
ರಾಜ್ಯ ಸರ್ಕಾರ ಎಸ್ಸಿ ಎಸ್ಟಿಗೆ ಮೀಸಲಿಟ್ಟಿರುವ ಹಣವನ್ನು ಚುನಾವಣೆಗಾಗಿ ಜಾರಿಗೆ ತಂದ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಂಡು ಎಸ್ಸಿ ಎಸ್ಟಿ ಸಮುದಾಯಗಳಿಗೆ ಮೋಸ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಶಿಗ್ಗಾವಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ದಿವಾಳಿ ಆಗಿರೋದು ಪ್ರತಿ ಹೆಜ್ಜೆಯಲ್ಲಿ ಪ್ರದರ್ಶನ ಮಾಡುತ್ತಿದೆ. ಪೆಟ್ರೋಲ್ ಡೀಸೆಲ್ ದರ ಹೆಚ್ಚಳ ಮಾಡುವುದರಿಂದ ಹಿಡಿದು ಎಲ್ಲಾ ದರ ಹೆಚ್ಚಳ ಮಾಡಿದ್ದಾರೆ
ಗ್ಯಾರಂಟಿ ಯೋಜನೆಗಳಿಗೆ ಅನುದಾನವನ್ನು ವರ್ಗಾಯಿಸುತ್ತಿದ್ದಾರೆ. ಎಸ್ ಸಿ ಎಸ್ ಟಿ ಸಮುದಾಯಗಳಿಗೆ 14000 ಕೋಟಿ ರೂಪಾಯಿ ಅನುದಾನ ಬಳಕೆ ಆಗಬೇಕಿತ್ತು. ಎಲ್ಲಾ ಹಣ ಗ್ಯಾರಂಟಿಗಳಿಗೆ ಹೋಗುತ್ತಿದೆ. ಎಸ್ ಸಿ ಎಸ್ ಟಿ ಜನಕ್ಕೂ ಗ್ಯಾರಂಟಿ ಮೂಲಕ ಅನುಕೂಲ ಮಾಡುತ್ತಿದ್ದೇವೆ ಎಂದು ಕಾಂಗ್ರೆಸ್ ನವರು ಹೇಳುತ್ತಾರೆ. ಆದರೆ, ಕಾನೂನಿನಲ್ಲಿ ಅನುದಾನ ಎಸ್ ಸಿ ಎಸ್ ಟಿ ಗಳಿಗೆ ಹೋಗಬೇಕು ಅಂತ ಇದೆ. ಆ ಕಾನೂನು ಉಲ್ಲಂಘನೆ ಆಗಿದೆ ಎಸ್ ಸಿ ಎಸ್ ಟಿ ಗಳಿಗೆ ಮೀಸಲಿಟ್ಟ ಹಣ ಎಸ್ ಸಿ ಎಸ್ ಟಿ ಗಳಿಗೇ ಬಳಸುತ್ತೇವೆ ಅಂತ ಚುನಾವಣೆ ಮೊದಲು ಹೇಳಿದ್ದರು. ಕಾಂಗ್ರೆಸ್ ನವರು ಓಟಿಗಾಗಿ ಮಾಡಿದ ಯೋಜನೆಗಳಿಗೆ ಎಸ್ ಸಿ ಎಸ್ ಟಿ ಹಣ ಬಳಸುತ್ರಿದ್ದಾರೆ. ಎಸ್ ಸಿ ಎಸ್ ಟಿ ಗಳಿಗೆ ಸರ್ಕಾರ ಮೋಸ ಮಾಡುತ್ತಿದೆ. ಸರ್ಕಾರ ಸುಭದ್ರವಾಗಿದ್ದರೆ ಅವರ ಹಣಕ್ಕೆ ಯಾಕೆ ಕೈ ಹಾಕಿದ್ದಾರೆ. ವಾಲ್ಮೀಕಿ ನಿಗಮದ ಹಣ ಕೂಡಾ ಲೂಟಿ ಮಾಡಿದ್ದಾರೆ. ಎಸ್ ಸಿ ಎಸ್ ಟಿ , ಒಬಿಸಿ ಜನರಿಗೆ ರಾಜ್ಯ ಸರ್ಕಾರ ಸರ್ಕಾರ ದ್ರೋಹ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.





