ಬೀದರ್:ಕ್ರೀಡೆಯಲ್ಲಿ ತೊಡಗಿಸಿಕೊಂಡವರಿಗೆ ಯಾವುದೇ ರೋಗಗಳು ಬಾಧಿಸುವುದಿಲ್ಲ. ದೈಹಿಕ ಮತ್ತು ಮಾನಸಿಕವಾಗಿ ಆರೋಗ್ಯವಾಗಿರಲು ಕ್ರೀಡೆಗಳು ಅವಶ್ಯಕವಾಗಿದ್ದು, ವಿದ್ಯಾರ್ಥಿಗಳು ಓದಿನೊಂದಿಗೆ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳಬೇಕು. ವಿಶೇಷವಾಗಿ ದೇಶೀಯ ಆಟಗಳನ್ನು ಆಡಬೇಕೆಂದು ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಬೀದರ ಹಾಗೂ ಪತ್ರಿಸ್ವಾಮಿ ಪದವಿ ಪೂರ್ವ ಕಾಲೇಜು ಔರಾದ(ಬಿ) ಸಂಯುಕ್ತಾಶ್ರಯದಲ್ಲಿ ಆ.16ರಂದು ಔರಾದ(ಬಿ) ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 2024-25ನೇ ಸಾಲಿನ ತಾಲ್ಲೂಕು ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ಕ್ರೀಡಾಕೂಟಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ತಾಲ್ಲೂಕು, ಜಿಲ್ಲಾ ಮತ್ತು ವಿಭಾಗ ಮಟ್ಟದಲ್ಲಿ ಜಯಿಸಿ ರಾಜ್ಯಮಟ್ಟಕ್ಕೆ ಹೋಗುವ ತಂಡಕ್ಕೆ 31,000 ಬಹುಮಾನ ಮತ್ತು ಟೀ ಶರ್ಟ್ಗಳನ್ನು ನೀಡಲಾಗುವುದೆಂದು ಘೋಷಿಸಿದರು. ವಿದ್ಯಾರ್ಥಿಗಳು ಕ್ರೀಡಾ ಭಾವನೆಯಿಂದ ಹುಮ್ಮಸ್ಸಿನಿಂದ ಆಟವಾಡಬೇಕು. ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಜಯಿಸಿ ತಾಲ್ಲೂಕಿನ ಹೆಸರನ್ನು ಎತ್ತರಕ್ಕೇರಿಸಬೇಕು. ಶಿಕ್ಷಣದ ಅಭಿವೃದ್ಧಿಗೆ ನಾನು ಸದಾ ಬದ್ಧನಾಗಿದ್ದು, ಐಎಎಸ್, ಐಪಿಎಸ್, ಕೆಎಎಸ್‌ನಂತಹ ಹುದ್ದೆಗಳಿಗೆ ಏರಲು ಪ್ರಯತ್ನ ವಹಿಸಬೇಕು. ಕ್ರೀಡಾ ಕ್ಷೇತ್ರದಲ್ಲಿ ಸಾಧಿಸಲು ಮುಂದಾಗಬೇಕು ಎಂದರು.
ಮಾಜಿ ಶಾಸಕರಾದ ಗುಂಡಪ್ಪ ಬಿರಾದಾರ ಮಾತನಾಡಿ, ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗಬೇಕೆಂಬ ಸದಾಶಯದೊಂದಿಗೆ ಶಾಸಕರು ಕೆಲಸ ಮಾಡುತ್ತಿದ್ದಾರೆ. ಮಕ್ಕಳ ಕಲಿಕೆಗೆ ಬೇಕಿರುವ ಎಲ್ಲ ಸೌಕರ್ಯಗಳನ್ನು ಒದಗಿಸುತ್ತಿದ್ದಾರೆ. ಮಕ್ಕಳು ಇದರ ಸದುಪಯೋಗ ಪಡೆದು ಉತ್ತಮ ಅಭ್ಯಾಸ ಮಾಡಬೇಕು. ಕೇವಲ ಪದವಿಗಳಿಗೆ ಹಿಂಬಾಲಿಸದೇ ಇಂದಿನ ಕಾಲಕ್ಕೆ ಅನುಗುಣ ಉತ್ತಮ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಸ್ಪರ್ಧಾತ್ಮಕ ಯುಗಕ್ಕೆ ಹೊಂದಿಕೊಳ್ಳಬೇಕು ಸಲಹೆ ಮಾಡಿದರು.
ಈ ಸಂದರ್ಭದಲ್ಲಿ ತಹಸೀಲ್ಧಾರರಾದ ಮಲಶೆಟ್ಟಿ ಚಿದ್ರೆ, ಪ್ರಾಂಶುಪಾಲರಾದ ಓಂಪ್ರಕಾಶ ದಡ್ಡೆ, ಡಾ.ಮನ್ಮಥ ಢೋಳೆ, ರೋಣಯ್ಯ ಮಠ, ಅನೀಲಕುಮಾರ, ಅಖಿಲ್, ಸಮಾಜ ಸೇವಕ ರಾಹುಲ ಮಿಶ್ರಾ, ಜಾನಪದ ಅಕಾಡೆಮಿ ಸದಸ್ಯ ವಿಜಯಕುಮಾರ ಸೊನಾರೆ, ಎಪಿಎಂಸಿ ಅಧ್ಯಕ್ಷ ಧೊಂಡಿಬಾ ನರೋಟೆ, ಮುಖಂಡರಾದ ರಾಮಶೆಟ್ಟಿ ಪನ್ನಾಳೆ, ಶಿವರಾಜ ಅಲ್ಮಾಜೆ, ಪ್ರವೀಣ ಕಾರಬಾರಿ ಸೇರಿದಂತೆ ವವಿಧ ಪದವಿ ಪೂರ್ವ ಕಾಲೇಜಗಳ ಉಪನ್ಯಾಸಕು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಗುರುನಾಥ ದೇಶಮುಖ ಪ್ರಾಸ್ತಾವಿಕ ಮಾತನಾಡಿದರು. ಕಂಟೆಪ್ಪ ಭೌರಾ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ನಂತರ ಶಾಸಕರು ಕೂಡ ವಿದ್ಯಾರ್ಥಿಗಳೊಂದಿಗೆ ವಾಲಿಬಾಲ್ ಆಟವಾಡಿ ಗಮನ