎಸ್ ಹುಬ್ಬಳ್ಳಿ -ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ವಿಶೇಷ ಎಕ್ಸ್ಪ್ರೆಸ್ ಈ ವಿಶೇಷ ರೈಲು ಅಕ್ಟೋಬರ್ 24 ಸಂಜೆ 5 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಡಲಿದೆ. ಬೆಂಗಳೂರಿಗೆ ಮರುದಿನ ಬೆಳಿಗ್ಗೆ 5:45 ಕ್ಕೆ ತಲುಪುತ್ತದೆ.