ರಾಜ್ಯದಲ್ಲಿ ಸರ್ಕಾರಿ ನೌಕರಿ ಪಡೆಯಲು SSLC ಕಡ್ಡಾಯ ಮಾಡಲಾಗಿದೆ ಎಂದು ಅಧಿಸೂಚನೆ ಹೊರಡಿಸಿದೆ.
ಹೌದು, ರಾಜ್ಯ ಸರ್ಕಾರವು ಜವಾನ, ದಲಾಯತ್ ಸೇರಿ ಯಾವುದೇ ಗ್ರೂಪ್ ಡಿ ಹುದ್ದೆಗಳ ನೇಮಕಾತಿಗೆ ಇನ್ನು ಮುಂದೆ SSLC ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದ್ದು, ಈ ಸಂಬಂಧ ಕರ್ನಾಟಕ ಸಿವಿಲ್ ಸೇವೆಗಳ ಕಾಯಿದೆ-1978ರಲ್ಲಿ ತಿದ್ದುಪಡಿಯೊಂದಿಗೆ ಜು.1 ರಂದು ರಾಜ್ಯ ಪತ್ರದಲ್ಲಿ ಅಧಿಸೂಚನೆ ಹೊರಡಿಸಿದೆ.
ಗ್ರೂಪ್ ಡಿ ಸೇವೆ ಮತ್ತು ಮೇಲ್ಪಟ್ಟ ರಾಜ್ಯ ಸಿವಿಲ್ ಸೇವೆಗಳ ನೇಮಕಾತಿಗೆ SSLC ಗಿಂತ ಕಡಿಮೆ ಶೈಕ್ಷಣಿಕ ಅರ್ಹತೆಯನ್ನು ಪರಿಗಣಿಸುವಂತಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.

ರಾಜ್ಯ ಸಿವಿಲ್ ಸೇವೆಗಳಲ್ಲಿ ಗ್ರೂಪ್ ಸಿ ಹುದ್ದೆಗಳ ನೇರ ನೇಮಕದ ಸಂದರ್ಶನವನ್ನೂ ರದ್ದುಪಡಿಸಲಾಗಿದ್ದು, ನೇಮಕಾತಿ ಕಾಯಂ ಅಥವಾ ಬಡ್ತಿಗೆ ಮಾನದಂಡವಾಗಿ ಐದು ವರ್ಷ ಪ್ರೊಬೆಷನರಿ ಅವಧಿಯನ್ನು ಪರಿಗಣಿಸುವ ನಿಯಮಾವಳಿಯಲ್ಲೂ ಬದಲಾವಣೆ ತರಲಾಗಿದೆ.