• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, August 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

ಪ್ರತಿಧ್ವನಿ by ಪ್ರತಿಧ್ವನಿ
December 23, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ADVERTISEMENT

ಹವಾಮಾನ ವೈಪರೀತ್ಯಗಳು, ಮಾರುಕಟ್ಟೆ ಸಮಸ್ಯೆ ಸೇರಿದಂತೆ ಬೇರೆ ಬೇರೆ ಕಾರಣಗಳಿಂದ ಕೃಷಿಕರು ಸಮಸ್ಯೆ ಎದುರಿಸುತ್ತಿದ್ದು, ಇಂತಹ ವ್ಯತ್ಯಾಸಗಳ ನಡುವೆಯೂ ಕೆಲವು ಕೃಷಿಕರು ಯಶ್ವಸಿಯಾಗಿದ್ದಾರೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯವರು ಅಭಿಪ್ರಾಯವ್ಯಕ್ತಪಡಿಸಿದರು..

ಸಮನ್ವಯ ಟ್ರಸ್ಟ್, ಪುಡ್ ಚೈನ್ ಕೃಷಿ ಸಂಸ್ಥೆ, ಕೃಷಿ ತಂತ್ರಜ್ಞರ ಸಂಸ್ಥೆ, ಹಾಗೂ ಐಸಿಎಆರ್- ಕೆವಿಕೆ ದಕ್ಷಿಣ ಕನ್ನಡ ಇವರ ಸಹಯೋಗದಲ್ಲಿ ಬೆಂಗಳೂರಿನ ಲ್ಲಿರುವ ಕೃಷಿ ತಂತ್ರಜ್ಞರ ಸಂಸ್ಥೆ ಯಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ರೈತ ದಿನಚಾರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೃಷಿ ಸಚಿವ ಚಲುವರಾಯಸ್ವಾಮಿಯವರು, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕೃಷಿಗೆ ಮತ್ತಷ್ಟು ಒತ್ತು ನೀಡಿದರೆ ಕೃಷಿಕರ ಅಭಿವೃದ್ಧಿಯಾಗುತ್ತದೆ ಎಂದು ಹೇಳಿದರು..

ರೈತರು ವೈಜ್ಞಾನಿಕ, ಸಾವಯವ, ಸಮಗ್ರ ಹಾಗು ಸುಸ್ಥಿರ ಕೃಷಿಯ ಕಡೆಗೆ ಹೆಚ್ಚು ಗಮನಹರಿಸಬೇಕು. ಕೃಷಿಯನ್ನು ಲಾಭದಾಯಕ ವೃತ್ತಿಯನ್ನಾಗಿ ಪರಿವರ್ತಿಸಬೇಕು, ಇದಕ್ಕಾಗಿ ರೈತರಿಗೆ ಸರ್ಕಾರ ಹಾಗೂ ಕೃಷಿ ವಿವಿಗಳು ಸದಾ ನೇರವಾಗಲಿವೆ ಎಂದು ಸಚಿವರು ತಿಳಿಸಿದರು..

ರೈತರ ಬದುಕು ಹಸನು ಮಾಡುವುದು ನಮ್ಮ ಹೊಣೆ. ನಾನು ಕೃಷಿ ಸಚಿವನಾದ ನಂತರ ಸಾಕಷ್ಟು ಬದಲಾವಣೆ ತಂದಿದ್ದೇನೆ. ಕಳೆದ ಎರಡುವರೆ ವರ್ಷಗಳಲ್ಲಿ ರೈತರ ಬೆಳೆ ವಿಮೆಗೆ ಸರ್ಕಾರ 5000 ಕೋಟಿ ರೂಪಾಯಿ ಹಣ ನೀಡಿದ್ದು, ರೈತರ ಕೃಷಿ ಯಾಂತ್ರಿಕರಣಕ್ಕೆ 1500 ಸಾವಿರ ಕೋಟಿ ಹಣ ಸಹಾಯಧನ ನೀಡಿದೆ ಎಂದು ತಿಳಿಸಿದರು..

ನಮ್ಮ ಸರ್ಕಾರ ಕೃಷಿಗೆ ಬೆಂಬಲ, ಸಂಶೋಧನೆಗಳಿಗೆ ನೆರವು, ಪ್ರೋತ್ಸಾಹ ನೀಡಲು ಸದಾ ಸಿದ್ಧ ಎಂದು ಸಚಿವರು ತಿಳಿಸಿದರು..

ಕಾರ್ಯಕ್ರಮದಲ್ಲಿ ಕೆಪೆಕ್ ವ್ಯವಸ್ಥಾಪಕ ನಿರ್ದೇಶಕ ಶಿವಪ್ರಕಾಶ್, ಕೃಷಿ ತಂತ್ರಜ್ಞರ ಸಂಸ್ಥೆಯ ಅಧ್ಯಕ್ಷ ಡಾ.ಎ.ಬಿ.ಪಾಟೀಲ್, ಸಮನ್ವಯ ಟ್ರಸ್ಟ್ ನ ಸುಮಲತಾ ಕೆ.ಹೆಚ್. ಎಫ್ ಕೆಸಿಸಿಐನ ಉಪಾಧ್ಯಕ್ಷ ಶ್ರೀರಾಮ್ ಪ್ರಸಾದ್, ರೂಪಲತಾ ಹಾಗೂ ಡಾ.ಹಿತ್ತಲಮನಿ ಭಾಗಿಯಾಗಿದ್ದರು..

ಪದ್ಮಶ್ರಿ ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪಡೆದ ರೈತರು ಹಾಗು ಕೃಷಿ ಇಲಾಖೆಯಲ್ಲಿ ಸಾಧನೆ ಮಾಡಿದ ಅಧಿಕಾರಿಗಳ ಸನ್ಮಾನ:

ಪದ್ಮಶ್ರಿ ವಿಜೇತಾರಾದ ಹರೆಕಾಳ ಹಜಬ್ಬ, ಅಬ್ದುಲ್ ಖಾದರ್ ನಡಕಟ್ಟಿನ್, ಸತ್ಯನಾರಾಯಣ ಬೇಲೇರಿ, ಅಮೈ ಮಹಾಲಿಂಗ ನಾಯಕ ಹಾಗೂ ರಾಜ್ಯೋತ್ಸವ ಪ್ರಶಸ್ತಿ ವಿಜೇತಾರಾದ ಡಾ. ಹಿತ್ತಲಮನಿ, ಹಾಗೂ ಡಾ. ವಿ.ಸಿ. ರಂಗಸ್ವಾಮಿಯವರಿಗೆ ಕೃಷಿ ಸಚಿವ ಚಲುವರಾಯಸ್ವಾಮಿಯವರು ಸನ್ಮಾನಿಸಿದರು..

Tags: agriculture minister n chaluvarayaswamyChaluvarayaswamyMinister N Chaluvarayaswamyn chaluvarayaswamyn chaluvarayaswamy about election 2023n chaluvarayaswamy in suvarna newsn chaluvarayaswamy latest newsn chaluvarayaswamy latest news updatesn chaluvarayaswamy latest speechn chaluvarayaswamy latest updatesn chaluvarayaswamy on devanahalli land rown chaluvarayaswamy on prajwal revannan chaluvarayaswamy speechn chaluvarayaswamy updatesN Cheluvarayaswamyn cheluvarayaswamy news
Previous Post

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

Next Post

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

Related Posts

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ
Top Story

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ

by ಪ್ರತಿಧ್ವನಿ
August 18, 2026
0

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಅಲ್ಲದೇ 7 ದಿನಗಳೊಳಗೆ ಮತ್ತೆ...

Read moreDetails
‘ಟಾಕ್ಸಿಕ್’ : ಆಗಸ್ಟ್‌ 21ರಿಂದ ಮುಂಗಡ ಬುಕ್ಕಿಂಗ್‌ ಶುರು

‘ಟಾಕ್ಸಿಕ್’ : ಆಗಸ್ಟ್‌ 21ರಿಂದ ಮುಂಗಡ ಬುಕ್ಕಿಂಗ್‌ ಶುರು

August 18, 2026
ಜೈಲಿಗೆ ಹಾಕಿದ್ರೂ ನಾವು ‘ವಂದೇ ಮಾತರಂ’ ಎರಡೇ ಪ್ಯಾರಾ ಹಾಡೋದು: ಬಿ.ಕೆ ಹರಿಪ್ರಸಾದ್‌

ಜೈಲಿಗೆ ಹಾಕಿದ್ರೂ ನಾವು ‘ವಂದೇ ಮಾತರಂ’ ಎರಡೇ ಪ್ಯಾರಾ ಹಾಡೋದು: ಬಿ.ಕೆ ಹರಿಪ್ರಸಾದ್‌

August 18, 2026
ಎನ್‌ಕೌಂಟರ್‌ ಪ್ರಕರಣ: ತ.ನಾಡು ಸರ್ಕಾರ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ

ಎನ್‌ಕೌಂಟರ್‌ ಪ್ರಕರಣ: ತ.ನಾಡು ಸರ್ಕಾರ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ

August 18, 2026
ಆರೋಪಿ ಪವಿತ್ರಾ ಗೌಡಗೆ ಜ್ವರ; ವಿಚಾರಣೆಗೆ ಗೈರು

ಆರೋಪಿ ಪವಿತ್ರಾ ಗೌಡಗೆ ಜ್ವರ; ವಿಚಾರಣೆಗೆ ಗೈರು

August 18, 2026
Next Post

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada