• Home
  • About Us
  • ಕರ್ನಾಟಕ
Sunday, January 25, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Santhosh Lad: ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕೆ ರಾಜ್ಯ ಸರ್ಕಾರ ಬದ್ಧ..!!

ಪ್ರತಿಧ್ವನಿ by ಪ್ರತಿಧ್ವನಿ
September 10, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಕೋಲಾರದಲ್ಲಿ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಕಾರ್ಯಕ್ರಮದಲ್ಲಿ ಸಚಿವ ಸಂತೋಷ್‌ ಎಸ್ ಲಾಡ್

ADVERTISEMENT

ವಿವಿಧ ಅಸಂಘಟಿತ ವಲಯದ ಕಾರ್ಮಿಕರ ಅಭಿವೃದ್ಧಿಗೆ ಪೂರಕವಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್‌ ಅವರು ತಿಳಿಸಿದರು.

ಕೋಲಾರ ನಗರದ ಹೊರವಲಯದಲ್ಲಿರುವ ನಾರಾಯಣಿ ಕನ್ವೆಂನ್ಷನ್ ಹಾಲ್ ನಲ್ಲಿ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ರಾಜ್ಯ ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಜಿಲ್ಲೆಯ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದೇಶದಲ್ಲಿ ಶೇ.91ರಷ್ಟು ಅಸಂಘಟಿತ ವಲಯದ ಕಾರ್ಮಿಕರನ್ನು ಗುರುತಿಸಲಾಗಿದ್ದು, ಅವರ ಜೀವನ ಭದ್ರತೆಗೆ ನೆರವಾಗುವಂತಹ ಹತ್ತು ಹಲವು ಯೋಜನೆ, ಕಾರ್ಯಕ್ರಮಗಳನ್ನು ರಾಜ್ಯಸರ್ಕಾರ ರೂಪಿಸಿದೆ. ಗಿಗ್ ಬಿಲ್, ಸಿನಿ ಬಿಲ್, ಸಾರಿಗೆ ಬಿಲ್, ಆಶಾದೀಪ ಯೋಜನೆ, ಡಾ. ಬಿ.ಆರ್. ಅಂಬೇಡ್ಕರ್ ಸಹಾಯ ಹಸ್ತ ಯೋಜನೆ, ಹೊರಗುತ್ತಿಗೆ ನೌಕರರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ಪ್ರಮುಖ ಯೋಜನೆಗಳಾಗಿವೆ. ಅಸಂಘಟಿತ ಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುವಂತೆ ಸ್ಮಾರ್ಟ್ ಕಾರ್ಡ್‍ಗಳನ್ನು ವಿತರಿಸಲಾಗುತ್ತಿದೆ. ಸರ್ಕಾರದ ನೂತನ ಯೋಜನೆಗಳ ಬಗ್ಗೆ ಅಸಂಘಟಿತ ಕಾರ್ಮಿಕರು ಹೆಚ್ಚಿನ ಅರಿವು ಹೊಂದಬೇಕು ಎಂದರು.

ಜೀವನೋಪಾಯಕ್ಕಾಗಿ ಇತರೆಡೆಯಿಂದ ವಲಸೆ ಬರುವ ಕಾರ್ಮಿಕರ ಅನುಕೂಲಕ್ಕಾಗಿ ವಸತಿ ಸಮುಚ್ಚಯಗಳನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ನಿರ್ಮಿಸಲಾಗುತ್ತಿದೆ. ಈಗಾಗಲೇ 10 ಜಿಲ್ಲೆಗಳಲ್ಲಿ ತಾತ್ಕಾಲಿಕ ವಸತಿ ಸಮುಚ್ಚಯಗಳನ್ನು ತೆರೆಯಲಾಗಿದ್ದು, ಸಮುಚ್ಚಯದಲ್ಲಿ ಎಲ್ಲಾ ಮೂಲಸೌಕರ್ಯದೊಂದಿಗೆ 7 ಸಾವಿರ ಜನ ಉಳಿದುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯಸರ್ಕಾರವು ಸಂಘಟಿತ, ಅಸಂಘಟಿತ ಕಾರ್ಮಿಕರ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಹೇಳಿದರು.

ದೇಶದಲ್ಲಿ ವಾರ್ಷಿಕವಾಗಿ 4.70 ಲಕ್ಷ ರಸ್ತೆ ಅಪಘಾತಗಳು ಸಂಭವಿಸುತ್ತಿವೆ. ಇದರಿಂದ 1 ಲಕ್ಷದ 77 ಸಾವಿರಕ್ಕೂ ಅಧಿಕ ಮಂದಿ ಮರಣ ಹೊಂದುತ್ತಿದ್ದು, ಈ ಪೈಕಿ ಯುವಜನರೇ ಹೆಚ್ಚಾಗಿದ್ದಾರೆ. ಜೋಮ್ಯಾಟೋ, ಸ್ವಿಗ್ಗಿ, ಅಮೇಜಾನ್ ನಂತಹ ಸಂಸ್ಥೆಗಳಲ್ಲಿ ಕೆಲಸಗಾರರಿಗೆ ದುಡಿಯುತ್ತಿರುವವರಿಗೆ ನೆರವಾಗಲು ಗಿಗ್ ಬಿಲ್ (ಮಸೂದೆ), ಸಿನಿಮಾ ಪರದೆಯ ಹಿಂದೆ ಕೆಲಸ ಮಾಡುವ ಮೇಕಪ್ ಕಲಾವಿದರು, ಕ್ಯಾಮೆರಾಮನ್‍ಗಳು, ಸಹಾಯಕ ನೃತ್ಯಗಾರರಿಗೆ ಅನುಕೂಲ ಕಲ್ಪಿಸಲು ಸಿನಿ ಬಿಲ್ (ಮಸೂದೆ) ಹಾಗೂ ಬಸ್, ಆಟೋ ಚಾಲಕರು, ಕ್ಲೀನರ್, ಮೆಕಾನಿಕ್‍ಗಳು ಸೇರಿದಂತೆ ಇತರರ ಕಲ್ಯಾಣಕ್ಕಾಗಿ ಸಾರಿಗೆ ಬಿಲ್ (ಮಸೂದೆ)ಗಳು ಪೂರಕವಾಗಿವೆ ಎಂದು ತಿಳಿಸಿದರು.

ಅಸಂಘಟಿತ ವಲಯದಲ್ಲಿ ಕೆಲಸ ಮಾಡುತ್ತಿರುವ ವಿವಿಧ ವರ್ಗಗಳ ಜನರಿಗೆ ಅನುಕೂಲವಾಗುವಂತಹ ಕಾರ್ಯಕ್ರಮಗಳನ್ನು ಸರ್ಕಾರವು ಜಾರಿಗೊಳಿಸಿದೆ. ಯೋಜನೆಗಳನ್ನು ಸಮರ್ಪಕವಾಗಿ ಅರ್ಹರಿಗೆ ತಲುಪಿಸುವ ಕೆಲಸ ಆಗಬೇಕು. ರಾಜ್ಯದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಾದರಿಯಲ್ಲಿ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕಾಗಿ ವಸತಿ ಶಾಲೆಗಳನ್ನು ತೆರೆಯಲು ಸರ್ಕಾರ ಚಿಂತನೆ ನಡೆಸಿದೆ. ಇದು ಕಾರ್ಮಿಕರಿಗೆ ಶಕ್ತಿ ತುಂಬಲಿದೆ ಎಂದು ತಿಳಿಸಿದರು.

ರಾಜ್ಯಸರ್ಕಾರ 2 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ್ದು, ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ರಾಜ್ಯದ ಮೂಲೆಮೂಲೆಗೂ ತಲುಪುತ್ತಿವೆ. ಗ್ಯಾರಂಟಿ ಯೋಜನೆಗಳಿಗಾಗಿ ವರ್ಷಕ್ಕೆ 60 ಸಾವಿರ ಕೋಟಿ ರೂ. ವೆಚ್ಚವಾಗಲಿದ್ದು, 5 ವರ್ಷಗಳಿಗೆ 3 ಲಕ್ಷ ಕೋಟಿ ರೂ. ವ್ಯಯವಾಗಲಿದೆ. ಶಕ್ತಿ ಯೋಜನೆಯಡಿ ರಾಜ್ಯದಲ್ಲಿ 500 ಕೋಟಿ ಮಹಿಳಾ ಪ್ರಯಾಣಿಕರು ಸರ್ಕಾರಿ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಉಳಿದ ಯೋಜನೆಗಳಲ್ಲಿಯೂ ರಾಜ್ಯ ಸಹ ನಿರೀಕ್ಷಿತ ಪ್ರಗತಿ ಸಾಧಿಸಿದೆ. ತಲಾ ಆದಾಯ, ಜಿಡಿಪಿ ಯಲ್ಲಿ ರಾಜ್ಯ ಅಗ್ರಸ್ಥಾನದಲ್ಲಿದೆ. ಜಿ.ಎಸ್.ಟಿ ಸಂಗ್ರಹದಲ್ಲಿ ದೇಶದಲ್ಲಿಯೇ ರಾಜ್ಯ ಎರಡನೇ ಸ್ಥಾನದಲ್ಲಿದೆ ಎಂದು ಸಂತೋಷ್ ಲಾಡ್ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಡಾ. ಕೊತ್ತೂರು ಜಿ ಮಂಜುನಾಥ್ ಅವರು ಮಾತನಾಡಿ, ಇತ್ತೀಚೆಗೆ ಜಿಲ್ಲೆಯಲ್ಲಿ ಕೈಗಾರಿಕೆ ಕ್ಷೇತ್ರ ಅಭಿವೃದ್ಧಿಯತ್ತ ಸಾಗುತ್ತಿದೆ. ಹಿಂದೆ ಸಂಘಟಿತ ಕಾರ್ಮಿಕರಿಗೆ ಮಾತ್ರ ಸರ್ಕಾರದ ಸೌಲಭ್ಯಗಳು ದೊರೆಯುತ್ತಿತ್ತು. ಪ್ರಸ್ತುತ ರಾಜ್ಯಸರ್ಕಾರ ಅಸಂಘಟಿತ ಕಾರ್ಮಿಕರಿಗೂ ಹಲವಾರು ಸೌಲಭ್ಯಗಳನ್ನು ಅನುಷ್ಟಾನ ಮಾಡುವ ಮೂಲಕ ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಮುಂದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಬಂಗಾರ ಪೇಟೆ ಶಾಸಕರಾದ ಎಸ್. ಎನ್. ನಾರಾಯಣ ಸ್ವಾಮಿ ಕೆ. ಎಂ, ಮಾಲೂರು ಶಾಸಕ ಕೆ. ವೈ. ನಂಜೇಗೌಡ, ವಿಧಾನ ಪರಿಷತ್ ಸದಸ್ಯ ಎಂ ಎಲ್ ಅನಿಲ್ ಕುಮಾರ್, ನಗರಸಭೆ ಅಧ್ಯಕ್ಷರು ಲಕ್ಷ್ಮೀದೇವಮ್ಮ ರಮೇಶ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಕುಮಾರ್, ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪ್ರವೀಣ್. ಪಿ. ಬಾಗೇವಾಡಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ. ಬಿ. ನಿಖಿಲ್, ಕಾರ್ಮಿಕ ಇಲಾಖೆ ಆಯುಕ್ತ ಡಾ. ಎಚ್.ಎನ್. ಗೋಪಾಲಕೃಷ್ಣ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತಾ ಮಂಡಳಿ ಜಂಟಿ ಕಾರ್ಯದರ್ಶಿ ಡಾ. ಎಸ್.ಬಿ. ರವಿಕುಮಾರ, ಕೂಡಾ ಅಧ್ಯಕ್ಷ ಮೊಹಮ್ಮದ್ ಹನೀಫ್, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸದಸ್ಯ ಎಚ್.ಜಿ. ರಮೇಶ್, ಕೆ.ಪಿ. ಜಾನಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Tags: congress mla santhosh ladlabor minister santhosh ladMinister Santhosh Ladsanthosh ladsanthosh lad about modisanthosh lad about pm modisanthosh lad angry onsanthosh lad lashes out at pm modisanthosh lad latest newssanthosh lad latest statementsanthosh lad newssanthosh lad news todaysanthosh lad on bjpsanthosh lad questioned modisanthosh lad speechsanthosh lad statementsanthosh lad today newssanthosh lad vs narendra modiSantosh Ladsantosh lad agesantosh lad mlasantosh lad news
Previous Post

Chaluvarayaswamy: ಯುವ ರೈತರಿಗೆ ಪಿಎಂಎಫ್ ಎಂಇ ಯೋಜನೆ ಮಾದರಿ: ಎನ್. ಚಲುವರಾಯಸ್ವಾಮಿ.

Next Post

ಪ್ರಥಮ್‌ಗೆ ಬೆದರಿಕೆ: ರೌಡಿಶೀಟರ್ ಬೇಕರಿ ರಘು, ಯಶಸ್ವಿನಿ ಬಂಧನ!

Related Posts

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”
ಇದೀಗ

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

by ಪ್ರತಿಧ್ವನಿ
January 25, 2026
0

ಬೆಂಗಳೂರು: ನವೀಕರಿಸಬಹುದಾದ ಇಂಧನ ಯೋಜನೆಗಳು ಕೃಷಿ ಭೂಮಿಯಲ್ಲಿ ಕಾರ್ಯಾರಂಭಿಸುವುದುಕ್ಕೆ ಪೂರ್ವಾನುಮತಿ ಪಡೆಯುವ ಅವಶ್ಯತಕೆ ಇಲ್ಲ. ಇದಕ್ಕಾಗಿ ನೂತನ ವ್ಯವಸ್ಥೆಯನ್ನು ಕರ್ನಾಟಕ ಸರ್ಕಾರ ಜಾರಿಗೆ ತಂದಿದೆ, ಈ ಹೆಜ್ಜೆಯು...

Read moreDetails
ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

January 25, 2026
ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

January 25, 2026
Next Post

ಪ್ರಥಮ್‌ಗೆ ಬೆದರಿಕೆ: ರೌಡಿಶೀಟರ್ ಬೇಕರಿ ರಘು, ಯಶಸ್ವಿನಿ ಬಂಧನ!

Recent News

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:
Top Story

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

by ಪ್ರತಿಧ್ವನಿ
January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ
Top Story

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

by ಪ್ರತಿಧ್ವನಿ
January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ
Top Story

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

by ಪ್ರತಿಧ್ವನಿ
January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 25, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ
Top Story

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

by ಪ್ರತಿಧ್ವನಿ
January 24, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

January 25, 2026
ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

January 25, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada