• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮುಂದೂಡಿಕೆ:  ಕಾರಣವೇನು?

ಪ್ರತಿಧ್ವನಿ by ಪ್ರತಿಧ್ವನಿ
March 26, 2026
in Top Story
0
ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮುಂದೂಡಿಕೆ:  ಕಾರಣವೇನು?
Share on WhatsAppShare on FacebookShare on Telegram

ಕರ್ನಾಟಕ ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ವೇಳಾಪಟ್ಟಿಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು, ಮಾ.30ರಂದು ನಡೆಯಬೇಕಿದ್ದ ಹಿಂದಿ (ತೃತೀಯ ಭಾಷೆ) ಪರೀಕ್ಷೆಯನ್ನು ಮಾ.31ಕ್ಕೆ ಮುಂದೂಡಲಾಗಿದೆ. ಮಹಾವೀರ ಜಯಂತಿ ಪ್ರಯುಕ್ತ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕರ್ನಾಟಕ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ.

ADVERTISEMENT

ಮಂಡಳಿಯ ಮಾಹಿತಿ ಪ್ರಕಾರ, 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ನಡೆಯಲಿವೆ ಎಂದು ಈಗಾಗಲೇ ವೇಳಾಪಟ್ಟಿ ಪ್ರಕಟಿಸಲಾಗಿತ್ತು. ಅದರಂತೆ ಮಾ.30ರಂದು ತೃತೀಯ ಭಾಷೆ ಪರೀಕ್ಷೆ ನಿಗದಿಯಾಗಿತ್ತು. ಆದರೆ ಸರ್ಕಾರ ಮಹಾವೀರ ಜಯಂತಿಯ ಸಾರ್ವತ್ರಿಕ ರಜೆಯನ್ನು ಮಾ.31ರಿಂದ ಮಾ.30ಕ್ಕೆ ಬದಲಾಯಿಸಿದ ಹಿನ್ನೆಲೆ, ಆ ದಿನದ ಪರೀಕ್ಷೆಯನ್ನು ಮರುನಿಗದಿ ಮಾಡಿ ಮಾ.31ರಂದು ನಡೆಸಲು ತೀರ್ಮಾನಿಸಲಾಗಿದೆ. ಉಳಿದ ಎಲ್ಲಾ ಪರೀಕ್ಷೆಗಳು ಪೂರ್ವನಿಗದಿತ ವೇಳಾಪಟ್ಟಿಯಂತೆ ಮುಂದುವರಿಯಲಿವೆ.

CM Siddaramaiah In Assembly Session |ಕೇಂದ್ರ ಸರ್ಕಾರ ಏನೂ ಕೊಟ್ಟಿಲ್ಲ ಅಂತ ಸಿಎಂ ಕ್ಲಾಸ್ #pratidhvani

ರಾಜ್ಯದಲ್ಲಿ ಒಟ್ಟು 2871 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯುತ್ತಿದ್ದು, ಸುಮಾರು 9 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಇತ್ತೀಚಿನ ವರದಿ ಪ್ರಕಾರ 8.16 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10ರಿಂದ ಮಧ್ಯಾಹ್ನ 1:15ರವರೆಗೆ ನಡೆಯುತ್ತಿವೆ.

ಪರೀಕ್ಷಾ ಅವಧಿಯಲ್ಲಿ ಎಲ್ಲಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದ್ದು, ಭದ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ.

Tags: Hindi examMarch 30march 31pratidavaniSSLCSSLC exam postponed
Previous Post

ಎರಡು ಕ್ಷೇತ್ರಗಳಲ್ಲೂ ಕೈ ಅಭ್ಯರ್ಥಿಗಳಿಗೆ ಜಯ : ಸಚಿವೆ ಹೆಬ್ಬಾಳ್ಕರ್ ಕೊಟ್ಟ ಕಾರಣವೇನು..?

Next Post

ನನ್ನ ತೀರ್ಮಾನ ಒಳ್ಳೆಯದು ಅಂತ ನೀವೇ ಹೇಳ್ತೀರಿ : ಡಿಸಿಎಂ ಬಿಚ್ಚಿಟ್ರು ಕನಸಿನ ಬೆಂಗಳೂರು ಪರಿಕಲ್ಷನೆ..

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post
ನನ್ನ ತೀರ್ಮಾನ ಒಳ್ಳೆಯದು ಅಂತ ನೀವೇ ಹೇಳ್ತೀರಿ : ಡಿಸಿಎಂ ಬಿಚ್ಚಿಟ್ರು ಕನಸಿನ ಬೆಂಗಳೂರು ಪರಿಕಲ್ಷನೆ..

ನನ್ನ ತೀರ್ಮಾನ ಒಳ್ಳೆಯದು ಅಂತ ನೀವೇ ಹೇಳ್ತೀರಿ : ಡಿಸಿಎಂ ಬಿಚ್ಚಿಟ್ರು ಕನಸಿನ ಬೆಂಗಳೂರು ಪರಿಕಲ್ಷನೆ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!