ರಾಜ್ಯದಲ್ಲಿ ಜನಾಕ್ರೋಶದ ನಡುವೆ ವೀಕೆಂಡ್ ಕರ್ಫ್ಯೂ ತೆರವು ಮಾಡಲು ಸರ್ಕಾರ ನಿರ್ಧರಿಸಿದೆ. ಈ ಕುರಿತು ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಅವರ ಗೃಹ ಕಚೇರಿ ಕೃಷ್ಣಾದಲ್ಲಿ ತಜ್ಞರು ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳ ಜೊತೆ ನಡೆದ ಸಭೆಯಲ್ಲಿ ವೀಕೆಂಡ್ ಕರ್ಪ್ಯೂವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ ಎಂದು ಸುದ್ದಿ ಮೂಲಗಳು ತಿಳಿಸಿವೆ. ಆದರೆ, ನೈಟ್ ಕರ್ಪ್ಯೂವನ್ನು ಮುಂದುವರೆಸಲು ನಿರ್ಧರಿಸಿದೆ ಇನ್ನಷ್ಟೇ ಅಧಿಕೃತವಾಗಿ ಘೋಷಣೆಯಾಗಬೇಕಿದೆ.
ಬೆಂಗಳೂರಿನಲ್ಲಿ ಹೋಟೆಲ್ನಲ್ಲಿ 50-50ಗೆ ಅವಕಾಶ ಯೂರೋಪ್ ರಾಷ್ಟ್ರಗಳಲ್ಲಿ ಯಾವುದೇ ನಿರ್ಬಂಧಗಳಿಲ್ಲ ಕೋವಿಡ್ ಮೂರನೇ ಅಲೆಯ ವ್ಯಾಪಕವಾಗಿ ಹರಡಿದರೂ ತೀವ್ರತೆ ಕಡಿಮೆ ಇದೆ. ಆಸ್ಪತ್ರೆಗಳಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನ ಮಾಡಿಕೊಳ್ಳೋಣ ಒಂದು ವೇಳೆ ಆಸ್ಪತ್ರೆ ಸೇರುವವರ ಸಂಖ್ಯೆ ಹೆಚ್ಚಾದರೆ, ಮತ್ತೆ ಬಿಗಿಕ್ರಮ ಮುಂದುವರಿಸೋಣ. ಸಧ್ಯ ವೀಕೆಂಡ್ ಕರ್ಫ್ಯೂ ತೆರವು ಮಾಡೋಣ ಅಂತಾ ಕೆಲ ಸಚಿವರಿಂದ ಸಲಹೆ ಸಚಿವರ ಸಲಹೆಗೆ ಸಿಎಂರಿಂದಲೂ ಸಹಮತ ವ್ಯಕ್ತ
ಸಭೆಯಲ್ಲಿ ಸಚಿವರಾದ ಅರಗ ಜ್ಞಾನೇಂದ್ರ, ಡಾ.ಕೆ.ಸುಧಾಕರ್, ಆರ್,ಅಶೋಕ್, ಗೋವಿಂದ್ ಕಾರಜೋಳ ಹಾಗೂ ಬಿ.ಸಿ.ನಾಗೇಶ್ ಭಾಗವಹಿಸಿದ್ದಾರೆ. WHOನ ಪ್ರತಿನಿಧಿ, ತಾಂತ್ರಿಕ ಸಲಹಾ ಸಮಿತಿ ಮುಖ್ಯಸ್ಥ ಡಾ.ಸುದರ್ಶನ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಸಭೆಯ ಬಳಿಕ ಮಾತನಡಿದ ಕಂದಾಯ ಸಚಿವ ಆರ್.ಅಶೋಕ್ ಮುಖ್ಯಮಂತ್ರಿಗಳು ಹಾಗೂ ತಜ್ಞರ ಜೊತೆಗೆ ಸುಧೀರ್ಘವಾಗಿ ಸಮಾಲೋಚನೆ ನಡೆಸಿದ ನಂತರ ವೀಕೆಂಡ್ ಕರ್ಪ್ಯೂವನ್ನು ಹಿಂಪಡೆಯಲು ಸರ್ಕಾ ನಿರ್ಧರಿಸಿದೆ. ಆದರೆ. ನೈಟ್ ಕರ್ಪ್ಯೂವನ್ನು ಮುಂದುವರೆಸಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.
ಮುಂದುವರೆದು, ಸದ್ಯ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಕಡಿಮೆ ಇದ್ದು ಮುಂಬರುವ ದಿನಗಳಲ್ಲಿ ಇದು ಹೆಚ್ಚಾದರೆ ಕಠಿಣ ನಿಯಮಗಳನ್ನು ಮುಂದುವರೆಸಲಾಗುವುದು ಎಂದು ಸಭೆಯ ಬಳಿಕ ತಿಳಿಸಿದ್ದಾರೆ.
ಬಾರ್ಗಳು, ಹೋಟೆಲ್ಗಳು ಮತ್ತು ರೆಸ್ಟೋರೆಂಟ್ಗಳು ಶೇಕಡಾ 50 ರಷ್ಟು ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ. ಬೆಂಗಳೂರು ಹೊರತುಪಡಿಸಿ, ರಾಜ್ಯದಾದ್ಯಂತ ಶಾಲೆಗಳು ಆಫ್ಲೈನ್ ತರಗತಿಗಳನ್ನು ಪುನರಾರಂಭಿಸಲು ಅನುಮತಿಸಲಾಗಿದೆ.