ಬಡವರ ಪರವಾಗಿ ನಿಂತು ಜಗಳವಾಡಿ 14-15 ಬಾರಿ ಜೈಲಿಗೆ ಹೋಗಿದ್ದೇನೆ
ಬಳ್ಳಾರಿ: ನಾನು ಮೊದಲು ಗಂಡಾಗಿರಿ ಮಾಡುತ್ತಿದ್ದೆ, ಬಹಳ ಜಗಳ ಮಾಡುತ್ತಿದ್ದೆ, ಬಡವರಿಗೆ ತೊಂದರೆ ಮಾಡಿದಾಗ ಮಾತ್ರ ಗುಂಡಾಗಿರಿ ಮಾಡುತ್ತಾ ಅವರ ಪರವಾಗಿ ನಿಲ್ಲುತ್ತಿದ್ದೆ. ಬಡವರ ಪರವಾಗಿ ನಿಂತು ಜಗಳವಾಡಿ 14-15 ಬಾರಿ ಜೈಲಿಗೆ ಹೋಗಿದ್ದೇನೆ ಎಂದು ಸಚಿವ ಬಿ. ಶ್ರೀರಾಮುಲು ಬಳ್ಳಾರಿಯಲ್ಲಿ ಹಳೆಯ ನೆನಪುಗಳನ್ನು ಮೆಲುಕು ಹಾಕಿದರು.
ನಗರದ ಎಸ್‌ಜಿ ಕಾಲೇಜ್ ಅಮೃತ ಮಹೋತ್ಸವ ಮತ್ತು ದಾನಿಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿ ಆಗಿದ್ದಾಗ ನಾನು ಕಾಪಿ ಹೊಡೆದು ಪಾಸಾಗಿದ್ದೇನೆ. ಕಾಪಿ ಹೊಡೆಯುವುದರಲ್ಲಿ ನಾನು ಪಿಹೆಚ್‌ಡಿ ಮಾಡಿದ್ದೇನೆ. ನಾನು ಗೂಂಡಾಗಿರಿಯನ್ನೂ ಮಾಡುತ್ತಿದ್ದೆ. ಬಹಳ ಜಗಳವಾಡುತ್ತಿದ್ದೆ. ನನಗೆ ಓದು ತಲೆಗೆ ಹತ್ತಲಿಲ್ಲ, ಆದರೆ ಸಂಸ್ಕಾರ ಮಾತ್ರ ಬಿಡಲಿಲ್ಲ.
ನಾನು ಬಾರಿ ಬುದ್ಧಿವಂತನಲ್ಲ, ಲಾಸ್ಟ್ ಬೆಂಚ್ ಸ್ಟೂಡೆಂಟ್ ಆಗಿದ್ದೆ. ಶಿಕ್ಷಕರು ಪ್ರೀತಿಯಿಂದ ಬೈಯ್ಯುತ್ತಿದ್ದರು. 5 ಬಾರಿ ಶಾಸಕ, 4 ಬಾರಿ ಸಚಿವನಾಗಿರುವುದಕ್ಕೆ ವಿವಿ ಸಂಘ ಕಾರಣವಾಗಿದೆ ಎಂದರು.
ನಾನು ಪರೀಕ್ಷೆಯಲ್ಲಿ ಕಾಪಿ ಹೊಡೆದು ಪಾಸಾಗಿದ್ದೇನೆ, ಕಾಪಿ ಹೊಡೆಯುವುದಲ್ಲಿ ಪಿಹೆಚ್‌ಡಿ ಮಾಡಿದ್ದೇನೆ ಎಂದು ಮನಬಿಚ್ಚಿ ಮಾತನಾಡಿದ ಶ್ರೀರಾಮುಲು ತಮ್ಮ ಶಿಕ್ಷಕರನ್ನು ಸ್ಮರಿಸಿದರು.