ಬೆಂಗಳೂರು: ಜಗದ್ಗುರು ಶ್ರೀ ಮಧ್ವಾಚಾರ್ಯರ ಜಯಂತಿಯನ್ನು (Sri Madhvacharya Jayanti) ಇನ್ನು ಮುಂದೆ ಪ್ರತಿ ವರ್ಷ ಅಕ್ಟೋಬರ್ 21ರಂದು (October 21) ರಾಜ್ಯಾದ್ಯಂತ ಅಧಿಕೃತವಾಗಿ ಆಚರಿಸಲು ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಕಲಬುರಗಿಯ ಜಿಲ್ಲಾ ಬ್ರಾಹ್ಮಣ ಸಂಘ ಹಾಗೂ ಶ್ರೀ ಸತ್ಯಾತ್ಮಸೇನ ವಿವಿಧೋದ್ದೇಶ ಸೇವಾ ಸಂಸ್ಥೆಯು ಶ್ರೀ ಮಧ್ವಾಚಾರ್ಯರ ಜಯಂತಿಯನ್ನು ರಾಜ್ಯಮಟ್ಟದಲ್ಲಿ ಸರ್ಕಾರವೇ ಅಧಿಕೃತವಾಗಿ ಆಚರಿಸಬೇಕೆಂದು ಮತ್ತು ಅವರ ತತ್ತ್ವ, ಚಿಂತನೆ, ಜೀವನ ಹಾಗೂ ಕೊಡುಗೆಗಳನ್ನು ಮುಂದಿನ ಪೀಳಿಗೆಗೆ ತಲುಪಿಸಲು ವಿಚಾರ ಸಂಕಿರಣ, ಉಪನ್ಯಾಸ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಮನವಿ ಮಾಡಿದ್ದವು. ಈ ಮನವಿಯನ್ನು ಪರಿಶೀಲಿಸಿದ ಸರ್ಕಾರವು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಪ್ರತಿ ವರ್ಷ ಅಕ್ಟೋಬರ್ 21ರಂದು ಶ್ರೀ ಮಧ್ವಾಚಾರ್ಯ ಜಯಂತಿಯನ್ನು ಆಚರಿಸಲು ಅಧಿಸೂಚನೆ ಹೊರಡಿಸಿದೆ.
ಈ ಜಯಂತಿಯ ಆಚರಣೆಗೆ ತಗಲುವ ಅಗತ್ಯ ವೆಚ್ಚವನ್ನು 2026-27ನೇ ಸಾಲಿನ ಮಹಾಪುರುಷರ ಜಯಂತಿಗಳ ಆಚರಣೆ ಲೆಕ್ಕಶೀರ್ಷಿಕೆಯಡಿ ಲಭ್ಯವಿರುವ ಅನುದಾನದಿಂದ ಭರಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಶಾಂತಲಾ ಎಂ. ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.
ಪಿಂಚಣಿ ಯೋಜನೆಗಳಿಂದ ಇಂದಿರಾ ಗಾಂಧಿ ಹೆಸರು ಕೈಬಿಟ್ಟ ಕೇಂದ್ರ ಸರ್ಕಾರ | Indira Gandhi







