• Home
  • About Us
  • ಕರ್ನಾಟಕ
Friday, July 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಮೆಟ್ರೋ ಪ್ರಯಾಣ ದರ ಏರಿಕೆ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ: ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
February 11, 2025
in Top Story, ಕರ್ನಾಟಕ, ದೇಶ, ರಾಜಕೀಯ, ವಿಶೇಷ
0
ಮೆಟ್ರೋ ಪ್ರಯಾಣ ದರ ಏರಿಕೆ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ: ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ಬೆಂಗಳೂರು ಮೆಟ್ರೊ(Metro)ರೈಲಿನ ಪ್ರಯಾಣ ದರ ಹೆಚ್ಚಳಕ್ಕೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ವಾಸ್ತವಾಂಶಗಳನ್ನು ಬೆಂಗಳೂರು ಜನತೆಯ ಮುಂದಿಡಲು ಬಯಸುತ್ತೇನೆ.

ADVERTISEMENT

ಮೆಟ್ರೋ(Metro) ಪ್ರಯಾಣ ದರ ಹೆಚ್ಚಳವನ್ನು ವಿರೋಧಿಸುತ್ತಿರುವ ವಿರೋಧ ಪಕ್ಷವಾದ ಬಿಜೆಪಿಯ ನಾಯಕರು ಯಥಾಪ್ರಕಾರ ಸುಳ್ಳು ಮತ್ತು ತಿರುಚಿದ ಮಾಹಿತಿಯನ್ನು ಬಳಸಿಕೊಂಡು ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡಿ ಸಾರ್ವಜನಿಕರ ಹಾದಿ ತಪ್ಪಿಸುತ್ತಿದ್ದಾರೆ. ಸರ್ಕಾರದ ಯಾವುದೇ ನೀತಿ-ನಿರ್ಧಾರಗಳನ್ನು ವಿರೋಧಿಸುವ ಅಧಿಕಾರ ಸಾರ್ವಜನಿಕರಿಗೆ ಇದೆ, ಸಂವಿಧಾನಬದ್ಧವಾದ ಅವರ ಹಕ್ಕನ್ನು ನಾನು ಗೌರವಿಸುತ್ತೇನೆ.

ಆದರೆ ವಿರೋಧ ಪಕ್ಷದ ಸ‍್ಥಾನದಲ್ಲಿ ಜನ ಕೂರಿಸಿರುವ ರಾಜ್ಯದ ಬಿಜೆಪಿ ರಾಜಕೀಯ ದುರುದ್ದೇಶದಿಂದ ಸುಳ್ಳು ಮಾಹಿತಿಗಳನ್ನು ನೀಡಿ ಸಾರ್ವಜನಿಕರ ಪ್ರತಿಭಟನೆಗೆ ಕುಮ್ಮಕ್ಕು ನೀಡುತ್ತಿರುವುದು ಅಕ್ಷಮ್ಯ. ಒಂದೆಡೆ ಮೆಟ್ರೋ ರೈಲು ನಿರ್ಮಾಣದ ಸಾಧನೆ ಕೇಂದ್ರದ ಬಿಜೆಪಿ ಸರ್ಕಾರದ್ದು ಎಂದು ಡಂಗುರ ಬಾರಿಸುತ್ತಿರುವ ಬಿಜೆಪಿ ನಾಯಕರು ದರ ಪರಿಷ್ಕರಣೆ ವಿರುದ್ದ ಜನಾಕ್ರೋಶ ವ್ಯಕ್ತವಾಗುತ್ತಿರುವುದನ್ನು ಕಂಡು ಅದರ ಜವಾಬ್ದಾರಿಯನ್ನು ರಾಜ್ಯ ಸರ್ಕಾರದ ಮೇಲೆ ಹೊರಿಸುತ್ತಿರುವುದು ಆತ್ಮವಂಚಕ ನಡವಳಿಕೆಯಾಗಿದೆ.

ಕೇಂದ್ರ ಮತ್ತು ಕರ್ನಾಟಕ ಸರ್ಕಾರ ಜೊತೆಗೂಡಿ ಬೆಂಗಳೂರು ಮೆಟ್ರೊ ರೈಲು ನಿಗಮವನ್ನು ಸ್ಥಾಪಿಸಿದ್ದು, ಇದರಲ್ಲಿ ಎರಡೂ ಸರ್ಕಾರಗಳ ಸಮ (50:50) ಪಾಲುದಾರಿಕೆ ಇದೆ. ಕೇಂದ್ರ ನಗರ ಮತ್ತು ವಸತಿ ವ್ಯವಹಾರ ಇಲಾಖೆಯ ಕಾರ್ಯದರ್ಶಿಯಾಗಿರುವ ಶ್ರೀನಿವಾಸ ಕಟಿಕಿಥಲ ಅವರು ನಿಗಮದ ಈಗಿನ ಅಧ್ಯಕ್ಷರು. ವ್ಯವಸ್ಥಾಪಕ ನಿರ್ದೇಶಕ ಮತ್ತು ನಿರ್ದೇಶಕರ ಸ‍್ಥಾನದಲ್ಲಿ ಕೇಂದ್ರ ಮತ್ತು ರಾಜ್ಯದ ಅಧಿಕಾರಿಗಳಿದ್ದಾರೆ.

M Lakshmana : ಪ್ರತಾಪ್ ಸಿಂಹಗೆ ಮಾನ ಮರ್ಯಾದೆ ಇದ್ಯಾ ಅಂತಾ ಕಿಡಿಕಾರಿದ ಲಕ್ಷ್ಮಣ್ #pratidhvani

ಇದೊಂದು ಸ್ವಾಯತ್ತ ಸಂಸ್ಥೆಯಾಗಿದ್ದು ಇದರ ಮೇಲೆ ರಾಜ್ಯ ಸರ್ಕಾರಕ್ಕೆ ಪೂರ್ಣ ನಿಯಂತ್ರಣಾಧಿಕಾರ ಇಲ್ಲ. ಉಳಿದೆಲ್ಲ ನಗರಗಳ ಮೆಟ್ರೋ ರೈಲು ನಿಗಮಗಳಂತೆ ಬೆಂಗಳೂರು ಮೆಟ್ರೊ ರೈಲು ನಿಗಮ ಕೂಡಾ ಕೇಂದ್ರ ಸರ್ಕಾರದ ಮೆಟ್ರೋ ರೈಲು (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯ್ದೆ 2002ರ ಅಡಿಯಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ.

2017ರ ನಂತರ ಮೆಟ್ರೊ ರೈಲಿನ ಪ್ರಯಾಣ ದರ ಪರಿಷ್ಕರಣೆ ಮಾಡದೆ ಇರುವ ಕಾರಣ ದರ ಪರಿಷ್ಕರಣೆ ನಡೆಸುವಂತೆ ಬಿಎಂಆರ್‌ಸಿಎಲ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿತ್ತು. ಪ್ರಯಾಣ ದರ ಹೆಚ್ಚಳದ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲೇ ಇದ್ದಿದ್ದರೆ ಬಿಎಂಆರ್‌ಸಿಎಲ್ ನಮಗೆ ಪತ್ರ ಬರೆಯದೆ, ಕೇಂದ್ರ ಸರ್ಕಾರಕ್ಕೆ ಯಾಕೆ ಪತ್ರ ಬರೆಯುತ್ತಿತ್ತು?

ಬಿಎಂಆರ್‌ಸಿಎಲ್ ಪತ್ರಕ್ಕೆ ಪ್ರತಿಕ್ರಿಯಿಸಿದ್ದ ಕೇಂದ್ರ ಸರ್ಕಾರ ಮದ್ರಾಸ್ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಆರ್ ಥರಾನಿ ಅವರ ಅಧ್ಯಕ್ಷತೆಯಲ್ಲಿ ದರ ಪರಿಷ್ಕರಣಾ ಸಮಿತಿ ರಚಿಸಿತ್ತು, ಈ ಸಮಿತಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಪ್ರತಿನಿಧಿಗಳು ಸದಸ್ಯರಾಗಿದ್ದರು. 2024ರ ಸೆಪ್ಟೆಂಬರ್ 16ರಂದು ಅಧಿಕಾರ ಸ್ವೀಕರಿಸಿದ ಈ ಸಮಿತಿ ಮೂರು ತಿಂಗಳೊಳಗೆ ತನ್ನ ಶಿಫಾರಸನ್ನು ಸಲ್ಲಿಸಬೇಕೆಂದು ಕೇಂದ್ರ ಸರ್ಕಾರ ತನ್ನ ಪತ್ರದಲ್ಲಿ ತಿಳಿಸಿತ್ತು.

ಮೂರು ತಿಂಗಳ ಅವಧಿಯಲ್ಲಿ ಸಮಿತಿ ಬಿಎಂಆರ್‌ಸಿಎಲ್ ಅಧಿಕಾರಿಗಳ ಜೊತೆ ಮಾತ್ರವಲ್ಲ ದೆಹಲಿ ಮತ್ತು ಚೆನೈಗಳಿಗೆ ತೆರಳಿ ಅಲ್ಲಿನ ಮೆಟ್ರೋ ಸಂಸ್ಥೆಗಳ ಅಧಿಕಾರಿಗಳ ಜೊತೆಯಲ್ಲಿ ಕೂಡಾ ಕಾರ್ಯಾಚರಣೆ ಮತ್ತು ಪ್ರಯಾಣ ದರದ ಬಗ್ಗೆ ಸಮಾಲೋಚನೆ ನಡೆಸಿತ್ತು.

2017ರ ಜೂನ್ ನಲ್ಲಿ ಬೆಂಗಳೂರು ಮೆಟ್ರೋ ರೈಲಿಗೆ ನಿಗದಿಗೊಳಿಸಿದ್ದ ಪ್ರಯಾಣದರ, ಮೆಟ್ರೋದಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರ ಅನುಭವಗಳನ್ನು ದರಪರಿಷ್ಕರಣ ಸಮಿತಿ ಕಲೆ ಹಾಕಿತ್ತು. ಇದರ ಜೊತೆಯಲ್ಲಿ ಬಿಎಂಆರ್‌ಸಿಎಲ್ ನ ಹಣಕಾಸು ಸಾಮರ್ಥ್ಯವನ್ನು ಕೂಡಾ ಸಮಿತಿ ಅಧ್ಯಯನ ಮಾಡಿ 2024ರ ಡಿಸೆಬರ್ 16ರಂದು ಸಮಿತಿ ತನ್ನ ವರದಿನ್ನು ಸಲ್ಲಿಸಿತ್ತು.
2017ರ ಜೂನ್ ತಿಂಗಳಲ್ಲಿ ಬಿಎಂಆರ್‌ಸಿಎಲ್ ಪ್ರಯಾಣ ದರ ನಿಗದಿಪಡಿಸಿದಾಗ ಮೆಟ್ರೋ ಪ್ರಥಮ ಹಂತದ 42.30 ಕಿ.ಮೀ ಮಾರ್ಗ ಮಾತ್ರ ಪೂರ್ಣಗೊಂಡಿತ್ತು. ಮೆಟ್ರೋ ಎರಡನೇ ಹಂತ ಭಾಗಶ: ಪೂರ್ಣಗೊಂಡ ನಂತರ ಈಗ ಮೆಟ್ರೋ ಮಾರ್ಗ 42.30 ಕಿ.ಮೀಟರ್ ಗೆ ವಿಸ್ತರಣೆ ಗೊಂಡಿದೆ. ಮೆಟ್ರೋ 2, 2ಎ, ಮತ್ತು 2ಬಿ ಮಾರ್ಗಗಳು (96.60 ಕಿ.ಮೀ.) 2026ರ ಡಿಸೆಂಬರ್ ತಿಂಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದ್ದು ಆಗ ಬೆಂಗಳೂರು ಮೆಟ್ರೋ ಮಾರ್ಗ 175,55 ಕಿ.ಮೀ.ಗೆ ವಿಸ್ತರಣೆಯಾಗಲಿದೆ.

ಬೆಂಗಳೂರು ಮೆಟ್ರೋ ರೈಲಿಗೆ ಸಂಬಂಧಿಸಿದ ಈ ಎಲ್ಲ ಅಂಶಗಳನ್ನು ಗಮನಕ್ಕೆ ತೆಗೆದುಕೊಂಡು ಚರ್ಚೆ ನಡೆಸಿದ ನಂತರ ಹತ್ತು ಅಧ್ಯಾಯಗಳಲ್ಲಿ ತನ್ನ ವರದಿ ನೀಡಿದೆ. ಸಮಿತಿ ದೇಶದ ಉಳಿದ ಮೆಟ್ರೋ ರೈಲಿನ ಪ್ರಯಾಣದರವನ್ನು ಅಧ್ಯಯನ ಮಾಡಿದೆ. ಸದ್ಯ ಬೆಂಗಳೂರು ಮೆಟ್ರೋ ಪ್ರಯಾಣ ದರ ಕನಿಷ್ಠ ರೂ.10 ಮತ್ತು ಗರಿಷ್ಠ ರೂ.60 ಆಗಿದೆ. ಮುಂಬೈ ಮೆಟ್ರೋ ರೈಲಿನ ಕನಿಷ್ಠ ಪ್ರಯಾಣದರ ರೂ.10 ಮತ್ತು ಗರಿಷ್ಠ ಪ್ರಯಾಣ ದರ ರೂ.80 ಆಗಿದೆ.

ದೆಹಲಿ ಮೆಟ್ರೋವನ್ನು ಹೊರತುಪಡಿಸಿ ಉಳಿದೆಲ್ಲ ರಾಜ್ಯಗಳಲ್ಲಿ ಮೊದಲ ಹಂತದ ಪ್ರಯಾಣದರವನ್ನು ಆಯಾ ರಾಜ್ಯಗಳ ಮೆಟ್ರೊ ನಿಗಮಗಳೇ ನಿಗದಿ ಪಡಿಸಿತ್ತು. ಈಗ ಪ್ರಯಾಣ ದರವನ್ನು ಕೇಂದ್ರ ಸರ್ಕಾರ ನೇಮಿಸುವ ಸಮಿತಿ ನಿಗದಿಪಡಿಸುತ್ತದೆ. ಮೆಟ್ರೋ ರೈಲ್ವೆ (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯಿದೆಯ ಸೆಕ್ಷನ್ 37ರ ಪ್ರಕಾರ ಪ್ರಯಾಣ ದರ ನಿಗದಿ ಸಮಿತಿ ನೀಡಿದ ವರದಿಯನ್ನು ಮೆಟ್ರೋ ರೈಲು ನಿಗಮಗಳು ( ಈ ಪ್ರಕರಣದಲ್ಲಿ ಬಿಎಂಆರ್ ಸಿಎಲ್ ) ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕಾಗಿದೆ.

Tags: DK Shivakumardk shivakumar karnatakadk shivakumar newsdk shivakumar siddaramaiahdk shivakumar vs siddaramaiahdk shivakumar vs siddaramaiah in karnatakaKarnatakakarnataka cm siddaramaiahKarnataka Governmentkarnataka newsKarnataka PoliticssiddaramaiahSiddaramaiah and DK Shivakumarsiddaramaiah frontrunner for karnataka cmsiddaramaiah karnataka cmsiddaramaiah on dk shivakumarsiddaramaiah vs dk shivakumar
Previous Post

ಸಾಮಾಜಿಕ ನ್ಯಾಯದ ಪ್ರಶ್ನೆ ಬಂದಾಗ ಸುಪ್ರೀಂಕೋರ್ಟ್ ನ ಕಾರ್ಯವೇನು?

Next Post

ಮಾರ್ಚ್ ನಲ್ಲಿ ಆರಂಭವಾಗಲಿದೆ “ಕರುನಾಡ ಕಣ್ಮಣಿ” ನಟ ಚರಣ್ ರಾಜ್ ನಿರ್ದೇಶನದ ನೂತನ ಚಿತ್ರ . ‌

Related Posts

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 
Top Story

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

by Chetan
July 11, 2025
0

ರಾಜ್ಯದಲ್ಲಿ ಸಿಎಂ ಪವರ್ ಶೇರಿಂಗ್ (Cm power sharing) ಹಗ್ಗ ಜಗ್ಗಾಟ ಜೋರಾಗಿದ್ದು, ಕಾಂಗ್ರೆಸ್ (Congress) ಪಾಳಯದಲ್ಲಿ ಕ್ಷಿಪ್ರ ಬೆಳವಣಿಗೆಗಳು ಗರಿಗೆದರಿವೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ...

Read moreDetails
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

July 11, 2025
ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

July 10, 2025

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025
Next Post
ಮಾರ್ಚ್ ನಲ್ಲಿ ಆರಂಭವಾಗಲಿದೆ “ಕರುನಾಡ ಕಣ್ಮಣಿ” ನಟ ಚರಣ್ ರಾಜ್ ನಿರ್ದೇಶನದ ನೂತನ ಚಿತ್ರ . ‌

ಮಾರ್ಚ್ ನಲ್ಲಿ ಆರಂಭವಾಗಲಿದೆ "ಕರುನಾಡ ಕಣ್ಮಣಿ" ನಟ ಚರಣ್ ರಾಜ್ ನಿರ್ದೇಶನದ ನೂತನ ಚಿತ್ರ . ‌

Recent News

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 
Top Story

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

by Chetan
July 11, 2025
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 
Top Story

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

by Chetan
July 11, 2025
ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು
Top Story

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

by ಪ್ರತಿಧ್ವನಿ
July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

July 11, 2025
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

July 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!