2023-24 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟ ಮಾಡಿದೆ. ಫೆಬ್ರವರಿ 26 ರಿಂದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ಆರಂಭ ಆಗಲಿವೆ.

ಫೆಬ್ರವರಿ 26 ರಂದು ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ ಪರೀಕ್ಷೆಗಳು ನಡೆಯಲಿವೆ. ಫೆಬ್ರವರಿ 27ಕ್ಕೆ ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ, ಫೆಬ್ರವರಿ 28ಕ್ಕೆ ತೃತೀಯ ಭಾಷೆ ಹಿಂದಿ (NCERT), ಹಿಂದಿ, ಕನ್ನಡ, ಇಂಗ್ಲಿಷ್, ತುಳು, ಕೊಂಕಣಿ, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ ಪರೀಕ್ಷೆಗಳು ನಡೆಯಲಿದೆ.

ಫೆಬ್ರವರಿ 29ಕ್ಕೆ ಗಣಿತ, ಮಾರ್ಚ್ 01ರಂದು ವಿಜ್ಞಾನ, ಮಾರ್ಚ್ 02 ಸಮಾಜವಿಜ್ಞಾನ ಪರೀಕ್ಷೆಗಳು ನಡೆಯಲಿದ್ದು, ಪಬ್ಲಿಕ್ ಪರೀಕ್ಷೆ ರೀತಿಯಲ್ಲೇ ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ಶಿಕ್ಷಣ ನಿರ್ಣಯ ಮಂಡಳಿ ನಿರ್ಧಾರ ಮಾಡಿದೆ. ಮುಖ್ಯ ಪರೀಕ್ಷೆಯಲ್ಲಿ ಪರೀಕ್ಷೆ ಎದುರಿಸಲು ಬೇಕಿರುವ ಆತ್ಮಸ್ಥೈರ್ಯ ತುಂಬಲು ಪೂರ್ವ ಸಿದ್ಧತಾ ಪರೀಕ್ಷೆಯನ್ನು ಕಟ್ಟು ನಿಟ್ಟಾಗಿ ಮಾಡಲಾಗುತ್ತದೆ.
