ಇಂದು ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ (SSLC results) ಫಲಿತಾಂಶ ಪ್ರಕಟವಾಗಲಿದೆ.ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ SSLC ಪರೀಕ್ಷೆ ನಡೆದಿತ್ತು.ಇಂದು ಬೆಳಗ್ಗೆ 11.30ಕ್ಕೆ ಸಚಿವ ಮಧು ಬಂಗಾರಪ್ಪ (Madhu bangarappa) ಫಲಿತಾಂಶ ಪ್ರಕಟ ಮಾಡಲಿದ್ದಾರೆ.

ಆ ಬಳಿಕ ಮಧ್ಯಾಹ್ನ 12:30ಕ್ಕೆ ಇಲಾಖೆಯ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.10 ನೇ ತರಗತಿಯ ಬೋರ್ಡ್ ಪರೀಕ್ಷಾ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ https://karresults.nic.in ನಲ್ಲಿ ಪ್ರಕಟವಾಗಲಿದೆ.
ರಾಜ್ಯದಲ್ಲಿ ಈಗಾಗಲೇ ಮೊದಲ ಸಾಲಿನ SSLC ವಾರ್ಷಿಕ ಪರೀಕ್ಷೆ-1 ಮುಕ್ತಾಯಗೊಂಡಿದ್ದು, ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಈಗ ಫಲಿತಾಂಶದ ನಿರೀಕ್ಷೆಯಲ್ಲಿದ್ದಾರೆ.ಈ ಬಾರಿ ರಾಜ್ಯದಲ್ಲಿ ಒಟ್ಟು 2,818 ಕೇಂದ್ರಗಳಲ್ಲಿ pareekshe ನಡೆದಿದ್ದು, ಒಟ್ಟು 8.96 ಲಕ್ಷ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಗೆ ಹಾಜರಾಗಿದ್ದಾರೆ.











