ಮೈಸೂರು: ರಾಜ್ಯವನ್ನು ಬರಗಾಲ ಆವರಿಸಿದ್ದು, ಸರಳ, ಸಂಪ್ರದಾಯಬದ್ಧ ಅರ್ಥಪೂರ್ಣವಾಗಿ ದಸರಾ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.ಮಳೆ ಕೊರತೆಯಿಂದ ಉಂಟಾದ ತೀವ್ರ ಬರದಿಂದಾಗಿ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಸರಳವಾಗಿ ಆಚರಿಸಬೇಕೋ ಅಥವಾ ಅದ್ಧೂರಿಯಾಗಿ ಆಚರಿಸಬೇಕೋ ಎಂಬ ಗೊಂದಲದಲ್ಲಿ ಸರ್ಕಾರ ಸಿಲುಕಿತ್ತು.
ಇದೀಗ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಸಾಮಾಜಿಕ ಜಾಲತಾಣದ ‘ಎಕ್ಸ್’ನಲ್ಲಿ ಈ ಕುರಿತು ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ರೈತಾಪಿ ವರ್ಗ ಸಂಕಷ್ಟದಲ್ಲಿದೆ. ಹೀಗಾಗಿ ಸರಳ ಮತ್ತು ಅರ್ಥಪೂರ್ಣ ದಸರಾ ಆಚರಿಸಲು ಸರಕಾರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.