• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಕಿಲಾರಿ ಬೊಮ್ಮಯ್ಯ,ರಾಜಶೇಖರ ತಳವಾರ,ಡಾ.ಎಸ್.ರತ್ನಮ್ಮ ಸೇರಿ ಐವರು ಸಾಧಕರಿಗೆ ಶ್ರೀಮಹರ್ಷಿ ವಾಲ್ಮೀಕಿ ಪ್ರಶಸ್ತಿ

ಪ್ರತಿಧ್ವನಿ by ಪ್ರತಿಧ್ವನಿ
October 17, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು:2024 ನೇ ಸಾಲಿಗೆ ಶ್ರೀ ಮಹರ್ಷಿ ವಾಲ್ಮೀಕಿ ಅವರ ಸ್ಮರಣಾರ್ಥ ಪರಿಶಿಷ್ಟ ವರ್ಗದ ಏಳ್ಗೆಗರ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗುರುತರ ಸೇವೆಗೈದ ಐವರು ಸಾಧಕರಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಪ್ರಕಟಿಸಿದ್ದಾರೆ.

ಬೆಂಗಳೂರು ವಿಭಾಗ: ಶ್ರೀ ಕಿಲಾರಿ ಜೋಗಯ್ಯ ಬಿನ್ ಕಿಲಾರಿ ಬೋರಯ್ಯ: ಗಡ್ಡದಾರಹಟ್ಟಿ, ಚಳ್ಳಕೆರೆ ತಾಲ್ಲೂಕು ಚಿತ್ರದುರ್ಗ ಜಿಲ್ಲೆಯವರಾದ ಇವರು ಕಿಲಾರಿ ( ಜಾನುವಾರುಗಳ ಸಂರಕ್ಷಣೆ) ವೃತ್ತಿಯ ಮೂಲಕ ಸಮಾಜದ ಒಳಿತಿಗಾಗಿ ಸಲ್ಲಿಸಿದ್ದಾರೆ. ದೇವರ ಎತ್ತುಗಳ ರಕ್ಷಣೆ, ಜಾನುವಾರುಗಳ ಪೋಷಣೆ, ಸ್ಥಳೀಯ ಬುಡಕಟ್ಟು ಸಮುದಾಯದ ಸಂಸ್ಕೃತಿಯ ಸಂರಕ್ಷಣೆ, ಜಾನುವಾರುಗಳ ಮಹತ್ವ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ, ಬುಡಕಟ್ಟು ಸಂಸ್ಕೃತಿಯ ಆಚರಣೆಯ ಮೂಲಕ ಜಾನುವಾರುಗಳ ಸಂತತಿಯ ಸಂರಕ್ಷಣೆ ಮಾಡುತ್ತಿದ್ದಾರೆ. ಸ್ಥಳೀಯ ಗ್ರಾಮೀಣ ಸೊಗಡ ಉಳಿಸಿ ಬೆಳೆಸಲು ಶ್ರಮಿಸುತ್ತಿದ್ದಾರೆ. ಇವರ ಅನುಪಮ ಸಮಾಜ ಸೇವೆಯನ್ನು ಗುರುತಿಸಿ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಮೈಸೂರು ವಿಭಾಗ: ಡಾ. ರತ್ನಮ್ಮ ಎಸ್.‌ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಮದ್ದೂರು ಹೋಬಳಿಯ ಮದ್ದೂರು ಕಾಲೋನಿಯವರಾದ ಡಾ. ರತ್ನಮ್ಮ ಎಸ್.‌ ಅವರು ಬುಡಕಟ್ಟು ಮಕ್ಕಳ ಶಿಕ್ಷಣಕ್ಕಾಗಿ ಹೋರಾಟ ಮಾಡಿದ್ದಾರೆ. ಬುಡಕಟ್ಟು ಸಮುದಾಯಗಳಿರುವ ಪ್ರದೇಶಗಳಿಗೆ ಭೇಟಿ ನೀಡಿ, ಸಮುದಾಯದ ಮನವೊಲಿಸಿ ಮಕ್ಕಳಿಗೆ ಶಾಲಾ ಕಾಲೇಜುಗಳಿಗೆ ದಾಖಲಿಸುವುದು, ಸಮುದಾಯದ ಶಿಕ್ಷಣಕ್ಕೆ ಪೂರಕವಾದ ಕಾರ್ಯಕ್ರಮಗಳನ್ನು ಆಯೋಜಿಸುವುದು, ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸುವುದು. ಸಮುದಾಯದವರಿಗೆ ಆರೋಗ್ಯ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವುದು, ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸುವುದು. ಸಮುದಾಯದ ಕಲೆ, ಕುಲ ಕಸುಬು, ಸಂಸ್ಕೃತಿಯ ಸಂರಕ್ಷಿಸುವುದು ಹಾಗೂ ಪೋಷಿಸುವ ನಿಟ್ಟಿನಲ್ಲಿ ಶ್ರಮಿಸಿದ್ದಾರೆ. ಇವರ ಅನುಪಮ ಸೇವೆಯನ್ನು ಗುರುತಿಸಿ, ಇವರಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಬೆಳಗಾವಿ ವಿಭಾಗ: ಶ್ರೀ ರಾಜಶೇಖರ ತಳವಾರ:ಬೆಳಗಾವಿಯ ಗಾಂಧಿನಗರದವರಾದ ಇವರು ಗುಡ್ಡಗಾಡು ಪ್ರದೇಶಗಳಲ್ಲಿರುವ ಬುಡಕಟ್ಟು ಸಮುದಾಯದ ಜನರಿಗೆ ಶಿಕ್ಷಣ, ಆರೋಗ್ಯ, ನೈರ್ಮಲ್ಯ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ. ಬುಡಕಟ್ಟು ಸಮುದಾಯವು ವಾಸಿಸುವ ಮೂಲಭೂತ ಸೌಕರ್ಯಗಳಿಲ್ಲದ ಗುಡ್ಡಗಾಡು ಪ್ರದೇಶಗಳ ಬಗ್ಗೆ ವಿವಿಧ ಇಲಾಖೆಗಳ ಗಮನಕ್ಕೆ ತಂದು ಆ ಪ್ರದೇಶಗಳಿಗೆ ಮೂಲಭೂತ ಸೌಕರ್ಯ ದೊರಕುವಂತೆ ಹಾಗೂ ಬುಡಕಟ್ಟು ಸಮುದಾಯವನ್ನು ಮುಖ್ಯವಾಹಿನಿಗೆ ತರಲು ಶ್ರಮಿಸಿದ್ದಾರೆ. ಶಿಕ್ಷಣ ಕುರಿತು ಜಾಗೃತಿ ಮೂಡಿಸುವುದು, ಶಿಕ್ಷಣಕ್ಕೆ ಸಂಬಂಧಿಸಿದ ಸಮ್ಮೇಳನಗಳು, ಶಿಬಿರ, ತರಬೇತಿಗಳನ್ನು ಆಯೋಜಿಸುವುದು.ಸಮುದಾಯದ ವಿದ್ಯಾರ್ಥಿಗಳ ಶಿಕ್ಷಣ ಮುಂದುರೆಯಲು ಸರ್ಕಾರದ ನೆರವು ದೊರಕಿಸುವುದು, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ. ಸಮಾಜದ ಒಳಿತಿಗಾಗಿ ಸಲ್ಲಿಸಿರುವ ಸಮಾಜ ಸೇವೆಯನ್ನು ಗುರುತಿಸಿ ಇವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಬೆಂಗಳೂರು ಕೇಂದ್ರ : ಶ್ರೀ ಕೆ. ಎಸ್.‌ ಮೃತ್ಯುಂಜಯ, ಬೆಂಗಳೂರು ವಾಸಿಯಾದ ಶ್ರೀ ಕೆ.ಎಸ್.‌ ಮೃತ್ಯುಂಜಯ ಅವರು ಪರಿಶಿಷ್ಟ ಪಂಗಡದ ಸಮುದಾಯದ ಶೈಕ್ಷಣಿಕ, ಆರ್ಥಿಕ ಆಭಿವೃ‍ದ್ಧಿ ಹಾಗೂ ಕೌಶಲ್ಯ ತರಬೇತಿ ಕಾರ್ಯಕ್ರಮಗಳ ಕುರಿತು ಜಾಗೃತಿ ಮೂಡಿಸುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ಸಮುದಾಯದವರಿಗೆ ದೊರಕಿಸಲು ಶ್ರಮಿಸಿದ್ದಾರೆ. ಸಮುದಾಯವನ್ನು ಸಂಘಟಿಸುವ ನಿಟ್ಟಿನಲ್ಲಿ ಶ್ರಮಿಸಿದ್ದಾರೆ.ಬುಡಕಟ್ಟು ಸಮುದಾಯಗಳ ಅಭಿವೃ‍ದ್ಧಿಗೆ ಪೂರಕ ಚಟುವಟಿಕೆಗಳನ್ನು ಕೈಗೊಂಡಿದ್ದಾರೆ.ಸಮುದಾಯದ ಅಭಿವೃದ್ದಿಗೆ ಪೂರಕವಾಗಿ ಕಾರ್ಯಾಗಾರ, ಶಿಭಿರ, ಚಿಂತನ-ಮಂಥನ ಕಾರ್ಯಕ್ರಮಗಳಲ್ಲಿ ಸಕ್ರೀಯವಾಗಿ ಪ್ರತಿನಿಧಿಸುತ್ತಾರೆ. ಇವರ ಅನುಪಮ ಸೇವೆಯನ್ನು ಗುರುತಿಸಿ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಕಲಬುರ್ಗಿ ವಿಭಾಗ: ಶ್ರೀಮತಿ ರತ್ನಮ್ಮ ಬಿ. ಸೋಗಿ:ವಿಜಯನಗರ ಜಿಲ್ಲೆ ಹರಪನಹಳ್ಳಿಯವರಾದ ಇವರು ವೃತ್ತಿ ರಂಗಭೂಮಿ ಖ್ಯಾತ ಕಲಾವಿದರಾಗಿದ್ದು, ಅದರಲ್ಲೂ ಗ್ರಾಮೀಣ ಪ್ರದೇಶದಲ್ಲಿ ರಂಗಭೂಮಿ ಕ್ಷೇತ್ರದಲ್ಲಿ ಹೆಸರಾಂತ ಕಲಾವಿದರಾಗಿದ್ದಾರೆ. ಐತಿಹಾಸಿಕ, ಪೌರಾಣಿಕ, ಮತ್ತು ಸಾಮಾಜಿಕ ನಾಟಕಗಳಲ್ಲಿ ಅಭಿನಯಿಸುವ ಮೂಲಕ ಗ್ರಾಮೀಣ ಪ್ರದೇಶದಲ್ಲಿ ರಂಗ ಭೂಮಿ ಕ್ಷೇತ್ರದ ಉಳಿವು ಹಾಗೂ ಬೆಳವಣಿಗಾಗಿ ಅಪಾರವಾಗಿ ಶ್ರಮಿಸಿದ್ದಾರೆ.ಅನೇಕ ನಾಟಕಗಳಲ್ಲಿ ಅಭಿನಯಿಸುವ ಮೂಲಕ ಸಮಾಜದ ಒಳಿತಿಗಾಗಿ ಹಾಗೂ ಅನೇಕ ಸಾಮಾಜಿಕ ಪಿಡುಗುಗಳ ನಿವಾರಣೆಗಾಗಿ ತಮ್ಮ ಅಭಿನಯದ ಮೂಲಕ ಜಾಗೃತಿ ಮೂಡಿಸಿದಾರೆ.ಇವರು ಕನ್ನಡ ರಂಗಭೂಮಿಗೆ ಸಲ್ಲಿಸಿದ ಗಣನೀಯ ಕಲಾ ಸೇವೆಯನ್ನು ಗುರುತಿಸಿ ಇವರನ್ನು ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಬೆಂಗಳೂರು , ಮೈಸೂರು, ಬೆಳಗಾವಿ, ಕಲಬುರಗಿ ಕಂದಾಯ ವಿಭಾಗಗಳು ಹಾಗೂ ಬೆಂಗಳೂರು ಕೇಂದ್ರ ಸ್ಥಾನದಿಂದ ತಲಾ ಒಬ್ಬರಂತೆ ಒಟ್ಟು ಐದು ಸಾಧಕರಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು.ಈ ಸಾಧಕರಿಗೆ ತಲಾ 20 ಗ್ರಾಮ ಬಂಗಾರದ ಪದಕ ಹಾಗೂ ಐದು ಲಕ್ಷ ರೂ. ನಗದು ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

2024ನೇ ಸಾಲಿಗೆ ಶ್ರೀ ಮಹರ್ಷಿ ವಾಲ್ಮೀಕಿ ಇವರ ಸ್ಮರಣಾರ್ಥ ನೀಡುವ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧಕರನ್ನು ಆಯ್ಕೆ ಮಾಡಲು ಶ್ರೀ ಕೆ. ಹೆಚ್.‌ಮ್ಲಲೇಶಪ್ಪ, ನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನೇತೃತ್ವದಲ್ಲಿ ಆಯ್ಕೆ ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿಯು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಐವರು ಗಣ್ಯರನ್ನು ಗುರುತಿಸಿ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲು ಸರ್ಕಾರಕ್ಕೆ ಶಿಫಾರಸು ಮಾಡಿತ್ತು.

ADVERTISEMENT
Tags: BangaloreBelgaumDr.S.Ratnammafive achievers including Kilari BommaiahKalaburagi.Kilari BommaiahMysoreRajasekhara TalwarSri Maharshi ValmikiSri Maharshi Valmiki Award
Previous Post

ನವೆಂಬರ್ 7 ರಂದು ಕನ್ನಡದಲ್ಲಿ ತೆರೆಗೆ ಬರಲಿದೆ “ಜೈ ಕಿಸಾನ್”

Next Post

ಬ್ರಹ್ಮ ಕುಂಡಿಕೆಯಿಂದ ಉಕ್ಕಿ ಬಂದ ಕಾವೇರಿ ! ತಲಕಾವೇರಿಯಲ್ಲಿ ವಿಶೇಷ ಪೂಜೆ !

Related Posts

ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ
ಕರ್ನಾಟಕ

ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

by ಪ್ರತಿಧ್ವನಿ
November 19, 2025
0

ಬೆಂಗಳೂರು: ಹಿಂದುಳಿದವರು, ದಲಿತರು ತಮ್ಮ ವಿರೋಧಿಗಳಾದ BJP, RSS, ABVP ಸೇರುವುದರ ಬಗ್ಗೆ ಸಿಎಂ ಸಿದ್ದರಾಮಯ್ಯ ಬೇಸರ ಹೊರಹಾಕಿದ್ದಾರೆ. https://youtu.be/XV0tDgR1ev4?si=ItAyW_tehh9CMyZY ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ...

Read moreDetails
ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

November 19, 2025
ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

November 19, 2025
ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

November 19, 2025
Next Post
ಬ್ರಹ್ಮ ಕುಂಡಿಕೆಯಿಂದ ಉಕ್ಕಿ ಬಂದ ಕಾವೇರಿ ! ತಲಕಾವೇರಿಯಲ್ಲಿ ವಿಶೇಷ ಪೂಜೆ !

ಬ್ರಹ್ಮ ಕುಂಡಿಕೆಯಿಂದ ಉಕ್ಕಿ ಬಂದ ಕಾವೇರಿ ! ತಲಕಾವೇರಿಯಲ್ಲಿ ವಿಶೇಷ ಪೂಜೆ !

Recent News

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR
Top Story

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

by ಪ್ರತಿಧ್ವನಿ
November 19, 2025
ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ
Top Story

ಹೊಗೆ ತಂದ ಆಪತ್ತು: ಬೆಳಗಾವಿಯಲ್ಲಿ ಮೂವರು ಯುವಕರ ದುರಂತ ಅಂತ್ಯ

by ಪ್ರತಿಧ್ವನಿ
November 19, 2025
ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು
Top Story

ಬೆಂಗಳೂರಲ್ಲಿ ಹಾಡಹಗಲೇ ದರೋಡೆ: ಕೋಟಿ ಕೋಟಿ ದೋಚಿದ ಖದೀಮರು

by ಪ್ರತಿಧ್ವನಿ
November 19, 2025
ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು
Top Story

ಜನಿವಾರ ತೆಗೆಯುವಂತೆ ವಿದ್ಯಾರ್ಥಿಗಳಿಗೆ ಕಿರುಕುಳ: ಅತಿಥಿ ಶಿಕ್ಷಕ ಅಮಾನತು

by ಪ್ರತಿಧ್ವನಿ
November 19, 2025
ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌
Top Story

ಮತ್ತೆ ʼಭರ್ಜರಿʼ ಕಾಂಬಿನೇಷನ್‌: ಧ್ರುವ ಹೊಸ ಚಿತ್ರಕ್ಕೆ ನಾಯಕಿಯಾದ ಡಿಂಪಲ್‌ ಕ್ವೀನ್‌

by ಪ್ರತಿಧ್ವನಿ
November 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

ಹಿಂದುಳಿದವರು, ದಲಿತರ BJP, RSS, ABVP ಒಲವು: ಸಿಎಂ ಸಿದ್ದರಾಮಯ್ಯ ಬೇಸರ

November 19, 2025
ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

ಕಾಮಿಡಿ ಕಿಲಾಡಿಗಳು ಖ್ಯಾತಿಯ ನಯನಾ ವಿರುದ್ಧ FIR

November 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada