ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡು ಪಲ್ಟಿ ಹೊಡೆಯಲಿವೆ ಎಂದು ಮೈಸೂರಿನಲ್ಲಿ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ. ಈ ಕುರಿತು ಮಾತನಾಡದ ಅವರು, ಎರಡು ಪಕ್ಷಗಳ ಮೈತ್ರಿಯಿಂದ ಯಾವುದೇ ಪ್ರಯೋಜನವಾಗುವುದಿಲ್ಲ, ಬಿಜೆಪಿಯಿಂದ ಜೆಡಿಎಸ್ ಗೆ ಅದೇ ರೀತಿ ಜೆಡಿಎಸ್ ನಿಂದ ಬಿಜೆಪಿಗೂ ಅನುಕೂಲವಾಗುವುದಿಲ್ಲ, ಎರಡು ಪಕ್ಷಗಳ ಮೈತ್ರಿಯಿಂದ ಕಾಂಗ್ರೆಸ್ ಗೆ ಹೆಚ್ಚು ಅನುಕೂಲವಾಗಲಿದೆ, ವಿಧಾನಸಭೆ ಚುನಾವಣೆಗಿಂತ ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಮತಗಳು ಕಾಂಗ್ರೆಸ್ ಗೆ ಬೀಳಲಿವೆ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ 22 ರಿಂದ 25 ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ಇನ್ನು ಸಂಸದ ಪ್ರತಾಪ್ ಸಿಂಹ ಕುರಿತು ಮಾತನಾಡಿದ ಲಕ್ಷ್ಮಣ್, ಸಂಸದ ಪ್ರತಾಪ್ ಸಿಂಹ ಸೋಲಿನ ಭೀತಿಯಲ್ಲಿದ್ದಾರೆ, ಇದೇ ಕಾರಣದಿಂದ ಕಂಡ ಕಂಡವರ ಕಾಲು ಹಿಡಿಯುತ್ತಿದ್ದಾರೆ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸಂಸದ ಪ್ರತಾಪ್ ಸಿಂಹ 3 ಲಕ್ಷ ಮತಗಳ ಅಂತರದಿಂದ ಸೋಲುತ್ತಾರೆ, ಯಾವುದೇ ಕಾರಣಕ್ಕೂ ಪ್ರತಾಪ್ ಸಿಂಹ ಗೆಲ್ಲುವುದಿಲ್ಲ, ಈ ಬಗ್ಗೆ ಸಮೀಕ್ಷೆ ವರದಿಗಳು ಹೇಳಿವೆ, ಪ್ರತಾಪ್ ಸಿಂಹ 100 ಕ್ಕೆ 100ರಷ್ಟು ಸೋಲುತ್ತಾರೆ, ಪ್ರತಾಪ್ ಸಿಂಹ ಗೆದ್ದರೆ ನಾನು ಊರು ಬಿಟ್ಟು ಬಿಡುತ್ತೇನೆ. ಎಂದು ಹೇಳಿಕೆ ನೀಡಿದ್ದಾರೆ
ರಾಜ್ಯ ಬಿಜೆಪಿ ಬಗ್ಗೆ ಮಾತನಾಡಿದ ಕಾಂಗ್ರೆಸ್ ವಕ್ತಾರ ಎಂ. ಲಕ್ಷ್ಮಣ್, ರಾಜ್ಯ ಬಿಜೆಪಿ ನಾಯಕರ ಬಗ್ಗೆ ಕೇಂದ್ರ ನಾಯಕರಿಗೆ ನಂಬಿಕೆಯಿಲ್ಲ, ರಾಜ್ಯ ಬಿಜೆಪಿ ನಾಯಕರು ಕಾಮಿಡಿ ಪೀಸ್ ಗಳಾಗಿದ್ದಾರೆ, ಹಾಗಾಗಿ ಇದುವರೆಗೂ ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡಿಲ್ಲ, ರಾಜ್ಯ ಸರ್ಕಾರ ಹಾಗು ಕಾಂಗ್ರೆಸ್ ವಿರುದ್ದ ಮಾತನಾಡಲು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಗೆ ಬಿಜೆಪಿಯವರು ಸುಫಾರಿ ಕೊಟ್ಟಿದ್ದಾರೆ, ಮುಂದೆ ಕುಮಾರಸ್ವಾಮಿಗೆ ವಿಪಕ್ಷ ನಾಯಕ ಸ್ಥಾನವನ್ನು ನೀಡುತ್ತಾರೆ, ಇದೇ ಕಾರಣದಿಂದ ವಿಪಕ್ಷ ನಾಯಕನನ್ನು ಆಯ್ಕೆ ಮಾಡಿಲ್ಲ,
ಇನ್ನು ಮಹಿಷ ದಸರಾ ಆಚರಣೆಗೆ ವಿರೋಧ ವ್ಯಕ್ತಪಡಿಸುತ್ತಿರುವ ಸಂಸದ ಪ್ರತಾಪ್ ಸಿಂಹ ವಿರುದ್ಧ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಕಿಡಿ ಕಾರಿದ್ದು, ಮಹಿಷ ದಸರಾ ಅಚರಣೆ ಮಾಡದಂತೆ ಪ್ರತಾಪ್ ಸಿಂಹ ಧಮ್ಕಿ ಹಾಕುವುದನ್ನು ನಿಲ್ಲಿಸಬೇಕು, ಪ್ರತಾಪ್ ಸಿಂಹ ಬಾಯಿ ಮುಚ್ಚಿಕೊಂಡು ಸುಮ್ಮನಿರಬೇಕು, ಮಹಿಷ ದಸರಾ ಆಚರಣೆಗೆ ಅನುಮತಿ ಕೊಡುವ ಬಗ್ಗೆ ಪೊಲೀಸ್ ಇಲಾಖೆ, ಸಂಬಂಧಪಟ್ಟವರು ನಿರ್ಧಾರ ಕೈಗೊಳ್ಳುತ್ತಾರೆ,
ಮಾಜಿ ಸಿಎಂ ಕುಮಾರ ಸ್ವಾಮಿ ಬಗ್ಗೆ ಮಾತನಾಡಿದ ಎಂ.ಲಕ್ಷ್ಮಣ್, ʼʼ ಕುಮಾರಸ್ವಾಮಿ ಬಗ್ಗೆ ಮಾತನಾಡಿದರೆ ನನಗೆ ಮೊಬೈಲ್ ಕಾಲ್ ಮಾಡಿ ಧಮ್ಕಿ ಹಾಕ್ತಿದಾರೆ, ಚಿಕ್ಕಬಳ್ಳಾಪುರದಿಂದ ಅದ್ಯಾವನೋ ರೆಡ್ಡಿ ಎಂಬಾತ ಕಾಲ್ ಮಾಡಿ ಧಮ್ಕಿ ಹಾಕ್ತಿದಾನೆ, ನಾಲ್ಕೈದು ಮಂದಿ ಕಾಲ್ ಮಾಡಿ ಧಮ್ಕಿ ಹಾಕ್ತಿದಾರೆ, ಕುಮಾರಸ್ವಾಮಿ ಬಗ್ಗೆ ಮಾತನಾಡಬೇಡಿ ಎಂದು ಧಮ್ಕಿ ಹಾಕ್ತಿದಾರೆ, ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಮೈಸೂರಿನಲ್ಲಿ ಹೇಳಿಕೆ ನೀಡಿದ್ದಾರೆ.