ಕರೋನ ಎರಡನೇ ಅಲೆ ಆತಂಕದಲ್ಲೂ ಹಿಂದಿನ ಶಿಕ್ಷಣ ಸಚಿವ ಸುರೇಶ್ ಕುಮಾರ್ ರಾಜ್ಯದ ಇತಿಹಾಸದಲ್ಲಿಯೇ ವಿನೂತನವಾಗಿ ಎಸ್ಎಸ್ಎಲ್‌ಸಿ ಪರೀಕ್ಷೆಯ ನಡೆಸಿದ್ದರು, ಈಗ ಅದರ ಫಲಿತಾಂಶ ಇಂದು ಪ್ರಕಟವಾಗಿದೆ. ಕಳೆದ ಮೂರು ವಾರಗಳ ಹಿಂದೆ ನಡೆದ ಸರಳ ಮಾದರಿಯ ಪರೀಕ್ಷೆ ಫಲಿತಾಂಶವನ್ನು ಇಂದು ನೂತನ ಶಿಕ್ಷಣ ಸಚಿವರಾಗಿರುವ ಬಿಸಿ ನಾಗೇಶ್ ಪ್ರಕಟಿಸಿದರು. ಒಬ್ಬ ವಿದ್ಯಾರ್ಥಿ ಹೊರತು ಪಡಿಸಿ ಎಲ್ಲರನ್ನು ಪಾಸ್ ಮಾಡಲಾಗಿದೆ. ಶೇ. 99.9 ಪಾಸ್ ಆಗಿದ್ದಾರೆ.
A+ ಗ್ರೇಡ್ನಲ್ಲಿ 1, 28, 931 ವಿದ್ಯಾರ್ಥಿಗಳು ಪಾಸಾಗಿದ್ದರೆ, A ಗ್ರೇಡ್ನಲ್ಲಿ 2,50,317 ಲಕ್ಷ ಪಾಸಾಗಿದ್ದಾರೆ. B ಅಲ್ಲಿ 2,87,684 ಲಕ್ಷ ವಿದ್ಯಾರ್ಥಿಗಳು, C ಗ್ರೇಡ್ನಲ್ಲಿ 1,13,610 ಲಕ್ಷ ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಇದರಲ್ಲಿ ಶೇ.9ರಷ್ಟು ವಿದ್ಯಾರ್ಥಿಗಳು ಕೃಪಾಂಕ ಪಡೆದು ಪಾಸ್ ಆಗಿದ್ದಾರೆ, 13 ವಿದ್ಯಾರ್ಥಿಗಳಿಗೆ ವಿಷಯವೊಂದಕ್ಕೆ ಗರಿಷ್ಟ 28 ಕೃಪಾಂಕ ನೀಡಿ ಪಾಸ್ ಮಾಡಲಾಗಿದೆ ಎಂದು ತಿಳಿಸಿದರು.
157 ಮಕ್ಕಳು 625 ಕ್ಕೆ 625 ಅಂಕ ಪಡೆದಿದ್ದಾರೆ, 289 ವಿದ್ಯಾರ್ಥಿಗಳು 625ಕ್ಕೆ 623 ಅಂಕ ಪಡೆದಿದ್ದರೆ, ಇಬ್ಬರಿಗೆ 622 ಅಂಕ ಸಿಕ್ಕಿದೆ. 621 ಅಂಕ 449 ವಿದ್ಯಾರ್ಥಿಗಳು ಅಂಕ ಪಡೆದಿದ್ದಾರೆ. 28 ವಿದ್ಯಾರ್ಥಿಗಳು 620 ಅಂಕ ಪಡೆದಿದ್ದಾರೆ
ಪ್ರಥಮ ಭಾಷೆ ಕನ್ನಡದಲ್ಲಿ 25,702 ಮಕ್ಕಳು 125ಕ್ಕೆ 125ಕ್ಕೆ ಅಂಕ ಪಡೆದಿದ್ದಾರೆ.
ದ್ವಿತೀಯ 36,628 ವಿದ್ಯಾರ್ಥಿಗಳು, ತೃತೀಯ ಭಾಷೆ 36,776, ಗಣಿತ 6,321, ವಿಜ್ಞಾನ 3,649, ಸಮಾಜ ವಿಜ್ಞಾನ 9,367 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಪಡೆದಿದ್ದಾರೆ.

ಪರೀಕ್ಷೆ ಕೊಟ್ಟಡಿಗೆ ಪರೀಕ್ಷಾ ವಿದ್ಯಾರ್ಥಿಯ ಬದಲಾಗಿ ಬೇರೊಬ್ಬ ಬಂದು ಪರೀಕ್ಷೆ ಬರೆದಿರುವ ಕಾರಣ ಆ ಒರ್ವ ವಿದ್ಯಾರ್ಥಿಯನ್ನು ಅನುತ್ತೀರ್ಣ ಮಾಡಲಾಗಿದೆ ಎಂದು ಬಿ.ಸಿ ನಾಗೇಶ್ ತಿಳಿಸಿದ್ದಾರೆ.
ಇಂದು ಸಂಜೆ ಫಲಿತಾಂಶದ ಪೂರ್ತಿ ವಿವರ ಹೊರಬೀಳಲಿದೆ ಎಂದು ಶಿಕ್ಷಣ ಸಚಿವ ನಾಗೇಶ್ ಹೇಳಿದ್ದಾರೆ.
ಫಲಿತಾಂಶವನ್ನು ನೀವು kseeb.kar.nic.in ಅಥವಾ karresults.nic.in ವೆಬ್ಸೈಟ್ನಲ್ಲಿ ವೀಕ್ಷಿಸಬಹುದು. ಇದಷ್ಟೇ ಅಲ್ಲದೆ, examresults.net ಮತ್ತು indiaresults.com ವೆಬ್ಸೈಟ್ನಲ್ಲಿ ಕೂಡ ರಿಸಲ್ಟ್ ನೋಡಬಹುದು.





