• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜನವರಿ 5ಕ್ಕೆ “ಶ್ರೀ ಗುರು ರಾಘವೇಂದ್ರ ಉತ್ಸವ”

ಪ್ರತಿಧ್ವನಿ by ಪ್ರತಿಧ್ವನಿ
January 1, 2025
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಇದೇ ಮೊಟ್ಟ ಮೊದಲ ಬಾರಿಗೆ ಸಿರಿ ಕನ್ನಡ ವಾಹಿನಿಯ ವತಿಯಿಂದ ಜನವರಿ 5 – 2025ರ ಭಾನುವಾರದಂದು – ಬೆಂಗಳೂರಿನ ಶಾಲಿನಿ ಮೈದಾನದಲ್ಲಿ “ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಉತ್ಸವ”ವು 1008 ಶ್ರೀ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ಘನ ಉಪಸ್ಥಿತಿ ಮತ್ತು ಮಾರ್ಗದರ್ಶನದಲ್ಲಿ ನಡೆಯಲಿದೆ.ಈ ಉತ್ಸವದಲ್ಲಿ ರಾಯರ ದೇಗುಲ ಮತ್ತು ಬೃಂದಾವನವನ್ನು ಮರು ಸೃಷ್ಟಿಸಲಾಗುತ್ತದೆ.1008 ಶ್ರೀ ಶ್ರೀ ಸುಬುಧೇಂದ್ರ ತೀರ್ಥ ಪಾದಂಗಳವರಿಂದ ಬೃಂದಾವನಕ್ಕೆ ಪೂಜೆ ಮತ್ತು ಸೇವೆಗಳು ನಡೆಯಲಿದೆ. ಈ ಉತ್ಸವದಲ್ಲಿ 30 ಸಾವಿರಕ್ಕೂ ಹೆಚ್ಚಿನ ಭಕ್ತಾದಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ.ಈ ಕಾರ್ಯಕ್ರಮವನ್ನು ಡಾ. ಮಧುಸೂದನ್ ಮತ್ತು ಸಿ.ಆರ್ ಮುರಳಿ ಅವರ ಸಹಯೋಗದಲ್ಲಿ ಮಾಡಲಾಗುತ್ತಿದೆ.

ADVERTISEMENT

ಬೆಳಿಗ್ಗೆ 9 ರಿಂದ ರಾತ್ರಿ 9 ರವರೆಗೆ ನಿರಂತರವಾಗಿ ರಾಯರ ಭಜನೆ, ರಾಯರ ಬಗ್ಗೆ ಪ್ರವಚನ, ರಾಯರ ಭಕ್ತಿ ಗೀತೆಗಳು, ಹರಿಕಥೆ, ಪ್ರಖ್ಯಾತ ಗಾಯಕರಾದ ರಾಜೇಶ್ ಕೃಷ್ಣನ್, ಮಂಜುಳಾ ಗುರುರಾಜ್, ಅರ್ಚನಾ ಉಡುಪ ಮತ್ತು ಮುಂತಾದವರಿಂದ ಸಂಗೀತ ಕಾರ್ಯಕ್ರಮಗಳು ನಡೆಯಲಿದೆ. ಕರ್ನಾಟಕದ ಮುಖ್ಯಮಂತ್ರಿಗಳಾದ ಮಾನ್ಯ ಶ್ರೀ ಸಿದ್ಧರಾಮಯ್ಯನವರು ಸೇರಿದಂತೆ ಮಂತ್ರಿಗಳು, ಲೋಕಸಭಾ ಸದಸ್ಯರು, ಶಾಸಕರು, ಸಿನೆಮಾ ತಾರೆಯರು ಸೇರಿದಂತೆ ಗಣ್ಯಾತಿಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

1008 ಶ್ರೀ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಕನ್ನಡದ ಖ್ಯಾತ ನಟ ಡಾಲಿ ಧನಂಜಯ, ನಟಿ ಆಶಿಕಾ ರಂಗನಾಥ್ ಸೇರಿದಂತೆ ಸುಮಾರು 25 ಸಾಧಕರಿಗೆ “ಶ್ರೀ ಗುರು ರಾಘವೇಂದ್ರ” ಪ್ರಶಸ್ತಿಯನ್ನು ನೀಡಿ ವೇದಿಕೆಯಲ್ಲಿ ಸನ್ಮಾನಿಸುತ್ತಾರೆ.ಉತ್ಸವದಲ್ಲಿ ಪಾಲ್ಗೊಳ್ಳುವ ಭಕ್ತಾದಿಗಳಿಗೆ ಮಂತ್ರಾಲದಿಂದಲೇ ತಂದ ಪರಿಮಳ ಪ್ರಸಾದ ಮತ್ತು ಮಂತ್ರಾಕ್ಷತೆಯನ್ನು ವಿತರಣೆ ಮಾಡಲಾಗುವುದು.

ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮತ್ತು 1008 ಶ್ರೀ ಶ್ರೀ ಸುಬುಧೇಂದ್ರ ತೀರ್ಥರ ಜೀವನ ಚರಿತ್ರೆ ಮತ್ತು ಮಹಿಮೆಯನ್ನು ಆಕರ್ಷಕ ಗ್ಯಾಲರಿಯಲ್ಲಿ ಪ್ರದರ್ಶಿಸಲಾಗುವುದು.30*40 ಅಡಿಯ ಬೃಹತ್ ಅತ್ಯಾಕರ್ಷಕ ರಂಗೋಲಿ ಕೂಡ ಕಾರ್ಯಕ್ರಮದ ವಿಶೇಷತೆಗಳಲ್ಲೊಂದು.

ಭಕ್ತಾದಿಗಳು ತಮ್ಮ ಸಂಕಲ್ಪದೊಂದಿಗೆ 108 ಬಾರಿ “ಶ್ರೀ ಗುರು ರಾಘವೇಂದ್ರಾಯ ನಮಃ” ಎಂದು ಬರೆದು ತಂದರೆ ಬೃಂದಾವನದಲ್ಲಿಟ್ಟು ಪೂಜಿಸಲಾಗುತ್ತದೆ.ಈ ಕಾರ್ಯಕ್ರಮದ ಮುಂದುವರೆದ ಭಾಗವಾಗಿ ಫೆಬ್ರವರಿ 3 ರಿಂದ, ಸೋಮವಾರದಿಂದ ಶನಿವಾರದವರೆಗೆ ಸಂಜೆ 6.30ಕ್ಕೆ ಸಿರಿ ಕನ್ನಡ ವಾಹಿನಿಯಲ್ಲಿ “ರಾಯರಿದ್ದಾರೆ” ಎಂಬ ಹೊಚ್ಚ ಹೊಸ ಕಾರ್ಯಕ್ರಮ ಪ್ರಸಾರವಾಗಲಿದೆ.

ಪ್ರತಿದಿನ 30 ನಿಮಿಷ ಪ್ರಸಾರವಾಗುವ “ರಾಯರಿದ್ದಾರೆ” ಕಾರ್ಯಕ್ರಮದಲ್ಲಿ ಮಂತ್ರಾಲಯದ ನಿತ್ಯ ಪೂಜೆ, 1008 ಶ್ರೀ ಶ್ರೀ ಸುಬುಧೇಂದ್ರ ತೀರ್ಥರ ಆಶೀರ್ವಚನ, ರಾಯರ ಪವಾಡಗಳು, ರಾಯರ ಕೃಪೆಗೆ ಒಳಗಾದ ಭಕ್ತಾದಿಗಳ ಸಂದರ್ಶನ ಮತ್ತು ರಾಯರ ಜೀವನ ಚರಿತ್ರೆಯನ್ನು ಮರು ಸೃಷ್ಟಿಸಿ ಪ್ರಸಾರ ಮಾಡಲಾಗುವುದು.

Tags: "Sri Guru Raghavendra Utsav"1008 Pujas1008 Sri Sri Subudhendra Theertha.30 thousand devoteesActor Dolly Dhananjayaactress Ashika Ranganath on the stage by giving "Sree Guru Raghavendra" award.Bangalore on SundayDivya Sanidhya of Shri SubudhendraFrom 9 am to 9 pm continuouslyLok Sabha members.Madhusudan and CR Murali.Manjula GururajMinistersRajesh KrishnanRaya's temple and BrindavanShalini Maidan
Previous Post

ರಾಜಾಸ್ಥಾನದ ಜೈಸಲ್ಮೇರ್‌ ನಲ್ಲಿ ಸರಸ್ವತಿ ನದಿ ಮತ್ತೆ ಹುಟ್ಟಿತೇ ?

Next Post

ಹೊಸ ವರ್ಷದ ನೆಪದಲ್ಲಿ ಹೋಂ ಮಿನಿಸ್ಟರ್‌ ಮೀಟ್‌ ಮಾಡಿದ್ಯಾಕೆ ವಿಜಯೇಂದ್ರ..?

Related Posts

ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ
Top Story

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

by ಪ್ರತಿಧ್ವನಿ
April 24, 2026
0

ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದ ಗೃಹಪ್ರವೇಶ ಕಾರ್ಯಕ್ರಮದ ವೇಳೆ ದಾರುಣ ಘಟನೆ ಸಂಭವಿಸಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಶಾಸಕ ಲಕ್ಷ್ಮಣ...

Read moreDetails
ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

April 24, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
Next Post
ಹೊಸ ವರ್ಷದ ನೆಪದಲ್ಲಿ ಹೋಂ ಮಿನಿಸ್ಟರ್‌ ಮೀಟ್‌ ಮಾಡಿದ್ಯಾಕೆ ವಿಜಯೇಂದ್ರ..?

ಹೊಸ ವರ್ಷದ ನೆಪದಲ್ಲಿ ಹೋಂ ಮಿನಿಸ್ಟರ್‌ ಮೀಟ್‌ ಮಾಡಿದ್ಯಾಕೆ ವಿಜಯೇಂದ್ರ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada