ಬೆಳಗಾವಿ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಥಗಿತಗೊಂಡಿದ್ದ ಕ್ರಿಕೆಟ್ ಪಂದ್ಯಾವಳಿಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಇಂದು ಸುವರ್ಣಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಮಹತ್ವ ನಿರ್ಧಾರ ಕೈಗೊಳ್ಳಲಾಗಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಳೆದ RCB ಫೈನಲ್ ಪಂದ್ಯದ ವೇಳೆ ನಡೆದಿದ್ದ ನೂಕು ನುಗ್ಗಲಿನಲ್ಲಿ 11 ಮಂದಿ ಮೃತಪಟ್ಟ ಹತ್ತಾರು ಜನ ಗಾಯಗೊಂಡಿದ್ದರು. ಇದಾದ ಬಳಿಕ ಈ ಕ್ರೀಡಾಂಗಣದಲ್ಲಿ ದೇಶಿಯ, ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿಗಳಿಗೆ ಅವಕಾಶ ನೀಡಿರಲಿಲ್ಲ. ಹೀಗಾಗಿ IPL ಮತ್ತು ವಿಶ್ವಕಪ್ ಪಂದ್ಯಾವಳಿಗಳು ಬೇರೆಡೆ ಸ್ಥಳಾಂತರಗೊಂಡಿದ್ದವು.
ಅನೇಕ ಇತಿಹಾಸ ಇರುವ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮ್ಯಾಚ್ ನಿಲ್ಲಿಸಿದ್ದು ಕ್ರಿಕೆಟ್ ಪ್ರೇಮಿಗಳಿಗೆ ಬೇಸರ ಉಂಟು ಮಾಡಿತ್ತು. ಇತ್ತೀಚೆಗೆ ಕೆಎಸ್ ಸಿಎ ಚುನಾವಣೆಯಲ್ಲಿ ಗೆದ್ದಿದ್ದ ವೆಂಕಟೇಶ್ ಪ್ರಸಾದ್ ಕೂಡ ಸಿಎಂ, ಡಿಸಿಎಂ ಭೇಟಿಯಾಗಿ ಈ ಬಗ್ಗೆ ಮನವಿ ಮಾಡಿದ್ದರು. ಈ ಮನವಿ ಬಗ್ಗೆ ಇಂದು ನಡೆದ ಸಂಪುಟ ಸಭೆಯಲ್ಲಿ ಚರ್ಚಿಸಿ ಕೆಲವು ಷರತ್ತು, ನ್ಯಾ.ಕುನ್ಹಾ ಆಯೋಗದ ಶಿಫಾರಸುಗಳನ್ನ ಪಾಲಿಸಿ, ಗೃಹ ಇಲಾಖೆಯ ಮೇಲುಸ್ತುವಾರಿಯಲ್ಲಿ ಕ್ರಿಕೆಟ್ ಪಂದ್ಯಕ್ಕೆ ಅವಕಾಶ ನೀಡಲಾಗಿದೆ.











