
ಹಾವೇರಿ: ಎಸ್ಎಸ್ಎಲ್ಸಿ ವಿದ್ಯಾರ್ಥಿನಿ (SSLC student) ವಸತಿ ಶಾಲೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಬ್ಯಾಡಗಿ ಕಿತ್ತೂರು ಚೆನ್ನಮ್ಮ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ.ಹಾವೇರಿ ತಾಲೂಕಿನ ಭರಡಿ ಗ್ರಾಮದ ರೇಖಾ ಗೌಡರ(15) ಆತ್ಮಹತ್ಯೆ ಮಾಡಿಕೊಂಡ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ. ಮೃತ ರೇಖಾ ಗೌಡರ ಬೆಳಗ್ಗೆ ಗೆಳತಿಯರೊಂದಿಗೆ ತಿಂಡಿ ತಿನ್ನಲು ಹೋಗಿದ್ದಾಳೆ. ವಾಪಸ್ ಬಂದು ತನ್ನ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಆದರೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.





