SSLC ಫಲಿತಾಂಶ ಮೌಲ್ಯಮಾಪನ ಪ್ರಕ್ರಿಯೆ ಮುಗಿದಿದ್ದು, ವಿದ್ಯಾರ್ಥಿಗಳ ಅಂಕಗಳನ್ನು ಕ್ರೋಢೀಕರಣ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಮೇ. 20 ರೊಳಗೆ SSLC ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ.
SSLC ಉತ್ತರ ಪತ್ರಿಕೆ ಮೌಲ್ಯಮಾಪನದಲ್ಲಿ ಪಾಲ್ಗೊಳ್ಳದೇ ಫಲಿತಾಂಶ ಪ್ರಕಟ ವಿಳಂಬಕ್ಕೆ ಕಾರಣವಾದ ಶಿಕ್ಷಕರ ವಿರುದ್ಧ ಶಿಸ್ತುಕ್ರಮ ಜರುಗಿಸುವಂತೆ ಪ್ರೌಢ ಶಿಕ್ಷಣ ಮಂಡಳಿ ಸೂಚನೆ ನೀಡಿದೆ.
ಅಂದುಕೊಂಡಂತೆ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡಿದ್ದರೆ ಮೇ 12 ರೊಳಗೆ ಫಲಿತಾಂಶ ಹೊರ ಬೀಳುತ್ತಿತ್ತು. ಮೌಲ್ಯಮಾಪನಕ್ಕೆ ನೊಂದಣಿ ಮಾಡಿದ್ದ ಬಹುತೇಕ ಶಿಕ್ಷಕರು ಮೌಲ್ಯಮಾಪನಕ್ಕೆ ಗೈರು ಹಾಜರಾಗಿದ್ದರು. ಹೀಗಾಗಿ ಮೌಲ್ಯ ಮಾಪನ ಪ್ರಕ್ರಿಯೆಯಲ್ಲಿ ಸ್ವಲ್ಪ ವಿಳಂಬವಾಗಿತ್ತು.

ನಿರೀಕ್ಷಿತ ಪ್ರಮಾಣದಲ್ಲಿ ಶಿಕ್ಷಕರು ಉತ್ತರ ಪತ್ರಿಕೆಗಳ ಮೌಲ್ಯಮಾಪನದಲ್ಲಿ ಪಾಲ್ಗೊಳ್ಳದ ಕಾರಣ ಫಲಿತಾಂಶ ಪ್ರಕಟ ದಿನಾಂಕವನ್ನು ಅನಿವಾರ್ಯವಾಗಿ ಮುಂದೂಡಲಾಗಿದೆ. ಮೇ. 15 ರೊಳಗೆ ಫಲಿತಾಂಶ ಪ್ರಕಟವಾಗುವ ನಿರೀಕ್ಷೆಯಿತ್ತು. ಇದೀಗ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರೇ ಮೇ ಮೂರನೇ ವಾರದಲ್ಲಿ ಎಸ್‌ಎಸ್‌ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ.






